ಹಿರಿಯ ಶಾಸಕರಾದ ಶಿವರಾಮ್ ಹೆಬ್ಬಾರ್ ಮತ್ತು ಎಸ್.ಟಿ ಸೋಮಶೇಖರ್ ಅವರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ.
ಪಕ್ಷದ ಕೇಂದ್ರ ಶಿಸ್ತು ಸಮಿತಿ ಕಳೆದ ಮಾರ್ಚ್ 25ರಂದು ನೀಡಲಾದ ಶೋಕಾಸ್ ನೋಟಿಸ್‌ಗೆ ಈ ಇಬ್ಬರು ಶಾಸಕರು ನೀಡಿರುವ ಉತ್ತರ ತೃಪ್ತಿಕರವಾಗಿಲ್ಲ ಮತ್ತು ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಷದ ಕೇಂದ್ರ ಶಿಸ್ತು ಸಮಿತಿ ಉಚ್ಚಾಟನಾ ಪತ್ರದಲ್ಲಿ ಉಲ್ಲೇಖಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕರಾಗಿರುವ ಶಿವರಾಮ ಹೆಬ್ಬಾರ್ ಮತ್ತು ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರನ್ನು ಪಕ್ಷದ ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.
ಎಸ್.ಟಿ ಸೋಮಶೇಖರ್ ಮತ್ತು ಶಿವರಾಬ್ ಹೆಬ್ಬಾರ್ ಏನು ಮಾಡಿದ್ದಾರೆ ಎಂಬುವುದು ಅವರಿಗೆ ಗೊತ್ತಿದೆ. ನಮ್ಮ ಕೇಂದ್ರದ ನಾಯಕತ್ವಕ್ಕೂ ಗೊತ್ತಿದೆ. ಇದರ ಬಗ್ಗೆ ಡಿ.ಕೆ ಶಿವಕುಮಾರ್ ಅವರು ನೋವು ಪಡುವ ಅಗತ್ಯ ಇಲ್ಲ. ಇದು ನಮ್ಮ ಪಕ್ಷದ ತೀರ್ಮಾನ ಎಂದಿದ್ದಾರೆ.
ಕೋವಿಡ್ | ರಾಜ್ಯದಲ್ಲಿ ಆತಂಕಪಡುವ ಪರಿಸ್ಥಿತಿಯಿಲ್ಲ: ಸಿಎಂ ಸಿದ್ದರಾಮಯ್ಯ


