Homeಮುಖಪುಟಹಿಂಸಾಚಾರ ಪೀಡಿತ ನುಹ್‌ನಲ್ಲಿ ಶೋಭಾ ಯಾತ್ರೆಗೆ ಕರೆ; ಇಂಟರ್ನೆಟ್,  SMS ಸೇವೆಗಳು ಸ್ಥಗಿತ

ಹಿಂಸಾಚಾರ ಪೀಡಿತ ನುಹ್‌ನಲ್ಲಿ ಶೋಭಾ ಯಾತ್ರೆಗೆ ಕರೆ; ಇಂಟರ್ನೆಟ್,  SMS ಸೇವೆಗಳು ಸ್ಥಗಿತ

- Advertisement -
- Advertisement -

ಹಿಂಸಾಚಾರ ಪೀಡಿತ ನುಹ್‌ನಲ್ಲಿ ಶೋಭಾ ಯಾತ್ರೆಗೆ ಕರೆ  ಹಿನ್ನೆಲೆ  ಮೊಬೈಲ್ ಇಂಟರ್ನೆಟ್ ಮತ್ತು  SMS ಸೇವೆಗಳನ್ನು ಆಗಸ್ಟ್ 28ರವರೆಗೆ ಸ್ಥಗಿತಗೊಳಿಸಿ ಹರಿಯಾಣ ಸರ್ಕಾರ ಆದೇಶ ಹೊರಡಿಸಿದೆ.

ಮೆರವಣಿಗೆ ಬಗ್ಗೆ ಸಮಾಜ ವಿರೋಧಿ ಶಕ್ತಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ವದಂತಿಗಳನ್ನು ಹರಡುವುದನ್ನು ತಡೆಯಲು ನಿರ್ಧಾರ ಕೈಗೊಂಡಿರುವುದಾಗಿ ಸರ್ಕಾರ ಪ್ರಕಟಿಸಿದೆ.

ಶನಿವಾರ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿವಿಎಸ್ ಎನ್ ಪ್ರಸಾದ್ ಅವರು      ಇಂಟರ್ನೆಟ್ ಮತ್ತು ಎಸ್ ಎಮ್ ಎಸ್ ಸೇವೆಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕೋಮು ಘರ್ಷಣೆಗಳು ಭುಗಿಲೆದ್ದ ನಂತರ ಹರಿಯಾಣ ಸರ್ಕಾರವು ಈ ಹಿಂದೆಯೂ ನುಹ್‌ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

ಜುಲೈ 31 ರಂದು ನಡೆದ ವಿಶ್ವ ಹಿಂದೂ ಪರಿಷತ್‌ನ (ವಿಎಚ್‌ಪಿ) ಧಾರ್ಮಿಕ ಮೆರವಣಿಗೆಯ ವೇಳೆ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ಇಬ್ಬರು ಗೃಹ ರಕ್ಷಕ  ಸಿಬ್ಬಂದಿ ಮತ್ತು ಧರ್ಮಗುರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದರು.

ನುಹ್ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗವನ್ನು ತಡೆಗಟ್ಟಲು ಈ ಆದೇಶವನ್ನು ಹೊರಡಿಸಲಾಗಿದೆ.  ಆಗಸ್ಟ್ 28ರವರೆಗೆ ಆದೇಶ ಜಾರಿಯಲ್ಲಿರುತ್ತದೆ  ಎಂದು ಪ್ರಸಾದ್ ಅವರು ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಶುಕ್ರವಾರ ನುಹ್ ಡಿಸಿ ಅವರು ಎಸಿಎಸ್ ಅವರಿಗೆ ಪತ್ರ ಬರೆದು ಜಿಲ್ಲೆಯಲ್ಲಿ ಆಗಸ್ಟ್ 28 ರಂದು ‘ಬ್ರಿಜ್ ಮಂಡಲ್ ಶೋಭಾ ಯಾತ್ರೆ’ಗೆ ‘ಸರ್ವ ರಾಷ್ಟ್ರೀಯ ಹಿಂದೂ ಮಹಾಪಂಚಾಯತ್’ ಕರೆ ಕೊಟ್ಟಿದೆ.  ಶಾಂತಿ ಕದಡಲು ಸಮಾಜ ವಿರೋಧಿ ಶಕ್ತಿಗಳಿಂದ ಸಾಮಾಜಿಕ ಮಾಧ್ಯಮಗಳ ದುರ್ಬಳಕೆ ನಡೆಯುತ್ತಿದ ಎಂದು ಡಿಸಿ ಅವರು ಗೃಹ ಇಲಾಖೆಯ ಮುಖ್ಯ ಕಾರ್ಯದರ್ಶಿಯವರ ಗಮನಕ್ಕೆ ತಂದಿದ್ದರು.

ಯಾತ್ರೆಗೆ ಈ ಮೊದಲು ಅನುಮತಿಯನ್ನು ನಿರಾಕರಿಸಿ ಆದೇಶವನ್ನು ಹೊರಡಿಸಲಾಗಿತ್ತು. ಆದರೆ ವಿಹೆಚ್ ಪಿ ನಮಗೆ ರ್ಯಾಲಿ ನಡೆಸಲು ಯಾರ ಅನುಮತಿ ಕೂಡ ಬೇಡ ಎಂದು ಹೇಳಿಕೆಯನ್ನು ನೀಡಿತ್ತು.

ಇದೀಗ ನುಹ್ ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳು ಮತ್ತು SMS (ಬ್ಯಾಂಕಿಂಗ್ ಮತ್ತು ಮೊಬೈಲ್ ರೀಚಾರ್ಜ್ ಹೊರತುಪಡಿಸಿ) ಸೇವೆಗಳನ್ನು ರದ್ದುಪಡಿಸಿ ಆದೇಶಿಸಲಾಗಿದೆ.

ಇದನ್ನು ಓದಿ: ದಲಿತ ಬಾಲಕ  ಶಾಲಾ ಕೊಠಡಿಯಲ್ಲಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಕೊಲೆ ಆರೋಪಿಸಿದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...