Homeಕರ್ನಾಟಕನಿಜವಾದ ಡ್ರಗ್ ಡೀಲರ್, ಡ್ರಗ್ ಪೆಡ್ಲರ್‌‌ ಎಂದರೆ ಮೋದಿ, ಅಮಿತ್ ಶಾ: ರಕ್ಷಾ ರಾಮಯ್ಯ

ನಿಜವಾದ ಡ್ರಗ್ ಡೀಲರ್, ಡ್ರಗ್ ಪೆಡ್ಲರ್‌‌ ಎಂದರೆ ಮೋದಿ, ಅಮಿತ್ ಶಾ: ರಕ್ಷಾ ರಾಮಯ್ಯ

ಸುಮಾರು 20,000 ಕೋಟಿ ರೂ. ಮೌಲ್ಯದ ಹೆರಾಯಿನ್‌‌ ಗುಜರಾತ್‌‌ನ ಅದಾನಿ ಬಂದರಿನಲ್ಲಿ ಪತ್ತೆಯಾಗಿದ್ದನ್ನು ಉಲ್ಲೇಖಿಸಿ ನಳೀನ್‌ ಕುಮಾರ್‌ ಕಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಡ್ರಗ್, ಪ್ರಡ್ಲರ್ ಎಂದು ಟೀಕಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ತಿರುಗೇಟು ನೀಡಿರುವ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ, “ನಿಜವಾದ ಡ್ರಗ್ ಡೀಲರ್, ಡ್ರಗ್ ಪ್ಲಡ್ಲರ್ ಎಂದರೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ” ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಅವರ ಮೇಲೆ ಮಾಡಿರುವ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಗುಜರಾತ್‌‌ನ ಅದಾನಿ ಮಾಲೀಕತ್ವದ ಬಂದರಿನಲ್ಲಿ ಮೂರು ಸಾವಿರ ಕೆ.ಜಿ. ಹೆರಾಯಿನ್ ಪತ್ತೆಯಾಗಿದ್ದು, ಈ ಬಗ್ಗೆ ಯಾವುದಾದರೂ ತನಿಖೆ ನಡೆಯುತ್ತಿದೆಯೇ? ಇದಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಗುಜರಾತ್ ಅತಿ ಹೆಚ್ಚು ಮಂದಿ ಡ್ರಗ್ ಪ್ಲಡ್ಲರ್‌ಗಳ ತಾಣವಾಗಿದೆ. ಇವರನ್ನು ದೊಡ್ಡ ದೊಡ್ಡ ರಾಜಕಾರಣಿಗಳು ಪೋಷಿಸುತ್ತಿದ್ದಾರೆ. ತಮ್ಮ ರಾಜ್ಯದ ಈ ಅಕ್ರಮ ವ್ಯವಹಾರದ ಬಗ್ಗೆ ಪ್ರಧಾನಿ, ಕೇಂದ್ರ ಗೃಹ ಸಚಿವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಮಾಲಿಕತ್ವದ ಬಂದರಿನಲ್ಲಿ 20 ಸಾವಿರ ಕೋಟಿ ರೂ.ಗಳ ಹೆರಾಯಿನ್ ವಶ

ಅದಾನಿ ಪೋರ್ಟ್‌ನಲ್ಲಿ ದೊರೆತ ಮಾದಕ ದ್ರವ್ಯದ ಬಗ್ಗೆ ಬಿಜೆಪಿ ಮಟ್ಟದಲ್ಲಿ ಏನಾದರೂ ಚರ್ಚೆಯಾಗಿದೆಯೇ? ಯಾವುದಾದರೂ ಮಾಹಿತಿ ಬಿಡುಗಡೆ ಮಾಡಲಾಗಿದೆಯೇ? ಗುಜರಾತ್‌ನಲ್ಲಿ ಅತಿ ಹೆಚ್ಚು ಮಾದಕ ದ್ರವ್ಯ ದೊರೆಯುತ್ತಿದೆ. ನಿಷೇಧಿತ ಕ್ಯಾಟಮೈನ್ ಮಾದಕ ವಸ್ತು ವಿಶ್ವದಲ್ಲಿಯೇ ಅತಿ ಹೆಚ್ಚು ದೊರೆಯುವ ತಾಣ ಎಂದರೆ ಅದು ಗುಜರಾತ್, ಹೀಗಿರುವಾಗ ರಾಹುಲ್ ಗಾಂಧಿ ಅವರ ಮೇಲೆ ಯಾವ ಉದ್ದೇಶದಿಂದ ಟೀಕೆ ಮಾಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್‌ನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದ್ದರೂ, ಕಾಳಸಂತೆಯಲ್ಲಿ ಅತಿ ಹೆಚ್ಚು ಮದ್ಯ ಸಿಗುತ್ತಿದೆ. ಮದ್ಯ ಮಾರಾಟ ತಡೆಗೆ ಯಾವುದಾದರೂ ಕ್ರಮ ಕೈಗೊಳ್ಳಲಾಗಿದೆಯೇ? ಇದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಅರ್ಥಮಾಡಿಕೊಂಡು ಇನ್ನೊಬ್ಬರ ಬಗ್ಗೆ ಸದಾಶಯದಿಂದ ಮಾತನಾಡಬೇಕು. ಕಟೀಲ್ ಅವರದ್ದು ಅತ್ಯಂತ ಕೀಳು ಅಭಿರುಚಿಯ ಮತ್ತು ಹತಾಶೆಯ ಹೇಳಿಕೆಯಾಗಿದೆ ಎಂದು ರಕ್ಷಾ ರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಅದಾನಿ ಬಂದರಿನಲ್ಲಿ ಮೂರು ಸಾವಿರ ಕೆ.ಜಿ.ಗೂ ಹೆಚ್ಚು ಮಾದಕ ದ್ರವ್ಯ ಪತ್ತೆಯಾಗಿತ್ತು. ಈ ಬಗ್ಗೆ ಯಾವ ತನಿಖೆ ನಡೆಯುತ್ತಿದೆ. ಗುಜರಾತ್ ಮಾದಕ ದ್ರವ್ಯದ ತಾಣವಾಗಿದ್ದು, ಇದು ಗುಜರಾತ್ ಮಾದರಿಯ ಆಡಳಿತವೇ? ಗಾಂಧಿ ನಾಡು ಗುಜರಾತ್‌ನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದ್ದರೂ ಕಾಳಸಂತೆಯಲ್ಲಿ ಅತಿ ಹೆಚ್ಚು ಮದ್ಯ ಅಕ್ರಮವಾಗಿ ಮಾರಾಟವಾಗುತ್ತಿದೆ. ಇದನ್ನು ಮೊದಲು ನಿಯಂತ್ರಿಸಲು ಬಿಜೆಪಿ ನಾಯಕರು ಮುಂದಾಗಲಿ. ನಂತರ ಇನ್ನೊಬ್ಬರ ಬಗ್ಗೆ ಟೀಕಿಸಲಿ ಎಂದಿದ್ದಾರೆ.

ನಳೀನ್ ಕುಮಾರ್ ಕಟೀಲ್ ಅವರನ್ನು ನಿಮ್ಹಾನ್ಸ್‌ಗೆ ಸೇರಿಸಲು ನಮ್ಮ ಪಕ್ಷದಿಂದ ಈಗಾಗಲೇ ಆಂಬುಲೆನ್ಸ್ ಅನ್ನು ಬಿಜೆಪಿ ಕಚೇರಿಗೆ ಕಳುಹಿಸಲಾಗಿದೆ. ಇದೇ ರೀತಿ ರಾಹುಲ್ ಗಾಂಧಿ ಅವರನ್ನು ಟೀಕಿಸಿರುವ ಮತ್ತೊರ್ವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ನಿಮ್ಹಾನ್ಸ್‌ಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಯತ್ನಾಳ್ ಅವರಿಗೂ ಮಾನಸಿಕ ಚಿಕಿತ್ಸೆ ಕೊಡಿಸುತ್ತೇವೆ. ನಳೀನ್ ಕುಮಾರ್ ಕಟೀಲ್ ಹಾಗೂ ಬಸನಗೌಡ ಪಾಟೀಲ್ ವಿರುದ್ಧ ದೊಡ್ಡ ಮಟ್ಟದ ಹೋರಾಟ ಮಾಡುತ್ತೇವೆ. ಬಿಜೆಪಿ ನಾಯಕರ ಇಂತಹ ಧೋರಣೆಯನ್ನು ಯುವ ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ ಎಂದು ರಕ್ಷಾ ರಾಮಯ್ಯ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿರಿ: ಗುಜರಾತ್‌ನಲ್ಲಿ ಹೆರಾಯಿನ್ ವಶ: ಮೋದಿ ಮಿತ್ರ ಅದಾನಿಯ ಪಾತ್ರದ ಬಗ್ಗೆ ತನಿಖೆ ಏಕಿಲ್ಲ?- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...