Homeಮುಖಪುಟಉತ್ತರಪ್ರದೇಶ: ಮುಸ್ಲಿಂ ಯುವಕನಿಗೆ ಗುಂಪಿನಿಂದ ಥಳಿತ

ಉತ್ತರಪ್ರದೇಶ: ಮುಸ್ಲಿಂ ಯುವಕನಿಗೆ ಗುಂಪಿನಿಂದ ಥಳಿತ

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ಅಲ್ಪಸಂಖ್ಯಾತರು, ದಲಿತರ ಮೇಲೆ ದೌರ್ಜನ್ಯಗಳು ಪದೇ ಪದೇ ವರದಿಯಾಗುತ್ತಿದೆ. ಶಾಮ್ಲಿಯ ಕಾಂಡ್ಲಾ ಗ್ರಾಮದಲ್ಲಿ ಗುಂಪೊಂದು ಮುಸ್ಲಿಂ ವ್ಯಕ್ತಿಗೆ ಕಿರುಕುಳ ನೀಡಿ ದೊಣ್ಣೆಗಳಿಂದ ಕ್ರೂರವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ.

ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ವೈರಲ್ ವೀಡಿಯೊದಲ್ಲಿ, ರಿಜ್ವಾನ್ ಎಂದು ಗುರುತಿಸಲಾದ ಮುಸ್ಲಿಂ ವ್ಯಕ್ತಿ ತನ್ನ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅವನನ್ನು ಕಾಂಡ್ಲಾ ಗ್ರಾಮದಲ್ಲಿ 8ರಿಂದ 10 ಜನರ ಗುಂಪು ತಡೆದು, ನಿಂದಿಸಿ, ನೆಲಕ್ಕೆ ತಳ್ಳಿ ಹಾಕಿ ದೊಣ್ಣೆಗಳಿಂದ ಅಮಾನುಷವಾಗಿ ಥಳಿಸಿದ್ದಾರೆ. ಘಟನೆಯ ಬಗೆಗಿನ ನಿಖರವಾದ ಸಮಯ ಮತ್ತು ಕಾರಣ ತಿಳಿದಿಲ್ಲವಾದರೂ, ಮಾರ್ಚ್ 30ರಂದು ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಆರೋಪಿಗಳ ವಿರುದ್ಧ ಉತ್ತರಪ್ರದೇಶದ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ಘಟನೆಯ ಬಗ್ಗೆ ಕ್ರಮಕ್ಕೆ ಆಗ್ರಹ ಹೆಚ್ಚಾಗುತ್ತಿದ್ದಂತೆ ಶಾಮ್ಲಿ ಜಿಲ್ಲೆಯ ಪೊಲೀಸರಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಡ ಹಾಕಲಾಗಿದೆ, ನಂತರ ಅವರು ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಕೈರಾನಾ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶಾಮ್ಲಿ ಪೊಲೀಸರು ತಿಳಿಸಿದ್ದಾರೆ.

ಕೈರಾನಾ ಠಾಣೆ ಪೊಲೀಸರು ಈ ಕುರಿತು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಇತರ ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುವಂತೆ ಕೈರಾನಾ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಇದನ್ನು ಓದಿ: ಮೋದಿ ರಾಷ್ಟ್ರಕ್ಕೆ ಸಂಪೂರ್ಣವಾಗಿ ಸುಳ್ಳು ಹೇಳಿದ್ದಾರೆ: ಚುನಾವಣಾ ಬಾಂಡ್‌ ಕುರಿತ ಪ್ರಧಾನಿ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...