Homeಮುಖಪುಟಮಹಾರಾಷ್ಟ್ರ ಪರಿಷತ್ ಚುನಾವಣೆ: ಮಹಾವಿಕಾಸ್ ಅಘಾಡಿ ಮತ್ತು ಬಿಜೆಪಿ ನಡುವೆ ಮತ್ತೆ ಫೈಟ್

ಮಹಾರಾಷ್ಟ್ರ ಪರಿಷತ್ ಚುನಾವಣೆ: ಮಹಾವಿಕಾಸ್ ಅಘಾಡಿ ಮತ್ತು ಬಿಜೆಪಿ ನಡುವೆ ಮತ್ತೆ ಫೈಟ್

- Advertisement -
- Advertisement -

ಮಹಾರಾಷ್ಟ್ರದ ರಾಜ್ಯಸಭೆ ಚುನಾವಣೆಯಲ್ಲಿ ತೀವ್ರ ಪೈಪೋಟಿ ನಡೆದ ನಂತರ ಇಂದು ನಡೆಯುವ ವಿಧಾನಸಭೆಯಿಂದ ಪರಿಷತ್ ಆಯ್ಕೆಯಾಗುವ ಚುನಾವಣೆಯಲ್ಲಿ ಮತ್ತೊಮ್ಮೆ ಮಹಾವಿಕಾಸ್ ಅಘಾಡಿ ಮತ್ತು ಬಿಜೆಪಿ ನಡುವೆ ಮತ್ತೆ ಫೈಟ್ ನಡೆಯುತ್ತಿದೆ. 10 ಸ್ಥಾನಗಳಿಗೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ತೀವ್ರ ಕಸರತ್ತಿಗೆ ಕಾರಣವಾಗಿದೆ.

ಮಹಾವಿಕಾಸ್ ಅಘಾಡಿಯ ವತಿಯಿಂದ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ತಲಾ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಮತ್ತೊಂದೆಡೆ ಬಿಜೆಪಿ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು 11 ಜನರಲ್ಲಿ 9 ಅಭ್ಯರ್ಥಿಗಳು ಸುಲಭವಾಗಿ ಆಯ್ಕೆಯಾಗಲಿದ್ದು, ಉಳಿದ ಒಂದು ಸ್ಥಾನಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯ ನಡುವೆ ಪೈಪೋಟಿ ನಡೆಯುತ್ತಿದೆ.

ಕಾಂಗ್ರೆಸ್‌ನ ಮುಂಬೈ ಅಧ್ಯಕ್ಷ ಭಾಯ್ ಜಗ್ಪಪ್ ಮತ್ತು ಬಿಜೆಪಿಯ ಪ್ರಸಾದ್ ಲಾಡ್ 10 ನೇ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಆಯ್ಕೆಯಾಗಲು ತೀವ್ರ ಕಸರತ್ತು ನಡೆಸಿದ್ದಾರೆ.

ಇಂದಿನ ವಿಧಾನಪರಿಷತ್ ಚುನಾವಣೆಯಲ್ಲಿ ಆಯ್ಕೆಯಾಗಲು ಪ್ರತಿ ಅಭ್ಯರ್ಥಿಯು ವಿಧಾನ ಸಭೆಯ 26 ಅಭ್ಯರ್ಥಿಗಳ ಮತ ಪಡೆಯಬೇಕು. ಮಹಾರಾಷ್ಟ್ರ ವಿಧಾನಸಭೆಯಲ್ಲಿ 29  ಪಕ್ಷೇತರ ಅಭ್ಯರ್ಥಿಗಳು ಇರುವುದರಿಂದ ಮತಗಳು ಹಂಚಿಹೋಗುವ ಸಾಧ್ಯತೆಯಿದ್ದು ನೇರಾ ನೇರಾ ಪೈಪೋಟಿ ಏರ್ಪಟ್ಟಿದೆ.

106 ಸದಸ್ಯ ಬಲ ಹೊಂದಿರುವ ಬಿಜೆಪಿ 4 ಅಭ್ಯರ್ಥಿಗಳನ್ನು ಸುಲಭವಾಗಿ ಆಯ್ಕೆ ಮಾಡಬಹುದು. ಆದರೆ 5ನೇ ಅಭ್ಯರ್ಥಿಯ ಗೆಲುವಿಗಾಗಿ ಪಕ್ಷೇತರರು ಮತ್ತು ಇತರ ಪಕ್ಷಗಳ ಶಾಸಕರ ಮತಗಳ ಮೇಲೆ ಕಣ್ಣಿಟ್ಟಿದೆ. ಇತ್ತೀಚಿಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿಯೂ ಅದು ತನ್ನ ಮೂರನೇ ಅಭ್ಯರ್ಥಿಯನ್ನು ಹಾಗೆ ಗೆಲ್ಲಿಸಿಕೊಂಡ ಹುಮ್ಮಸ್ಸಿನಲ್ಲಿದೆ.

ಆಡಳಿತರೂಢ ಮಹಾವಿಕಾಸ್ ಅಘಾಡಿಯಲ್ಲಿ ಶಿವಸೇನೆ ಪಕ್ಷವು 55 ಶಾಸಕರನ್ನು ಹೊಂದಿದ್ದು ತನ್ನ ಇಬ್ಬರು ಅಭ್ಯರ್ಥಿಗಳನ್ನು ಸುಲಭವಾಗಿ ಗೆಲ್ಲಿಸಿಕೊಳ್ಳಲಿದೆ. ಆ ನಂತರವು ಹೆಚ್ಚುವರಿಯಾಗಿ 3 ಶಾಸಕರನ್ನು ಹೊಂದಿದೆ. ಎನ್‌ಸಿಪಿ ಸಹ 51 ಸದಸ್ಯ ಬಲವನ್ನು ಹೊಂದಿದ್ದು ಇನ್ನೊಂದು ಶಿವಸೇನೆಯ ಮತದೊಂದಿಗೆ ತನ್ನ ಇಬ್ಬರೂ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ವಿಶ್ವಾಸ ಹೊಂದಿದೆ. ಆದರೆ ಕಾಂಗ್ರೆಸ್ ಕೇವಲ 44 ಸದಸ್ಯ ಬಲವನ್ನು ಹೊಂದಿದೆ. ಮೊದಲನೇ ಅಭ್ಯರ್ಥಿ ಸುಲಭವಾಗಿ ಜಯಸಿದರೆ ಎರಡನೇ ಅಭ್ಯರ್ಥಿಯ ಗೆಲುವಿಗಾಗಿ ಮೊದಲ ಪ್ರಶಾಸ್ತ್ಯದ 8 ಮತಗಳ ಕೊರತೆ ಬಿದ್ದಿದೆ. ಮಿತ್ರ ಪಕ್ಷ ಶಿವಸೇನೆಯ ಬಳಿ 1 ಹೆಚ್ಚುವರಿ ಮತವಿದ್ದರೆ ಇನ್ನೂ 7 ಮತಗಳನ್ನು ಪಕ್ಷೇತರರಿಂದ ನಿರೀಕ್ಷೆ ಮಾಡುತ್ತಿದೆ.

ಇದನ್ನೂ ಓದಿ: ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

0
ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಜಯಂತ್ ಸಿನ್ಹಾ ಮತದಾನ ಮಾಡಲು ವಿಫಲರಾದ ಹಿನ್ನೆಲೆಯಲ್ಲಿ ಬಿಜೆಪಿ ಅವರ ವಿರುದ್ಧ ಕ್ರಮ ಕೈಗೊಂಡಿದ್ದು, ಎರಡು ದಿನಗಳಲ್ಲಿ ಉತ್ತರ ನೀಡುವಂತೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಜಾರ್ಖಂಡ್‌ನ...