Homeಮುಖಪುಟಸಂಸತ್ತಿನ ಮೊದಲ ಮಹಡಿಯಲ್ಲಿ 'ಮೋದಾನಿ' ಬ್ಯಾನರ್ ಪ್ರದರ್ಶನ: ಪ್ರತಿಪಕ್ಷಗಳ ವಿನೂತನ ಪ್ರತಿಭಟನೆ

ಸಂಸತ್ತಿನ ಮೊದಲ ಮಹಡಿಯಲ್ಲಿ ‘ಮೋದಾನಿ’ ಬ್ಯಾನರ್ ಪ್ರದರ್ಶನ: ಪ್ರತಿಪಕ್ಷಗಳ ವಿನೂತನ ಪ್ರತಿಭಟನೆ

- Advertisement -
- Advertisement -

ಅದಾನಿ ಹಗರಣದ ಬಗ್ಗೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸುತ್ತಿದ್ದರೂ ಕೇಂದ್ರ ಸರ್ಕಾರ ಮಾತ್ರ ಕಿವುಡಾಗಿದೆ, ಆ ಬಗ್ಗೆ ಮಾತೇ ಆಡುತ್ತಿಲ್ಲ. ಹಾಗಾಗಿ ಕೇಂದ್ರಕ್ಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ವಿನೂತನವಾಗಿ ಪ್ರತಿಭಟಿಸಿವೆ.

ಮಂಗಳವಾರದ ಸಂಸತ್ತ ಕಲಾಪ ಆರಂಭವಾಗುವುದಕ್ಕೂ ಮುನ್ನ, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪ್ರತಿಪಕ್ಷಗಳ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ‘ವಿನೂತನ’ ಪ್ರತಿಭಟನೆಗೆ ನಿಧಾರ ತಗೆದುಕೊಳ್ಳಲಾಯಿತು.

ಸಂಸತ್ತಿನ ಉಭಯ ಸದನಗಳ ಕಲಾಪವು ಮಂಗಳವಾರ ಮಧ್ಯಾಹ್ನಕ್ಕೆ ಮುಂದೂಡಿಕೆಯಾದ ಬಳಿಕ, 17 ಪ್ರತಿಪಕ್ಷಗಳ ಸಂಸದರು ಸಂಸತ್ ಭವನದ ಮೊದಲ ಮಹಡಿಯಲ್ಲಿರುವ ಎಸ್‌ಬಿಐ ಕಚೇರಿ ಎದುರು ಸೇರಿದರು. ಅದಾನಿ ಸಮೂಹಕ್ಕೆ ಸಾಲ ನೀಡಿರುವ ಎಸ್‌ಬಿಐ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮಂಗಳವಾರ ಸಂಸತ್ತಿನ ಮೊದಲ ಮಹಡಿಯಲ್ಲಿ ಪ್ರತಿಪಕ್ಷಗಳು, ಪ್ರಧಾನಿ ನರೇಂದ್ರ ಮೋದಿ ಹಾಗೂ ಉದ್ಯಮಿ ಗೌತಮ್ ಅದಾನಿ ಅವರ ಭಾವಚಿತ್ರಗಳಿರುವ ಬೃಹತ್ ಗಾತ್ರದ ಬ್ಯಾನರ್‌ನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದವು. ಸಂಸತ್ ಭವನದಲ್ಲಿ ಈ ರೀತಿಯ ದೊಡ್ಡ ಬ್ಯಾನರ್ ನೇತುಹಾಕಿ ಪ್ರತಿಭಟಿಸಿದ್ದು ಇದೇ ಮೊದಲು ಎನ್ನಬಹುದು.

ಆ ಬ್ಯಾನರ್‌ನಲ್ಲಿ ‘ಮೋದಾನಿ’, ‘ನಮಗೆ ಜೆಪಿಸಿ ಬೇಕು’ ಎಂದು ಬರೆಯಲಾಗಿದೆ. ಈ ವೇಳೆ ”ಮೋದಿ ಮತ್ತು ಅದಾನಿ ಅಣ್ಣತಮ್ಮಂದಿರು. ಇಬ್ಬರೂ ಸೇರಿ ದೇಶವನ್ನು ಮಾರುತ್ತಾರೆ” ಎನ್ನುವ ಘೋಷಣೆಗಳನ್ನು ಕೂಗಿ ಪ್ರತಿಪಕ್ಷಗಲು ತಮ್ಮ ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್, ಎಎಪಿ, ಬಿಆರ್‌ಎಸ್, ಡಿಎಂಕೆ, ಸಿಪಿಎಂ, ಸಿಪಿಐ, ಆರ್‌ಜೆಡಿ, ಎನ್‌ಸಿಪಿ ಹಾಗೂ ಎಸ್‌ಪಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಒಳಮೀಸಲಾತಿಯ ಮುಂಚೂಣಿ ನಾಯಕ ಅಂಬಣ್ಣ, ಬಿ.ಗೋಪಾಲ್ ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆ

ಈ ಪ್ರತಿಪಕ್ಷಗಳ ಪ್ರತಿಭಟನೆಯಿಂದ ತೃಣಮೂಲ ಕಾಂಗ್ರೆಸ್ ಮತ್ತೆ ಅಂತರ ಕಾಯ್ದುಕೊಂಡಿದೆ. ಪ್ರತಿಪಕ್ಷಗಳ ಗುಂಪಿನಲ್ಲಿದ್ದರೂ, ಪ್ರತ್ಯೇಕ ಮಾರ್ಗ ಅನುಸರಿಸುತ್ತಿರುವ ಟಿಎಂಸಿ, ಅದಾನಿ ವಿಚಾರವಾಗಿ ಪ್ರತ್ಯೇಕ ಪ್ರತಿಭಟನೆ ಹಮ್ಮಿಕೊಂಡಿತ್ತು. ಅದಾನಿಯನ್ನು ಬಂಧಿಸಿ ಎಂಬ ಬರಹವುಳ್ಳ ಹಾಗೂ ಎಲ್ಲ ಟಿಎಂಸಿ ಸಂಸದರ ಸಹಿ ಇರುವ ಟೋಪಿಯನ್ನು ಧರಿಸಿ ಸಂಸದರು ಸಂಸತ್ ಭವನದ ಪಕ್ಷದ ಕಚೇರಿಯಿಂದ ವಿಜಯ್ ಚೌಕದವರೆಗೆ ಮೆರವಣಿಗೆ ನಡೆಸಿದರು.

”ಹಣಕಾಸು ಸಚಿವರು, ಸೆಬಿ, ಎಲ್‌ಐಸಿ, ಎಸ್‌ಬಿಐ ಮುಖ್ಯಸ್ಥರಿಗೆ ಟೋಪಿಯನ್ನು ನೀಡಲಾಗುವುದು” ಎಂದು ರಾಜ್ಯಸಭೆಯಲ್ಲಿ ಟಿಎಂಸಿ ಪಕ್ಷದ ನಾಯಕರಾಗಿರುವ ಡೆರೆಕ್ ಒಬ್ರಿಯನ್ ತಿಳಿಸಿದರು.

ಅದಾನಿ ಪ್ರಕರಣದಲ್ಲಿ ಪಕ್ಷವು ಮೆದುವಾಗಿ ನಡೆದುಕೊಳ್ಳುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಟಿಎಂಸಿ, ಅದಾನಿಯನ್ನು ಬಂಧಿಸಿ ಎಂದು ಆಗ್ರಹಿಸಿರುವ ಏಕೈಕ ಪಕ್ಷ ತಮ್ಮದು ಎಂದು ಹೇಳಿಕೊಂಡಿದೆ.

ಸಂಸತ್ ಕಲಾಪದ ಬಿಕ್ಕಟ್ಟನ್ನು ಪರಿಹರಿಸುವ ಕುರಿತು ಮಂಗಳವಾರ ರಾಜ್ಯಸಭೆಯ ಸಭಾಪತಿ ಜಗದೀಪ್‌ ಧನಕರ್ ಅವರು, ಕರೆದಿದ್ದ ಎರಡು ಸಭೆಗಳಿಗೆ ಪ್ರತಿಪಕ್ಷದ ಸದಸ್ಯರು ಹಾಜರಾಗಲಿಲ್ಲ. ”ಸರ್ಕಾರ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚನೆಗೆ ಸಿದ್ಧವಿಲ್ಲ ಎಂಬುದು ಈ ನಡೆಯಿಂದ ಗೊತ್ತಾಗುತ್ತದೆ. ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಸರ್ಕಾರದ ಜೊತೆ ಸಭೆ ನಡೆಸುವುದರಲ್ಲಿ ಅರ್ಥವಿಲ್ಲ” ಎಂದು ಪ್ರತಿಪಕ್ಷಗಳು ಹೇಳಿವೆ.

ಸಭೆಯಲ್ಲಿ ಬಿಜೆಪಿ, ವೈಎಸ್‌ಆರ್ ಕಾಂಗ್ರೆಸ್ ಹಾಗೂ ಟಿಡಿಪಿ ಪಕ್ಷಗಳು ಭಾಗಿಯಾಗಿದ್ದವು. ಇನ್ನುಳಿದ ಪ್ರತಿಪಕ್ಷಗಳು ಸಭೆಗೆ ಹಾಜರಾಗದಿರುವುದು ಸರಿಯಯಾದ ವರ್ತನೆಯಲ್ಲ. ಸಭೆಗೂ ಮುನ್ನ ತಮ್ಮನ್ನು ಭೇಟಿಯಾಗಿದ್ದ ಕಾಂಗ್ರೆಸ್ ಮುಖ್ಯ ಸಚೇತಕ ಮತ್ತು ಡಿಎಂಕೆ ಸದನ ನಾಯಕರು ಸಭೆಗೆ ಹಾಜರಾಗುತ್ತಿಲ್ಲ ಎಂಬುದನ್ನು ತಿಳಿಸಿದ್ದರು ಎಂದು ಧನಕರ್ ಅವರು ಟ್ವೀಟ್ ಮಾಡಿದ್ದಾರೆ.

ಧನಕರ್ ಅವರು ಮಧ್ಯಾಹ್ನ 2.30ಕ್ಕೆ ಮತ್ತೊಂದು ಸಭೆ ಕರೆದಿದ್ದರು. ಈ ಸಭೆಯಲ್ಲಿ ಪ್ರತಿಪಕ್ಷಗಳಾದ ಎನ್‌ಸಿಪಿ, ಡಿಎಂಕೆ ಹಾಗೂ ಟಿಎಂಸಿಯ ಕೆಲವು ಪ್ರತಿನಿಧಿಗಳು ಕಾಣಿಸಿಕೊಂಡರು. ಸಭಾಪತಿಗೆ ಪದೇಪದೇ ಅಗೌರವ ತೋರಬಾರದು ಎನ್ನುವ ಕಾರಣಕ್ಕೆ ಕೆಲವರನ್ನು ಸಭೆಗೆ ಕಳುಹಿಸಲು ಪ್ರತಿಪಕ್ಷಗಳು ತೀರ್ಮಾನಿಸಿದ್ದವು ಎಂದು ಮೂಲಗಳು ಹೇಳಿವೆ.

ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳು ತಮ್ಮ ವಿಷಯಗಳನ್ನು ಪಕ್ಕಕ್ಕಿಡಬೇಕು ಎಂದು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಲೋಕಸಭೆ ಸ್ಪೀಕರ್ ಓ ಬಿರ್ಲಾ ಅವರು ಸಲಹೆ ನೀಡಿದ್ದಾರೆ. ಆಡಳಿತರೂಢ ಬಿಜೆಪಿ ಇದಕ್ಕೆ ಒಪ್ಪಿಕೊಂಡಿತು. ಆದರೆ, ಅದಾನಿ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸುವುದನ್ನು ಮುಂದುವರಿಸುವುದಾಗಿ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದರು. ಇದೇ ವೇಳೆ ಅವರು, ರಾಹುಲ್ ಅವರಿಗೆ ಮಾತನಾಡಲು ಅವಕಾಶ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...