Homeಮುಖಪುಟಗುಂಪು ಹಲ್ಲೆ - ಯುಪಿಯಲ್ಲಿ 22 ವರ್ಷದ ಮುಸ್ಲಿಂ ಯುವಕ ಸಾವು

ಗುಂಪು ಹಲ್ಲೆ – ಯುಪಿಯಲ್ಲಿ 22 ವರ್ಷದ ಮುಸ್ಲಿಂ ಯುವಕ ಸಾವು

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಯುವಕನನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರಾಜ್ಯದ ಶಾಮ್ಲಿ ಜಿಲ್ಲೆಯ ಬನಾತ್‌‌ ಪಟ್ಟಣದ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಕೊಲೆಯಾದ ಯುವಕನನ್ನು 22 ವರ್ಷದ ಸಮೀರ್ ಎಂಬ ಗುರುತಿಸಲಾಗಿದೆ.

ಸೆಪ್ಟೆಂಬರ್ 9 ರ ಗುರುವಾರದಂದು ಲಾಠಿ ಮತ್ತು ರಾಡ್‌ಗಳಿಂದ ಹೊಡೆದು ಯುವಕನನ್ನು ಹತ್ಯೆ ಮಾಡಿಲಾಗಿದೆ ಎಂದು ವರದಿಯಾಗಿದೆ. ಮೃತ ಯುವಕನ ಚಿಕ್ಕಪ್ಪ ಆದಿಲ್ ನೀಡಿದ ದೂರಿನ ಮೇರೆಗೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಈ ಪ್ರಕರಣದಲ್ಲಿ ಎಂಟು ಜನರನ್ನು ಹೆಸರಿಸಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣದ ವಿವರ

ಶಾಮ್ಲಿ ಜಿಲ್ಲೆಯ ಆದರ್ಶ್ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬನಾತ್ ಪಟ್ಟಣದಲ್ಲಿ ಹತ್ಯೆ ನಡೆದಿದೆ. ಮೊಹಲ್ಲಾ ಪ್ರೇಮ್‌ನಗರ್ ಬನಾತ್ ನಿವಾಸಿಯಾಗಿರುವ ಆದಿಲ್ ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದಾರೆ. ಅವರ ಪ್ರಕಾರ, ಅವರ ಸಹೋದರನ ಮಗ ಸಮೀರ್ ಗುರುವಾರ ಸಂಜೆ ಪಟ್ಟಣದ ಬಸ್‌ ನಿಲ್ದಾಣದಲ್ಲಿ ನಿಂತಿದ್ದರು. ಈ ವೇಳೆ ಪಟ್ಟಣದ 10 ರಿಂದ 12 ಜನರು ಹಳೆಯ ದ್ವೇಷದಿಂದ ಶಮೀರ್‌ಗೆ ಹಲ್ಲೆ ನಡೆಸಲು ಪ್ರಾರಂಭಿಸಿದ್ದಾರೆ ಎಂದು ಆದಿಲ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಬಾಲಕಿಯ ಅಪಹರಣ; ಆರ್‌ಎಸ್ಎಸ್‌ ಮುಖಂಡ ಸೇರಿ ಐವರ ಬಂಧನ

ಸಮೀರ್‌ ಮೇಲೆ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಲಾಗಿದೆ. ಆತನನ್ನು ಎತ್ತಿಕೊಂಡು ಹೋಗಿದ್ದಲ್ಲದೆ, ಆತನ ತಲೆಗೂ ಹೊಡೆದಿದ್ದಾರೆ ಅವರು ಹೇಳಿದ್ದಾರೆ. ನಂತರ ಸಮೀರ್ ಮೃತಪಟ್ಟಿದ್ದಾರೆ ಎಂದು ಭಾವಿಸಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ದುಷ್ಕರ್ಮಿಗಳು ಹಳೆಯ ದ್ವೇಷದ ಕಾರಣದಿಂದ ಸಮೇರ್‌ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೃತ ಸಮೀರ್ ಏಜೆನ್ಸಿಯೊಂದರಲ್ಲಿ ‘ಮೇಸ್ತ್ರಿ’ ಆಗಿ ಕೆಲಸ ಮಾಡುತ್ತಿದ್ದರು ಎಂದು ಆದಿಲ್ ಹೇಳಿದ್ದಾರೆ.

ಆರೋಪಿಗಳು ಈ ಹಿಂದೆಯು ಗೂಂಡಾಗಿರಿ ಮಾಡಿದವರಾಗಿದ್ದು, ಅವರಲ್ಲಿ ಇಬ್ಬರು ಇತ್ತೀಚೆಗೆ ಜೈಲಿನಿಂದ ಹೊರ ಬಂದಿದ್ದರು ಎಂದು ಆದಿಲ್ ತಿಳಿಸಿದ್ದಾರೆ.

ಆಸ್ಪತ್ರೆಗೆ ಸಾಗಿಸುವಾಗ ದಾರಿಯಲ್ಲಿ ನಿಧನ

ಹಲ್ಲೆ ನಡೆದ ನಂತರ ಸ್ಥಳಕ್ಕೆ ಬಂದ ಸಂಬಂಧಿಕರು ಸಮೀರ್ ಅವರನ್ನು ಶಾಮ್ಲಿಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಆದರೆ ಅವರ ಸ್ಥಿತಿ ಗಂಭೀರ ಇದ್ದುದರಿಂದ ನಂತರ ಮುಜಫರ್‌ನಗರಕ್ಕೆ ಕಳುಹಿಸಲಾಗಿದೆ. ಆದರೆ, ಸಮೀರ್ ಮುಜಾಫರ್ ನಗರಕ್ಕೆ ತೆರಳುತ್ತಿದ್ದ ದಾರಿಯಲ್ಲಿ ಮೃತಪಟ್ಟಿದ್ದಾರೆ.

ಆದಿಲ್ ಅವರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳ ಬಂಧನವನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಶಾಮ್ಲಿ ಎಸ್ಪಿ ಸುಕೀರ್ತಿ ಮಾಧವ್ ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 142, 147, ಮತ್ತು 302 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ಹಿಂದೂ ರಕ್ಷಣಾ ದಳದ ಮುಖ್ಯಸ್ಥ ಪಿಂಕಿ ಚೌಧರಿ ಪೊಲೀಸರಿಗೆ ಶರಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...