Homeಮುಖಪುಟಪರಿಷತ್ ಚುನಾವಣೆ: ಕಾಂಗ್ರೆಸ್, ಬಿಜೆಪಿ ತಲಾ ಎರಡು ಸ್ಥಾನಗಳಲ್ಲಿ ಗೆಲುವು- ಜೆಡಿಎಸ್‌ಗೆ ನಿರಾಸೆ

ಪರಿಷತ್ ಚುನಾವಣೆ: ಕಾಂಗ್ರೆಸ್, ಬಿಜೆಪಿ ತಲಾ ಎರಡು ಸ್ಥಾನಗಳಲ್ಲಿ ಗೆಲುವು- ಜೆಡಿಎಸ್‌ಗೆ ನಿರಾಸೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಕೈಹಿಡಿಯಲಿದ್ದಾರೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ - ಸಿದ್ದರಾಮಯ್ಯ

- Advertisement -
- Advertisement -

4 ಸ್ಥಾನಗಳಿಗೆ ನಡೆದಿದ್ದ ವಿಧಾನ ಪರಿಷತ್‌ನ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್, ಬಿಜೆಪಿ ತಲಾ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಜೆಡಿಎಸ್ ಪಕ್ಷ ಒಂದನ್ನೂ ಗೆಲ್ಲದೆ ನಿರಾಸೆ ಅನುಭವಿಸಿದೆ.

ಚುನಾವಣೆಗೂ ಮೊದಲು ಬಿಜೆಪಿ ಎರಡು ಮತ್ತು ಜೆಡಿಎಸ್ ಎರಡು ಸ್ಥಾನಗಳನ್ನು ಹೊಂದಿತ್ತು. ಬಸವರಾಜ ಹೊರಟ್ಟಿಯವರು ಜೆಡಿಎಸ್ ತ್ಯಜಿಸಿ ಬಿಜೆಪಿಯಿಂದ ಮರು ಆಯ್ಕೆಯಾದರೆ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮುಂಚೆ ಗೆದ್ದಿದ್ದ ಜೆಡಿಎಸ್ ಸೋತು ಆ ಸ್ಥಾನ ಸಹ ಕಳೆದುಕೊಂಡಿದೆ. ಅಲ್ಲಿಗೆ ಬಿಜೆಪಿ ತನ್ನ ಎರಡು ಸ್ಥಾನ ಉಳಿಸಿಕೊಂಡರೆ ಕಾಂಗ್ರೆಸ್ ಎರಡು ಸ್ಥಾನಗಳನ್ನು ಗಳಿಸಿಕೊಂಡಿದೆ.

ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ ಮಾದೇಗೌಡ 12,205 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್ ಮತ್ತು ಜೆಡಿಎಸ್ ಅಭ್ಯರ್ಥಿ ಎಚ್.ಕೆ ರಾಮು ಸೋಲು ಅನುಭವಿಸಿದ್ದಾರೆ.

ಕಣದಲ್ಲಿ ಒಟ್ಟು 19 ಸ್ಪರ್ಧಿಗಳು ಇದ್ದರು. ಠೇವಣಿ ಕಳೆದುಕೊಂಡ 13 ಮಂದಿಯನ್ನು ಎಲಿಮಿನೇಟ್ ಮಾಡಲಾಗಿದ್ದು, ಉಳಿದವರ ಎರಡನೇ ಪ್ರಾಶಸ್ತ್ಯದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ಘೋಷಿಸಲಾಯಿತು.

ಇನ್ನೊಂದೆಡೆ ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಗೆಲುವು ಸಾಧಿಸಿದ್ದಾರೆ. ಅವರು 11,460 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ 6,405 ಮತಗಳಿಗೆ ತೃಪ್ತಿಪಟ್ಟುಕೊಂಡರು. ಹುಕ್ಕೇರಿ 5,045 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದರು.

ಪಶ್ಚಿಮ ಶಿಕ್ಷಕರ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಯವರು 7500 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ವಾಯುವ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ 34,693 ಮತಗಳ ದಾಖಲೆಯ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಲ್ಲಿಗೆ ಕಾಂಗ್ರೆಸ್ ಎರಡು ಸ್ಥಾನ ಮತ್ತು ಬಿಜೆಪಿ ಎರಡು ಸ್ಥಾನ ತನ್ನದಾಗಿಸಿಕೊಂಡಿವೆ.

ಫಲಿತಾಂಶದ ಕುರಿತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, “ಈ ಫಲಿತಾಂಶ ನಾಡಿನ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪರವಾಗಿದ್ದಾರೆ ಎಂಬುದನ್ನು ಸ್ಪಷ್ಟಪಡಿಸುತ್ತಿದೆ. ಚುನಾವಣೆ ನಡೆದ ನಾಲ್ಕೂ ಕ್ಷೇತ್ರಗಳಲ್ಲಿ ಈ ಹಿಂದೆ ಕಾಂಗ್ರೆಸ್ ನ ಒಬ್ಬ ಅಭ್ಯರ್ಥಿಯೂ ಗೆದ್ದಿರಲಿಲ್ಲ, ಆದರೆ ಈ ಬಾರಿ ಎರಡು ಸ್ಥಾನಗಳನ್ನು ಗೆಲ್ಲುವಲ್ಲಿ ಪಕ್ಷ ಯಶಸ್ವಿಯಾಗಿದೆ. ಪಕ್ಷದ ಗೆಲುವಿಗೆ ನಮ್ಮ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರ ಸಂಘಟಿತ ಪ್ರಯತ್ನ ಕಾರಣ. ಬಿಜೆಪಿ ಸರ್ಕಾರದ ಧರ್ಮರಾಜಕಾರಣ, ಕೋಮುವಾದ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ನಡವಳಿಕೆಗಳ ವಿರುದ್ಧ ನಾಡಿನ ಜನ ಜಾಗೃತರಾಗಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಕೈಹಿಡಿಯಲಿದ್ದಾರೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ” ಎಂದಿದ್ದಾರೆ.

ಇದನ್ನೂ ಓದಿ; ಅಗ್ನಿಪಥ್‌‌‌‌‌ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...