Homeಕರ್ನಾಟಕಪರಿಷತ್ ಫಲಿತಾಂಶ ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರನ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

ಪರಿಷತ್ ಫಲಿತಾಂಶ ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರನ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನ ಜಾತ್ಯತೀತ ಮುಖವಾಡ ಕಳಚಿದೆ, ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆ ಸಲ್ಲಿಸಿ ಪತ್ರಿಕಾ ಹೇಳಿಕೆ ಬಿಡಿಗಡೆಮಾಡಿರುವ ಅವರು, ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ ಎಂದಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ತಮ್ಮ‌ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಹೊರತಾಗಿಯೂ ಸೋಲು ಕಂಡಿವೆ. ಇದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಕುಮಾರಸ್ವಾಮಿ ಹಾಗೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ನಡುವಿನ ಮೈತ್ರಿಯೇ ಹೊರತು ಎರಡೂ ಪಕ್ಷಗಳ ಮತದಾರರ ನಡುವಿನ ಮೈತ್ರಿಯಲ್ಲ ಎಂಬುದು ಸಾಬೀತಾಗಿದೆ ಎಂದು ಹೇಳಿದ್ದಾರೆ.

ಕುಟುಂಬದ ಹಿತಕ್ಕಾಗಿ‌ ಕೋಮುವಾದಿಗಳ ಜೊತೆ ಕೈಜೋಡಿಸಿರುವ ಜೆಡಿಎಸ್ ಪಕ್ಷವನ್ನು ಹಾಗೂ ಸದಾಕಾಲ ಕುಟುಂಬ ರಾಜಕಾರಣದ ವಿರುದ್ಧ ಟೀಕೆ ಮಾಡಿ, ಒಂದು ಕುಟುಂಬವೇ ರಾಜಕೀಯ ಪಕ್ಷದಂತಿರುವ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿಯನ್ನು ಮತದಾರ ಬಂಧುಗಳ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ ಎಂದು ಹೇಳಿದ್ದಾರೆ.

ಸ್ವಾರ್ಥ ಸಾಧನೆಯೊಂದೇ ಗುರಿಯಾಗಿರುವ ಈ ಅಪವಿತ್ರ ಮೈತ್ರಿಗೆ ಗ್ಯಾರಂಟಿ, ವಾರೆಂಟಿ ಯಾವುದೂ ಇಲ್ಲ.
ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ ಎಂದಿದ್ದಾರೆ.

ಇದನ್ನೂ ಓದಿ: ವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಗೆಲುವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...