Homeಕರ್ನಾಟಕಹಲ್ಲೆ ಪ್ರಕರಣವನ್ನು ದೊಡ್ಡದಾಗಿಸುವ ಅಗತ್ಯ ಇರಲಿಲ್ಲ: ಬಿಜೆಪಿ ಶಾಸಕ ಗರುಡಾಚಾರ್‌

ಹಲ್ಲೆ ಪ್ರಕರಣವನ್ನು ದೊಡ್ಡದಾಗಿಸುವ ಅಗತ್ಯ ಇರಲಿಲ್ಲ: ಬಿಜೆಪಿ ಶಾಸಕ ಗರುಡಾಚಾರ್‌

- Advertisement -
- Advertisement -

ಬೆಂಗಳೂರಿನ ನಗರ್ತ ಪೇಟೆಯ ಟೆಲಿಕಾಂ ಅಂಗಡಿಯೊಂದರಲ್ಲಿ ಲೌಡ್ ಸ್ಪೀಕರ್ ವಿಚಾರವಾಗಿ ಅಂಗಡಿ ಮಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಬಿಜೆಪಿ ಶಾಸಕ ಉದಯ್‌ ಗರುಡಾಚಾರ್‌ ಪ್ರತಿಕ್ರಿಯಿಸಿದ್ದಾರೆ. ಇದು ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ನಡೆದ ಗಲಾಟೆಯಲ್ಲ, ಇದನ್ನು ಇಷ್ಟೊಂದು ದೊಡ್ಡದಾಗಿ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಹೇಳಿದ್ದು, ಈ ವಿಚಾರದಲ್ಲಿ ರಾಜಕೀಯ ಮಾಡಿದ್ದ ಬಿಜೆಪಿಗೆ ದೊಡ್ಡ ಮುಜುಗರವಾಗಿದೆ.

ಈ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ ಶಾಸಕ ಉದಯ್‌ ಗರುಡಾಚಾರ್‌, ಅದು ನನ್ನದೇ ಕ್ಷೇತ್ರ, ನಾನು ಘಟನೆ ಬಗ್ಗೆ ಎಲ್ಲಾ ತಿಳ್ಕೊಂಡಿದ್ದೇನೆ, ಇದನ್ನು ಇಷ್ಟು ದೊಡ್ಡ ಮಾಡುವ ಅಗತ್ಯ ಇರಲಿಲ್ಲ. ಈಗ ಚುನಾವಣೆ ಸಮಯ ಎಲ್ಲಾ ಉದ್ರೇಕದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ನನಗೆ ತಿಳಿದಿದೆ. ಅನ್ಯ ಕೋಮಿನ ಜನರು ಹಲ್ಲೆ ಮಾಡಿದ್ದಾರೆ ಎಂದು ನಾನು ಯಾವತ್ತೂ ಹೇಳಲ್ಲ, ನಾನು ಸೆಕ್ಯೂಲರ್‌ ವ್ಯಕ್ತಿ ಎಲ್ಲಾ ಜನಾಂಗದವರು ಚೆನ್ನಾಗಿ ಇರಬೇಕು ಎಂದು ಹೇಳುವವನು. ನನ್ನ ಕ್ಷೇತ್ರದಲ್ಲಿ ಎಲ್ಲವೂ ನಿಯಂತ್ರಣದಲ್ಲಿದೆ. ಇದುವರೆಗೆ ನಮ್ಮಲ್ಲಿ ಯಾವುದೇ ಸಮಸ್ಯೆಯಾಗಿಲ್ಲ, ಕ್ಷೇತ್ರದಲ್ಲಿ ವ್ಯಾಪರಸ್ಥರು ಸೇರಿದಂತೆ ಎಲ್ಲರೂ ಸುಲಲಿತವಾಗಿ ಜೀವನವನ್ನು ನಡೆಸುತ್ತಿದ್ದಾರೆ. ಕಾನೂನು ನಂತರದ ಕ್ರಮ ಕೈಗೊಳ್ಳಲಿದೆ. ಈ ಬಗ್ಗೆ ತೇಜಸ್ವಿ ಸೂರ್ಯ ನನ್ನಲ್ಲಿ ಮಾತನಾಡಿದ್ದಾರೆ, ಈ ವೇಳೆ ನಾನು ಸೂರ್ಯ ಅವರಲ್ಲಿ ಆರೋಪಿಗಳ ಬಂಧನವಾಗಿದೆ. ಇನ್ನು ಕಾನೂನು ಅದರ ಕೆಲಸವನ್ನು ಮಾಡುತ್ತದೆ ಎಂದು ಹೇಳಿದ್ದೇನೆ ಎಂದು ಹೇಳಿದ್ದಾರೆ.

ಈ ಕುರಿತು ಕಾಂಗ್ರೆಸ್‌ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರು ಕರ್ನಾಟಕದ ಬಿಜೆಪಿಗರಿಗೆ ತಪರಾಕಿ ನೀಡಿದ್ದಾರೆ, ಇದು ಬಿಜೆಪಿಯವರು ಚುನಾವಣೆಗಾಗಿ ಹಚ್ಚಿದ ಕೋಮು ಬೆಂಕಿ ಎನ್ನುವುದಕ್ಕೆ ಪುಷ್ಟಿ ನೀಡಿದ್ದಾರೆ.

ತೇಜಸ್ವಿ ಸೂರ್ಯ ಎಂಬ ಅವಿವೇಕಿ ಶಿಶುವಿಗೆ ಈ ಗಲಾಟೆಯ ವಿಷಯದಲ್ಲಿ ರಾಜಕೀಯ ಬೇಳೆ ಬೇಯಿಸಬೇಡ ಎಂದು ಸ್ವತಃ ಬಿಜೆಪಿ ಶಾಸಕರೇ ಹೇಳಿದ್ದರೂ ಕೋಮು ಸಂಘರ್ಷ ಉಂಟುಮಾಡಲು ಮುಂದಾಗಿದ್ದಾರೆ. ಇಷ್ಟು ದಿನ ಕಣ್ಮರೆಯಾಗಿದ್ದ ತೇಜಸ್ವಿ ಸೂರ್ಯನಿಗೆ ತನ್ನ ಸಾಧನೆ ಹೇಳಿ ಮತ ಕೇಳುವ ಯೋಗ್ಯತೆ ಅರ್ಹತೆ ಇಲ್ಲದಿರುವುದೇ ಈ ಎಲ್ಲಾ ನಾಟಕಗಳ ಮೂಲ ಕಾರಣ! ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.
ಏನಿದು ಘಟನೆ:

ಬೆಂಗಳೂರು ನಗರದ ಸಿದ್ದಣ್ಣ ಗಲ್ಲಿಯ ನಗರ್ತಪೇಟೆಯಲ್ಲಿ ಮೊಬೈಲ್‌ ಅಂಗಡಿ ಬಳಿ ಬಂದು ಅಂಗಡಿ ಮಾಲಕ ಮುಖೇಶ್ ಮೇಲೆ ಹಲ್ಲೆ ಮಾಡಲಾಗಿತ್ತು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ವಿಡಿಯೋದಲ್ಲಿ ಮುಖೇಶ್ ಅಂಗಡಿಗೆ ಬಂದ ಯುವಕರ ಗುಂಪಿನ ಜೊತೆ ಮಾತಿನ ಚಕಮಕಿಯಲ್ಲಿ ತೊಡಗಿರುವುದು, ಮಾತಿಗೆ ಮಾತು ಬೆಳೆದು ಗುಂಪಿನಲ್ಲಿದ್ದ ಯುವಕನೊಬ್ಬ ಮುಖೇಶ್‍ ಮೇಲೆ ಹಲ್ಲೆ ಮಾಡುವುದು. ಈ ವೇಳೆ ಅಂಗಡಿಯಿಂದ ಹೊರ ಬರುವ ಮುಖೇಶ್ ಯುವಕರ ಮೇಲೆ ಪ್ರತಿ ಹಲ್ಲೆ ನಡೆಸುವುದು ಸೆರೆಯಾಗಿದೆ.

ಆದರೆ ಈ ಬಗ್ಗೆ ಸುಳ್ಳು ಆಯಾಮಗಳನ್ನು ನೀಡಿ ಕನ್ನಡ ಮಾದ್ಯಮಗಳು ಮತ್ತು ಬಿಜೆಪಿ ಪ್ರಚಾರವನ್ನು ಮಾಡಿತ್ತು. ಸಂಜೆ ನಮಾಜ್ ಟೈಂನಲ್ಲಿ ಹನುಮಾನ್‌ ಚಾಲೀಸ್ ಹಾಕ್ತಿಯಾ ಎಂದು ಯುವಕನಿಗೆ ಥಳಿಸಲಾಗಿದೆ ಎಂದು ಸುಳ್ಳು ಸುದ್ದಿಯನ್ನು ಬಿತ್ತಲಾಗಿತ್ತು. ದೂರುದಾರ ನೀಡಿದ ದೂರಿನಲ್ಲಿಯೂ ಆಝಾನ್, ಹನುಮಾನ್ ಚಾಲಿಸಾದ ಬಗ್ಗೆ ಯಾವುದೇ ಉಲ್ಲೇಖವಿರಲಿಲ್ಲ. ಆದರೆ ಬಿಜೆಪಿ ಚುನಾವಣೆ ಹೊಸ್ತಿಲಲ್ಲ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಿ ರಾಜಕೀಯ ಲಾಭವನ್ನು ಪಡೆಯಲು ಮುಂದಾಗಿರುವುದು ವಿಪರ್ಯಾಸವಾಗಿದೆ. ಇದಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಎಫ್‍ಐಆರ್ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಆದರೆ ಇದು ಸುಳ್ಳು ಆರೋಪ ಎನ್ನುವುದು ಆ ಬಳಿಕ ಬಯಲಾಗಿತ್ತು.

ಮುಖೇಶ್ ತನ್ನ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಭಜನೆ ಹಾಡುಗಳನ್ನು ಹಾಕಿದ್ದನ್ನು ಆಕ್ಷೇಪಿಸಿ ಅವರ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಬಿಜೆಪಿ ಶಾಸಕ ಸುರೇಶ್ ಕುಮಾರ್ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದ್ದರು.

ಇದನ್ನು ಓದಿ: ಏಪ್ರಿಲ್‌ನ್ನು”ದಲಿತ ಇತಿಹಾಸದ ತಿಂಗಳು” ಎಂದು ಘೋಷಿಸಿದ ಕೆನಡಾದ ಬರ್ಲಿಂಗ್ಟನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...