ರಾಜ್ಯದ 25 ಸ್ಥಾನಗಳಿಗೆ ನಡೆದಿದ್ದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 02 ಮತ್ತು ಪಕ್ಷೇತರ 01 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.
ಗೆಲುವು ಕಂಡಿರುವ ಮತ್ತು ಮುನ್ನಡೆ ಸಾಧಿಸಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.
ಬೆಂಗಳೂರು ನಗರ: ಎಚ್.ಎಸ್ ಗೋಪಿನಾಥ್ ಗೆಲುವು
ಉತ್ತರ ಕನ್ನಡ: ಗಣಪತಿ ಉಳ್ವೇಕರ್ ಗೆಲುವು
ಕಲಬುರಗಿ: ಬಿಜೆಪಿಯ ಬಿ.ಜಿ ಪಾಟೀಲ್ ಗೆಲುವು
ಬಳ್ಳಾರಿ: ವೈಎಂ ಸತೀಶ್ ಗೆಲುವು
ಚಿಕ್ಕಮಗಳೂರು: ಬಿಜೆಪಿಯ ಪ್ರಾಣೇಶ್‌ರವರು 06 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ದಕ್ಷಿಣ ಕನ್ನಡ 1: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ ಗೆಲುವು
ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಡಿ.ಎಸ್ ಅರುಣ್ ಗೆಲವು ಸಾಧಿಸಿದ್ದಾರೆ.
ಧಾರವಾಡ 2: ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಮುನ್ನಡೆ ಸಾಧಿಸಿದ್ದಾರೆ.
ಚಿತ್ರದುರ್ಗ: ಕೆ.ಎಸ್ ನವೀನ್ ಮುನ್ನಡೆ
ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪರವರು ಕಾಂಗ್ರೆಸ್ ಅಭ್ಯರ್ಥಿ ಎದುರು ಜಯ ಸಾಧಿಸಿದ್ದಾರೆ.
ವಿಜಯಪುರ-ಭಾಗಲಕೋಟೆ 1: ಪಿ.ಎಚ್ ಪೂಜಾರ ಗೆಲುವು
ಕಾಂಗ್ರೆಸ್
ಗೆಲುವು ಕಂಡಿರುವ ಮತ್ತು ಮುನ್ನಡೆ ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.
ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಬಿ ಪಾಟೀಲ್ ಬಿಜೆಪಿ ಎದುರು ಜಯಗಳಿಸಿದ್ದಾರೆ.
ವಿಜಯಪುರ-ಭಾಗಲಕೋಟೆ 2: ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಗೆಲುವು
ಮೈಸೂರು ಚಾಮರಾಜನಗರ 1: ಡಾ.ಡಿ ತಿಮ್ಮಯ್ಯ ಮುನ್ನಡೆ
ಕೋಲಾರ: ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಕುಮಾರ್ ಗೆಲುವು ಸಾಧಿಸಿದ್ದಾರೆ.
ಧಾರವಾಡ 1: ಕಾಂಗ್ರೇಸ್ ಅಭ್ಯರ್ಥಿ ಸಲೀಂ ಅಹ್ಮದ್ ಗೆಲುವು ಸಾಧಿಸಿದ್ದಾರೆ.
ದಕ್ಷಿಣ ಕನ್ನಡ 2: ಕಾಂಗ್ರೆಸ್‌ನ ಮಂಜುನಾಥ್ ಭಂಡಾರಿ ಗೆಲುವು ಸಾಧಿಸಿದ್ದಾರೆ.
ಮಂಡ್ಯ: ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.
ಬೆಳಗಾವಿ: ಕಾಂಗ್ರೆಸ್‌ನ ಚನ್ನರಾಜ ಹಟ್ಟಿಹೊಳಿ ಮುನ್ನಡೆ ಸಾಧಿಸಿದ್ದಾರೆ.
ತುಮಕೂರು: ಆರ್ ರಾಜೇಂದ್ರ ಗೆಲುವು
ರಾಯಚೂರು: ಕಾಂಗ್ರೆಸ್ ಮುನ್ನಡೆ
ಜೆಡಿಎಸ್
ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ.
ಮೈಸೂರು ಚಾಮರಾಜನಗರ 2: ಜೆಡಿಎಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.
ಬೆಳಗಾವಿಯಲ್ಲಿ ಎರಡನೇ ಸ್ಥಾನಕ್ಕೆ ಲಖನ್ ಜಾರಕಿಹೊಳಿ ಮುನ್ನಡೆ ಸಾಧಿಸಿದ್ದಾರೆ.
ಕರ್ನಾಟಕ ವಿಧಾನ ಪರಿಷತ್‌ನ ಒಟ್ಟು ಸದಸ್ಯರ ಸಂಖ್ಯೆ 75. ಪರಿಷತ್ತಿನ ಒಟ್ಟು ಸದಸ್ಯರಲ್ಲಿ ಮೂರನೇ ಒಂದರಷ್ಟು ಸದಸ್ಯರನ್ನು ಇತರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಗ್ರಾಮ ಸಭೆ, ಗ್ರಾಮ ಪಂಚಾಯಿತಿ, ಪಂಚಾಯಿತಿ ಸಮಿತಿಗಳು ಹಾಗು ಜಿಲ್ಲಾ ಪರಿಷತ್ತುಗಳ ಸದಸ್ಯರು ಆಯ್ಕೆ ಮಾಡುತ್ತಾರೆ.
ಇನ್ನು ಮೂರನೇ ಒಂದರಷ್ಟು ಸದಸ್ಯರನ್ನು ವಿಧಾನ ಸಭಾ ಸದಸ್ಯರು ಆಯ್ಕೆ ಮಾಡುತ್ತಾರೆ. ಪರಿಷತ್‌ನ ಒಟ್ಟು ಸದಸ್ಯರಲ್ಲಿ ಆರನೇ ಒಂದರಷ್ಟು ಸದಸ್ಯರು ರಾಜ್ಯಪಾಲರಿಂದ ನೇರವಾಗಿ ನೇಮಕವಾಗುತ್ತಾರೆ. ಸಾಹಿತ್ಯ, ವಿಜ್ಞಾನ, ಕಲೆ, ಸಮಾಜ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ರಾಜ್ಯಪಾಲರು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುತ್ತಾರೆ. ಉಳಿದ ಆರನೇ ಒಂದು ಭಾಗದಷ್ಟು ಸದಸ್ಯರನ್ನು ಪದವೀಧರರು ಮತ್ತು ಶಿಕ್ಷಕರು ಆಯ್ಕೆ ಮಾಡುತ್ತಾರೆ.
ಭಾರತದಲ್ಲಿ ಕೇವಲ ಆರು ರಾಜ್ಯಗಳು ಮಾತ್ರ ವಿಧಾನ ಪರಿಷತ್ ಹೊಂದಿವೆ. ಉಳಿದ ರಾಜ್ಯಗಳಲ್ಲಿ ವಿಧಾನ ಸಭೆ ಮಾತ್ರ ಇದೆ. ವಿಧಾನ ಪರಿಷತ್ ಹೊಂದಿರುವ ರಾಜ್ಯಗಳೆಂದರೆ ಆಂಧ್ರ ಪ್ರದೇಶ, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರಪ್ರದೇಶ.
ಇದನ್ನೂ ಓದಿ: ಮೇಲ್ಮನೆ ವಿಧಾನ ಪರಿಷತ್ ಯಾರಿಗೆ ಬೇಕಾಗಿದೆ?
ಇದನ್ನೂ ಓದಿ; ವಿಧಾನ ಪರಿಷತ್ ಖಂಡಿತಾ ಉಳಿಸಿಕೊಳ್ಳಬೇಕಿದೆ; ಉತ್ತಮ ಪ್ರತಿನಿಧಿತ್ವಕ್ಕಾಗಿ ಸುಧಾರಣೆಗಳ ಜೊತೆಗೆ..


