Homeಕರ್ನಾಟಕಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ: ದುಷ್ಕರ್ಮಿಗಳನ್ನು ಕೊಲೆಯತ್ನ ಪ್ರಕರಣದಡಿ ಬಂಧಿಸಲು DYFI ಒತ್ತಾಯ

ಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ: ದುಷ್ಕರ್ಮಿಗಳನ್ನು ಕೊಲೆಯತ್ನ ಪ್ರಕರಣದಡಿ ಬಂಧಿಸಲು DYFI ಒತ್ತಾಯ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳ ಮೇಲೆ ನಡೆದ ಗುಂಪು ಹಲ್ಲೆ ಪ್ರಕರಣದ ಆರೋಪಿಗಳನ್ನು ಕೊಲೆಯತ್ನ ಪ್ರಕರಣದಡಿ ಕೂಡಲೇ ಬಂಧಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್ಐ ಒತ್ತಾಯಿಸಿದ್ದು, ಸಂತ್ರಸ್ತರಿಗೆ ನಷ್ಟ ಪರಿಹಾರ ನೀಡಲು ಮತ್ತು ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದೆ.

ಕಾಣಿಯೂರು ಪ್ರದೇಶದಲ್ಲಿ ಜವಳಿ ಮಾರಾಟಮಾಡಲು ತೆರಳಿದ್ದ ಮಂಗಳೂರಿನ ಅಡ್ಡೂರಿನ ವ್ಯಾಪಾರಸ್ಥರಾದ ರಫೀಕ್ ಮತ್ತು ರಮೀಝ್ ಎಂಬವರ ಮೇಲೆ ಬಿಜೆಪಿ ಬೆಂಬಲಿಗರು ಎಂದು ಆರೋಪಿಸಲಾಗಿರುವ ಗುಂಪೊಂದು ಮಾರಣಾಂತಿಕ ಹಲ್ಲೆಯನ್ನು ನಡೆಸಿತ್ತು. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಹಲ್ಲೆ ನಡೆಸಿದ ತಪ್ಪಿತಸ್ಥರನ್ನು ಕೊಲೆಯತ್ನ ಪ್ರಕರಣದಡಿ ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕೆಂದು ಒತ್ತಾಯಿಸಿದ್ದು, ಜಿಲ್ಲಾ ಎಸ್‌ಪಿಗೆ ಶನಿವಾರ ಮನವಿ ಸಲ್ಲಿಸಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ; 2 ಪ್ರಕರಣ ದಾಖಲು

“ಅಡ್ಡೂರಿನ ರಫೀಕ್ ಮತ್ತು ರಮೀಝ್ ಅನ್ನುವ ವ್ಯಾಪಾರಿಗಳು ಕಳೆದ ಹಲವಾರು ವರುಷಗಳಿಂದ ಊರಿಂದೂರಿಗೆ ಮನೆ ಮನೆ ತೆರಳಿ ಬೆಡ್ ಶೀಟ್ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. ಅವರು ಕಾಣಿಯೂರು ಪ್ರದೇಶದಲ್ಲಿ ವ್ಯಾಪಾರ ಮಾಡುತ್ತಿದ್ದ ವೇಳೆ ಮುಸಲ್ಮಾನರು ಎಂಬ ಕಾರಣಕ್ಕೆ ಬಿಜೆಪಿ ಬೆಂಬಲಿತ ಅಕ್ರಮ ಕೂಟವೊಂದು ಅವರ ಮೇಲೆ ಮುಗಿಬಿದ್ದು ಕಬ್ಬಿಣದ ಸರಳು, ದೊಣ್ಣೆ ಇನ್ನಿತರ ಆಯುಧಗಳಿಂದ ಕೈಕಾಲು ಮುರಿಯುವಂತೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದಲ್ಲದೆ, ಅವರ ಮೈಮೇಲೆ ವಾಹನಗಳನ್ನು ಹತ್ತಿಸಿ ಕೊಲೆಯತ್ನಕ್ಕೂ ಪ್ರಯತ್ನಿಸಿರುತ್ತಾರೆ” ಎಂದು ಡಿವೈಎಫ್‌ಐ ಹೇಳಿದೆ.

“ಸತತ ಎರಡು ಗಂಟೆಗಳ ಕಾಲ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ದೃಶ್ಯದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಕರಣ ನಡೆದು ಎರಡು ದಿನಗಳಾದರೂ ಪೊಲೀಸ್ ಇಲಾಖೆ ಈವರೆಗೆ ಯಾವೊಬ್ಬನನ್ನು ಬಂಧಿಸದೆ ಮತೀಯ ತಾರತಮ್ಯವನ್ನು ಎಸಗಿದೆ” ಎಂದು ಡಿವೈಎಫ್‌ಐ ಆಕ್ರೋಶ ವ್ಯಕ್ತಪಡಿಸಿದೆ.

ಮುಸಲ್ಮಾನರನ್ನು ಗುರಿಯಾಗಿಸಿ ನಿರಂತರ ನಡೆಯುವಂತಹ ದಾಳಿಗಳಿಂದ ಜಿಲ್ಲೆಯ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿರುವುದಕ್ಕೆ ಘಟನೆ ಸಾಕ್ಷಿಯಾಗಿದೆ ಎಂದು ಹೇಳಿರುವ ಡಿವೈಎಫ್‌ಐ, “೧ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಕೂಡಲೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆಗೆ ಒಳಪಡಿಸಬೇಕು ಹಾಗೂ ಮುಸ್ಲಿಂ ವ್ಯಾಪಾರಿಗಳಾದ ರಫೀಕ್ ಮತ್ತು ರಮೀಝ್ ಮೇಲಿನ ಮಾರಾಣಾಂತಿಕ ಹಲ್ಲೆಗೆ ಕಾರಣರಾದವರ ಮೇಲೆ ಕೊಲೆಯತ್ನ ಪ್ರಕರಣದಡಿ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಸರಕಾರ ಸಂತ್ರಸ್ತರಿಗೆ ನಷ್ಟ ಪರಿಹಾರವನ್ನು ನೀಡಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ಶವ ಮೆರವಣಿಗೆಯ ಕರಾಳ ಇತಿಹಾಸದಿಂದ ಪಾಠ ಕಲಿತ್ತಿಲ್ಲವೇ ಕರ್ನಾಟಕ ಜನತೆ?

ಸಂತ್ರಸ್ತರನ್ನು ಭೇಟಿಯಾದ ಡಿವೈಎಫ್‌ಐ ಮುಖಂಡರು

ಕಾಣಿಯೂರಿನಲ್ಲಿ ಗುಂಪು ಹಲ್ಲೆಗೊಳಗಾದ ಸಂತ್ರಸ್ತರನ್ನು ಡಿವೈಎಫ್‌ಐ ಮುಖಂಡರು ಭೇಟಿಯಾಗಿ ಅವರಿಗೆ ಧೈರ್ಯ ತುಂಬಿದ್ದಾರೆ. ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಕಾರ್ಯದರ್ಶಿ ಸಂತೋಷ್ ಬಜಾಲ್, ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ರೇವಂತ್ ಕದ್ರಿ, ಡಿವೈಎಫ್ಐ ಜಿಲ್ಲಾ ಮುಖಂಡರಾದ ರಫೀಕ್ ಹರೇಕಳ, ಮುಸ್ತಫ ಕಲ್ಲಕಟ್ಟೆ, ಆಸೀಫ್ ಮುಂತಾದವರು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....