Homeಕರ್ನಾಟಕನಾಪತ್ತೆಯಾಗಿದ್ದ ಎಂಎಲ್​ಸಿ ಸಿಪಿ ಯೋಗೇಶ್ವರ್ ಬಾವ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಎಂಎಲ್​ಸಿ ಸಿಪಿ ಯೋಗೇಶ್ವರ್ ಬಾವ ಶವವಾಗಿ ಪತ್ತೆ

- Advertisement -
- Advertisement -

ಡಿಸೆಂಬರ್‌ 1ರಂದು ನಾಪತ್ತೆಯಾಗಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರು ಚಾಮರಾಜನಗರ ಜಿಲ್ಲೆಯ ರಾಮಾಪುರ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ವಾಸವಾಗಿದ್ದ ಮಹದೇವಯ್ಯ ಡಿಸೆಂಬರ್ 1ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಕುಟುಂಬಸ್ಥರು ತೋಟದ ಮನೆ ಬಳಿ ಹುಡುಕಾಡಿದಾಗ ಮನೆಯ ಬೀರುಗಳ ಬಾಗಿಲು ತೆರದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಆದರೆ, ಮಹದೇವಯ್ಯ ಅವರು ಎಲ್ಲಿಗೆ ಹೋಗಿದ್ದರು ಎಂಬ ಮಾಹಿತಿ ತಿಳಿದಿರಲಿಲ್ಲ. ಈ ಬಗ್ಗೆ ದೂರು ದಾಖಲಿಸಿಕೊಂಡ ಚಣ್ಣಪಟ್ಟಣ ಪೊಲೀಸರು, ಹುಡುಕಾಟ ಆರಂಭಿಸಿದ್ದರು. ಈ ವೇಳೆ ಮಹದೇಶ್ವರ ಬೆಟ್ಟದಲ್ಲಿ ಅವರ ಮೊಬೈಲ್ ಲೊಕೇಶನ್ ಪತ್ತೆಯಾಗಿತ್ತು.

ಪೊಲೀಸರು ಹುಡುಕಾಟ ತೀವ್ರಗೊಳಿಸಿದಾಗ ಭಾನುವಾರ ಹನೂರು ತಾಲೂಕಿನ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಮಹಾದೇವಯ್ಯ ಅವರ ಕಾರು ಪತ್ತೆಯಾಗಿತ್ತು. ಸ್ಥಳಕ್ಕೆ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಾರಿನ ಗಾಜು ಒಡೆದಿತ್ತು. ರಕ್ತದ ಕಲೆಗಳು ಕಂಡು ಬಂದಿತ್ತು.

ಕಾರು ಪತ್ತೆಯಾಗುತ್ತಿದ್ದಂತೆ ಪೊಲೀಸರು ಅರಣ್ಯ ಇಲಾಖೆ ಸಿಬ್ಬಂದಿ ಜೊತೆ ಜಂಟಿ ಹುಡುಕಾಟ ನಡೆಸಿದ್ದರು. ಇಂದು ಸಂಜೆ (ಡಿ.4) ರಾಮಾಪುರದ ಅರಣ್ಯ ಪ್ರದೇಶದಲ್ಲಿ ಮಹದೇವಯ್ಯ ಅವರ ಶವ ಪತ್ತೆಯಾಗಿದೆ.

ಮಹದೇವಯ್ಯ ಅವರನ್ನು ಬೆಡ್​​ಶೀಟ್ ಹೊದಿಸಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ವರದಿಗಳು ಹೇಳಿವೆ. ಕೊಲೆಯಾದ ಸ್ಥಳದಿಂದ 6 ಕಿಲೋ ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.

ಜಮೀನು ವಿಚಾರಕ್ಕೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಶಂಕೆ : ಮೃತ ಮಹದೇವಯ್ಯ ಅವರು ಬಿಡದಿ, ಬೆಂಗಳೂರು, ಚನ್ನಪಟ್ಟಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಮಾಡುತ್ತಿದ್ದರು. ಜಮೀನು ವಿಚಾರವಾಗಿ ಅವರು ಕೋರ್ಟ್ ಗೆ ಹೋಗಿದ್ದರು. ಕೋಟ್ಯಾಂತರ ಮೌಲ್ಯದ ಜಮೀನು ಕೈತಪ್ಪುವ ಆತಂಕದಲ್ಲಿ ಕೆಲವು ಕಿಡಿಗೇಡಿಗಳು ಮಹದೇವಯ್ಯ ಮಾಡಿಸಿದ್ದಾರಾ? ಎಂಬ ಅನುಮಾನ ವ್ಯಕ್ತವಾಗಿದೆ. ಸುಪಾರಿ ಕೊಟ್ಟು ಹತ್ಯೆ ಮಾಡಿಸಿರುವ ಶಂಕೆಯೂ ಇದೆ. ಪೊಲೀಸರು 4 ತಂಡಗಳನ್ನು ಮಾಡಿಕೊಂಡು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ : ಕಾರು ಬೈಕ್ ಢಿಕ್ಕಿ: ಭವಾನಿ ರೇವಣ್ಣ ಅವರ ದರ್ಪಕ್ಕೆ ಸಾರ್ವಜನಿಕರ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...