Homeಮುಖಪುಟಮೋದಿ ಅದಾನಿಯ ಪ್ರಧಾನಿ, ಭಾರತದ ಪ್ರಧಾನಿಯಲ್ಲ: ಸಂಜಯ್ ಸಿಂಗ್ ಗೇಲಿ

ಮೋದಿ ಅದಾನಿಯ ಪ್ರಧಾನಿ, ಭಾರತದ ಪ್ರಧಾನಿಯಲ್ಲ: ಸಂಜಯ್ ಸಿಂಗ್ ಗೇಲಿ

- Advertisement -
- Advertisement -

ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಅಲ್ಲ, ಅವರು ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ಪ್ರಧಾನಿ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಶುಕ್ರವಾರ ಹೇಳಿದ್ದಾರೆ.

ದೆಹಲಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಜಯ್ ಸಿಂಗ್ ಅವರನ್ನು ದೆಹಲಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಕೆಲವೇ ನಿಮಿಷಗಳ ಮೊದಲು ಮಾತನಾಡಿರುವ ವೀಡಿಯೋ ವೈರಲ್ ಆಗಿದ್ದು, ಆ ವಿಡಿಯೋವನ್ನು ಎಎಪಿ ಎಕ್ಸ್‌ನಲ್ಲಿ ಹಂಚಿಕೊಂಡಿದೆ.

ಸಂಜಯ್ ಸಿಂಗ್‌ ಅವರನ್ನು ಪೋಲೀಸ್ ಸಿಬ್ಬಂದಿಯಿಂದ ಹೊರಹಾಕುತ್ತಿರುವುದನ್ನು ಆ ವಿಡಿಯೋದಲ್ಲಿ ನೋಡಬಹುದು. ಈ ವೇಳೆ ಮಾಧ್ಯಮ ಪ್ರತಿನಿಧಿಯನ್ನು ನೋಡಿದ ಎಎಪಿ ನಾಯಕ ಸಿಂಗ್, ಪ್ರಧಾನಿ ನರೇಂದ್ರ ಮೋದಿಯವರನ್ನು ಗೇಲಿ ಮಾಡುವ ಅವಕಾಶವನ್ನು ಬಳಸಿಕೊಂಡರು.

”ಮೋದಿ ಜಿ ಅದಾನಿಯ ಪ್ರಧಾನಿ, ಭಾರತದ್ದಲ್ಲ… ಅದಾನಿ ಹಗರಣದ ತನಿಖೆ ಯಾವಾಗ?” ಎಂದು ಅವರು ಕೇಳಿದರು.

ನ್ಯಾಯಾಲಯ ಇಂದು ಅವರನ್ನು ಅಕ್ಟೋಬರ್ 27 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಹಿಂದೆ ನೀಡಲಾಗಿದ್ದ ಕಸ್ಟಡಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಸಿಂಗ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ವಿಶೇಷ ನ್ಯಾಯಾಧೀಶ ಎಂ ಕೆ ನಾಗ್ಪಾಲ್ ಅವರನ್ನು ಜೈಲಿಗೆ ಕಳುಹಿಸಿದ್ದಾರೆ.

ಸಿಂಗ್ ಅವರನ್ನು ಅಕ್ಟೋಬರ್ 4 ರಂದು ಬಂಧಿಸಲಾಗಿತ್ತು. ಮದ್ಯ ನೀತಿಯನ್ನು ರೂಪಿಸಿ ಅನುಷ್ಠಾನಗೊಳಿಸುವಲ್ಲಿ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಇಡಿ ಆರೋಪಿಸಿದೆ.

ಇದನ್ನೂ ಓದಿ: ಅಬಕಾರಿ ನೀತಿ ಪ್ರಕರಣ: ಬಂಧನ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಸಂಜಯ್ ಸಿಂಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...