Homeಮುಖಪುಟಪರಿಷತ್ ಚುನಾವಣೆ ಫಲಿತಾಂಶ: ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ ತಲಾ ಒಂದೊಂದು ಸ್ಥಾನಗಳಲ್ಲಿ ಗೆಲುವು

ಪರಿಷತ್ ಚುನಾವಣೆ ಫಲಿತಾಂಶ: ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ ತಲಾ ಒಂದೊಂದು ಸ್ಥಾನಗಳಲ್ಲಿ ಗೆಲುವು

- Advertisement -
- Advertisement -

ರಾಜ್ಯದ 25 ಸ್ಥಾನಗಳಿಗೆ ನಡೆದಿದ್ದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮೂರು ಸ್ಥಾನಗಳಿಗೆ ಫಲಿತಾಂಶ ಘೋಷಣೆಯಾಗಿದ್ದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ ತಲಾ ಒಂದೊಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.

ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪರವರು ಕಾಂಗ್ರೆಸ್ ಅಭ್ಯರ್ಥಿ ಎದುರು ಜಯ ಸಾಧಿಸಿದ್ದಾರೆ.

ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ.

ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಬಿ ಪಾಟೀಲ್ ಬಿಜೆಪಿ ಎದುರು ಜಯಗಳಿಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್‌ನ ಒಟ್ಟು ಸದಸ್ಯರ ಸಂಖ್ಯೆ 75. ಪರಿಷತ್ತಿನ ಒಟ್ಟು ಸದಸ್ಯರಲ್ಲಿ ಮೂರನೇ ಒಂದರಷ್ಟು ಸದಸ್ಯರನ್ನು ಇತರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಗ್ರಾಮ ಸಭೆ, ಗ್ರಾಮ ಪಂಚಾಯಿತಿ, ಪಂಚಾಯಿತಿ ಸಮಿತಿಗಳು ಹಾಗು ಜಿಲ್ಲಾ ಪರಿಷತ್ತುಗಳ ಸದಸ್ಯರು ಆಯ್ಕೆ ಮಾಡುತ್ತಾರೆ.

ಇನ್ನು ಮೂರನೇ ಒಂದರಷ್ಟು ಸದಸ್ಯರನ್ನು ವಿಧಾನ ಸಭಾ ಸದಸ್ಯರು ಆಯ್ಕೆ ಮಾಡುತ್ತಾರೆ. ಪರಿಷತ್‌ನ ಒಟ್ಟು ಸದಸ್ಯರಲ್ಲಿ ಆರನೇ ಒಂದರಷ್ಟು ಸದಸ್ಯರು ರಾಜ್ಯಪಾಲರಿಂದ ನೇರವಾಗಿ ನೇಮಕವಾಗುತ್ತಾರೆ. ಸಾಹಿತ್ಯ, ವಿಜ್ಞಾನ, ಕಲೆ, ಸಮಾಜ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ರಾಜ್ಯಪಾಲರು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುತ್ತಾರೆ. ಉಳಿದ ಆರನೇ ಒಂದು ಭಾಗದಷ್ಟು ಸದಸ್ಯರನ್ನು ಪದವೀಧರರು ಮತ್ತು ಶಿಕ್ಷಕರು ಆಯ್ಕೆ ಮಾಡುತ್ತಾರೆ.

ಭಾರತದಲ್ಲಿ ಕೇವಲ ಆರು ರಾಜ್ಯಗಳು ಮಾತ್ರ ವಿಧಾನ ಪರಿಷತ್ ಹೊಂದಿವೆ. ಉಳಿದ ರಾಜ್ಯಗಳಲ್ಲಿ ವಿಧಾನ ಸಭೆ ಮಾತ್ರ ಇದೆ. ವಿಧಾನ ಪರಿಷತ್ ಹೊಂದಿರುವ ರಾಜ್ಯಗಳೆಂದರೆ ಆಂಧ್ರ ಪ್ರದೇಶ, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರಪ್ರದೇಶ.


ಇದನ್ನೂ ಓದಿ; ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...