Homeಮುಖಪುಟಆದಿವಾಸಿ ಬಾಲಕಿಯರಿಗೆ ಸಾರ್ವಜನಿಕವಾಗಿ ಸಾಮೂಹಿಕ ಲೈಂಗಿಕ ಕಿರುಕುಳ; ವಿಡಿಯೊ ವೈರಲ್‌

ಆದಿವಾಸಿ ಬಾಲಕಿಯರಿಗೆ ಸಾರ್ವಜನಿಕವಾಗಿ ಸಾಮೂಹಿಕ ಲೈಂಗಿಕ ಕಿರುಕುಳ; ವಿಡಿಯೊ ವೈರಲ್‌

- Advertisement -
- Advertisement -

ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರಿಗೆ ಯುವಕರ ಗುಂಪೊಂದು ಸಾಮೂಹಿಕವಾಗಿ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪೊಲೀಸರು ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ.

ಮಧ್ಯಪ್ರದೇಶದ ಅಲಿರಾಜ್‌ಪುರದಲ್ಲಿ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಕೇಸರಿ ಶಾಲು ಧರಿಸಿದ ಕೆಲವು ದುಷ್ಕರ್ಮಿಗಳು ಲೈಂಗಿಕ ಕಿರುಕುಳ ನೀಡುತ್ತಿರುವುದನ್ನು  ವಿಡಿಯೋದಲ್ಲಿ ಕಾಣಬಹುದು. ಭಗೋರಿಯಾ ಹಬ್ಬದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅದೇ ಸಮಯದಲ್ಲಿ, ಕಾಂಗ್ರೆಸ್ ನಾಯಕ ಕೆಕೆ ಮಿಶ್ರಾ ಅವರು ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಕ್ರಮ ತೆಗೆದುಕೊಳ್ಳದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಈ ಘಟನೆ ನಡೆದಿದೆ. ಅಲಿರಾಜಪುರ ಜಿಲ್ಲೆಯ ವಾಲ್ಪುರ್ ಗ್ರಾಮದಲ್ಲಿ ಮಾರ್ಚ್ 11 ರಂದು ಭಗೋರಿಯಾ ಜಾತ್ರೆ ನಡೆಯಿತು ಎಂದು ತಿಳಿದುಬಂದಿದೆ.

ವೈರಲ್‌ ಆಗಿರುವ ವಿಡಿಯೊದಲ್ಲಿ ಇಬ್ಬರು ಹೆಣ್ಣುಮಕ್ಕಳಿಗೆ ಯುವಕರ ಗುಂಪು ಕಿರುಕುಳ ನೀಡುತ್ತಿರುವುದನ್ನು ಕಾಣಬಹುದು. ವಾಹನ ಮರೆಯಲ್ಲಿರುವ ಯುವತಿಗೆ ಕಿರುಕುಳ ನೀಡುತ್ತಿರುವುದನ್ನು ಒಂದೆಡೆಯಾದರೆ, ಮತ್ತೊಬ್ಬ ಬಾಲಕಿಯನ್ನು ನಡುಬೀದಿಯಲ್ಲಿ ಎಳೆದಾಡಿ ಕಿರುಕುಳ ನೀಡುವುದನ್ನು ಕಾಣಬಹುದು.

ಘಟನೆಯ ಬಗ್ಗೆ ದೂರುಗಳು ಬಂದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪೊಲೀಸರು ಎಚ್ಚೆತ್ತುಕೊಂಡು ಕ್ರಮ ಜರುಗಿಸಿದ್ದಾರೆ ಎಂದು ಅಲಿರಾಜ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮನೋಜ್ ಸಿಂಗ್ ಹೇಳಿದ್ದಾರೆ. ನಾವು ಕೆಲವು ಯುವಕರನ್ನು ಗುರುತಿಸಿದ್ದೇವೆ, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು” ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಮಧ್ಯಪ್ರದೇಶದಲ್ಲಿ ಬುಡಕಟ್ಟು ಸಮುದಾಯಗಳು ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಭಗೋರಿಯಾವನ್ನು ಆಯೋಜಿಸಲಾಗುತ್ತದೆ. ಇದು ಆದಿವಾಸಿಗಳ ದೊಡ್ಡ ಹಬ್ಬವೆಂದು ಪರಿಗಣಿಸಲ್ಪಟ್ಟಿದೆ. ಪ್ರತಿ ವರ್ಷ ಗಂಗಾ ಮಹಾದೇವನ ದೇವಸ್ಥಾನದಲ್ಲಿ ಜಾತ್ರೆಯನ್ನು ಆಯೋಜಿಸುವುದರೊಂದಿಗೆ ಹಬ್ಬ ಪ್ರಾರಂಭವಾಗುತ್ತದೆ. ಅಲಿರಾಜಪುರದ ವಾಲ್ಪುರ್‌ನ ಭಗೋರಿಯಾ ಹಬ್ಬ ಬಹಳ ಜನಪ್ರಿಯವಾಗಿದೆ.

ಟ್ರೈಬಲ್‌ ಆರ್ಮಿ ಟ್ವಿಟರ್‌ ಖಾತೆಯಲ್ಲಿ ಘಟನೆಯ ಕುರಿತು ಟ್ವೀಟ್ ಮಾಡಲಾಗಿದ್ದು, “ಇದು ಭೀಕರ ದೃಶ್ಯ. ಬುಡಕಟ್ಟು ಮಹಿಳೆಯರ ಮೇಲಾಗಿರುವ ಇಂತಹ ಘಟನೆಗಳು ನಿತ್ಯವೂ ಘಟಿಸುತ್ತವೆ. ಯಾಕೆಂದರೆ ಬುಡಕಟ್ಟು ಮಹಿಳೆಯರು ಅಲಕ್ಷಿತ ಸಮುದಾಯಕ್ಕೆ ಸೇರಿರುವುದರಿಂದ ಇಂತಹ ಘಟನೆಗಳಾಗುತ್ತವೆ” ಎಂದು ಅಭಿಪ್ರಾಯಪಡಲಾಗಿದೆ.

‘ದಿ ದಲಿತ್‌ ವಾಯ್ಸ್‌’ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಲಾಗಿದ್ದು, “ಅತ್ಯಂತ ಭಯಾನಕವಾಗಿ ಬುಡಕಟ್ಟು ಹುಡುಗಿಯೊಬ್ಬಳನ್ನು ಕೇಸರಿ ವಸ್ತ್ರಧಾರಿ ಹಿಂದೂ ಗೂಂಡಾಗಳು ಹಾಡಹಗಲೇ ಕಿರುಕುಳ ನೀಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.


ಇದನ್ನೂ ಓದಿರಿ: ಕುರುಗಾಹಿ ಮಹಿಳೆಯ ಮೇಲಿನ ಅತ್ಯಾಚಾರ ಖಂಡಿಸಿ ಮಾರ್ಚ್ 22ರಂದು ವಿಧಾನಸೌಧ ಚಲೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...