Homeಅಂತರಾಷ್ಟ್ರೀಯಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ...

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟ ಸಂಭವಿಸಿ 12 ಜನರು ಸಾವಿಗೀಡಾಗಿರುವ ನಡುವೆ ದೊರೆಯ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಭೂತಾನ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಹೊಸ ಇಂಧನ ಯೋಜನೆಗಳನ್ನು ಬೆಂಬಲಿಸಲು 4,000 ಕೋಟಿ ರೂಪಾಯಿ (ಸುಮಾರು 455 ಮಿಲಿಯನ್ ಡಾಲರ್) ಸಾಲವನ್ನು ಘೋಷಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಇದೇ ಸಂದರ್ಭದಲ್ಲಿ, ಭಾರತದ ಬೆಂಬಲದೊಂದಿಗೆ ನಿರ್ಮಿಸಲಾದ 1,020 ಮೆಗಾವ್ಯಾಟ್ ಸಾಮರ್ಥ್ಯದ ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆಯನ್ನೂ ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಅವರೊಂದಿಗೆ ಮೋದಿ ಉದ್ಘಾಟಿಸಿದ್ದಾರೆ.

ರಾಯಿಟರ್ಸ್ ಪ್ರಕಾರ, ಟಾಟಾ ಪವರ್, ಅದಾನಿ ಗ್ರೂಪ್ ಮತ್ತು ರಿಲಯನ್ಸ್ ಪವರ್‌ನಂತಹ ಭಾರತದ ಖಾಸಗಿ ಕಂಪನಿಗಳು ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಜಲವಿದ್ಯುತ್ ಯೋಜನೆಗಳನ್ನು ಅಭಿವೃದ್ಧಿಪಡಿಸಲು ಭೂತಾನ್‌ನ ಡ್ರಕ್ ಗ್ರೀನ್ ಪವರ್ ಕಾರ್ಪೊರೇಷನ್‌ನೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಿವೆ.

ಅತ್ತ ಚೀನಾ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಲು ಮತ್ತು ಭೂತಾನ್‌ನೊಂದಿಗಿನ ತನ್ನ ಗಡಿ ವಿವಾದವನ್ನು ಬಗೆಹರಿಸಲು ಕೆಲಸ ಮಾಡುತ್ತಿದೆ. ಇತ್ತ ಭೂತಾನ್‌ನೊಂದಿಗಿನ ತನ್ನ ಸಂಬಂಧವನ್ನು ಬಲಪಡಿಸಲು ಭಾರತವೂ ಪ್ರಯತ್ನಿಸುತ್ತಿದೆ. ಈ ನಡುವೆ ಮೋದಿ ಭೇಟಿ ನೀಡಿರುವುದು ಮಹತ್ವದ ಪಡೆದಿದೆ.

ಉಭಯ ದೇಶಗಳ ನಾಯಕರು (ಮೋದಿ ಮತ್ತು ಭೂತಾನ್ ದೊರೆ) ಪುನತ್ಸಂಗ್ಚು-IIಯೋಜನೆಯನ್ನು ಉದ್ಘಾಟಿಸಿದ್ದಾರೆ. ಈ ಯೋಜನೆ ಭೂತಾನಿನ ಒಟ್ಟು ಜಲವಿದ್ಯುತ್ ಸಾಮರ್ಥ್ಯವನ್ನು ಸುಮಾರು 40 ಶೇಕಡ ಹೆಚ್ಚಿಸುತ್ತದೆ. ಇದು ಭೂತಾನಿನಲ್ಲಿ ಭಾರತದ ಬೆಂಬಲದೊಂದಿಗೆ ಕಾರ್ಯರೂಪಕ್ಕೆ ಬಂದ ಐದನೇ ಪ್ರಮುಖ ಜಲವಿದ್ಯುತ್ ಯೋಜನೆಯಾಗಿದೆ. ಈ ಮೂಲಕ ಭಾರತದ ನೆರವಿನ ವಿದ್ಯುತ್ ಯೋಜನೆಗಳ ಒಟ್ಟು ಉತ್ಪಾದನಾ ಸಾಮರ್ಥ್ಯ ಸುಮಾರು 3 ಸಾವಿರ ಮೆಗಾವ್ಯಾಟ್‌ಗಳಿಗೆ ಏರಿಕೆಯಾಗಲಿದೆ ಎಂದು ವರದಿಗಳು ಹೇಳಿವೆ.

ವ್ಯಾಪಾರ ಮತ್ತು ಪ್ರಾದೇಶಿಕ ಬೆಳವಣಿಗೆಗೆ ಸಂಪರ್ಕವನ್ನು ಸುಧಾರಿಸುವ ಮಾರ್ಗಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದ್ದಾರೆ. ಇದು ವ್ಯಾಪಾರ ಮತ್ತು ಪ್ರಾದೇಶಿಕ ಬೆಳವಣಿಗೆಗೆ ಅತ್ಯಗತ್ಯ. “ಸಂಪರ್ಕವು ಅವಕಾಶವನ್ನು ಸೃಷ್ಟಿಸುತ್ತದೆ, ಅವಕಾಶವು ಸಮೃದ್ಧಿಯನ್ನು ಸೃಷ್ಟಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತವು ಭೂತಾನ್‌ನ ಗೆಲೆಫು ಮತ್ತು ಸ್ಯಾಮ್ಟ್ಸೆಯನ್ನು ಭಾರತದ ರೈಲು ಜಾಲಕ್ಕೆ ಸಂಪರ್ಕಿಸಲಿದೆ. ಇದು ಪೂರ್ಣಗೊಂಡ ನಂತರ, ಭೂತಾನಿನ ರೈತರು ಮತ್ತು ಕೈಗಾರಿಕೆಗಳು ಭಾರತದ ದೊಡ್ಡ ಮಾರುಕಟ್ಟೆಗಳಿಗೆ ಸುಲಭವಾಗಿ ಪ್ರವೇಶವನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಮೋದಿ ತಿಳಿಸಿದ್ದಾರೆ.

ಭೂತಾನಿನ ಮಾಜಿ ಇಂಧನ ಸಚಿವ ಲೋಕನಾಥ್ ಶರ್ಮಾ ಅವರು, “ಭೂತಾನ್ ತನ್ನ ಸ್ವಂತ ಇಂಧನ ಅಗತ್ಯಗಳನ್ನು (ಸುಮಾರು 1,000 ಮೆಗಾವ್ಯಾಟ್) ಪೂರೈಸಿದ ನಂತರ, ಹೆಚ್ಚುವರಿ ವಿದ್ಯುತ್ ಅನ್ನು ಭಾರತಕ್ಕೆ ರಫ್ತು ಮಾಡಲಿದೆ” ಎಂದು ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ, ಅದಾನಿ ಪವರ್ ಮತ್ತು ಭೂತಾನ್‌ನ ಡ್ರಕ್ ಗ್ರೀನ್ ಪವರ್ ಕಾರ್ಪ್ 570 ಮೆಗಾವ್ಯಾಟ್ ವಾಂಗ್ಚು ಜಲವಿದ್ಯುತ್ ಯೋಜನೆಯನ್ನು ನಿರ್ಮಿಸಲು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿವೆ. ಭೂತಾನ್‌ನ ಪ್ರಧಾನಿ ತ್ಸೆರಿಂಗ್ ಟೋಬ್ಗೇ ಮತ್ತು ಗೌತಮ್ ಅದಾನಿ ಅವರ ಬೆಂಬಲದೊಂದಿಗೆ 6,000 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯು ಭೂತಾನ್‌ನ ಚಳಿಗಾಲದ ವಿದ್ಯುತ್ ಅಗತ್ಯಗಳನ್ನು ಪೂರೈಸಲು ಮತ್ತು ಬೇಸಿಗೆಯಲ್ಲಿ ಭಾರತಕ್ಕೆ ಹೆಚ್ಚುವರಿ ಶಕ್ತಿಯನ್ನು ರಫ್ತು ಮಾಡಲು ಸಹಾಯ ಮಾಡುತ್ತದೆ ಎಂದು ವರದಿಯಾಗಿದೆ.

ಅದಾನಿ ಗ್ರೂಪ್‌ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಈ ಯೋಜನೆಯ ನಿರ್ಮಾಣ ಕಾರ್ಯವು 2026ರ ಮೊದಲಾರ್ಧದ ವೇಳೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಇದನ್ನು ಐದು ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ. “ಸುಸ್ಥಿರ ಅಭಿವೃದ್ಧಿಯಲ್ಲಿ ಭೂತಾನ್ ಜಗತ್ತಿಗೆ ಮಾದರಿಯಾಗಿದೆ, ಮತ್ತು ಈ ನವೀಕರಿಸಬಹುದಾದ ಇಂಧನ ಯೋಜನೆಯ ಮೂಲಕ ದೇಶದ ನೈಸರ್ಗಿಕ ಸಂಪನ್ಮೂಲಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲು ನಾವು ತುಂಬಾ ಉತ್ಸುಕರಾಗಿದ್ದೇವೆ. ವಾಂಗ್ಚು ಜಲವಿದ್ಯುತ್ ಯೋಜನೆಯು ಜಲವಿದ್ಯುತ್ ಉತ್ಪಾದನೆ ಕಡಿಮೆ ಇರುವಾಗ ಭೂತಾನ್‌ನ ಚಳಿಗಾಲದ ಗರಿಷ್ಠ ಬೇಡಿಕೆಯನ್ನು ನಿರ್ಣಾಯಕವಾಗಿ ಪೂರೈಸುತ್ತದೆ. ಬೇಸಿಗೆಯ ತಿಂಗಳುಗಳಲ್ಲಿ, ಇದು ಭಾರತಕ್ಕೆ ವಿದ್ಯುತ್ ರಫ್ತು ಮಾಡುತ್ತದೆ” ಎಂದು ಅದಾನಿ ಪವರ್‌ನ ಸಿಇಒ ಎಸ್‌ಬಿ ಖಯಾಲಿಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭೂತಾನಿನ ಮೈಂಡ್‌ಫುಲ್‌ನೆಸ್ ಸಿಟಿ ಯೋಜನೆಗೆ ಬೆಂಬಲ

ಭೂತಾನಿನ ದೊರೆ ಜಿಗ್ಮೆ ಸಿಂಗ್ಯೆ ವಾಂಗ್‌ಚುಕ್ ಅವರ 70 ನೇ ಹುಟ್ಟುಹಬ್ಬದ ಆಚರಣೆಯೊಂದಿಗೆ ಪ್ರಧಾನಿ ಮೋದಿಯವರ ಎರಡು ದಿನಗಳ ಭೇಟಿ ಪ್ರಾರಂಭವಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ ಅವರು, ಎರಡೂ ರಾಷ್ಟ್ರಗಳ ನಡುವಿನ ನಿಕಟ ಸ್ನೇಹವನ್ನು ಶ್ಲಾಘಿಸಿದ್ದಾರೆ. “ಭಾರತ ಮತ್ತು ಭೂತಾನ್ ನಡುವಿನ ನಂಬಿಕೆ ಮತ್ತು ಅಭಿವೃದ್ಧಿಯ ಪಾಲುದಾರಿಕೆ ಇಡೀ ಪ್ರದೇಶಕ್ಕೆ ಮಾದರಿಯಾಗಿದೆ. ನಮ್ಮ ಎರಡೂ ದೇಶಗಳು ವೇಗವಾಗಿ ಪ್ರಗತಿ ಹೊಂದುತ್ತಿರುವಾಗ, ನಮ್ಮ ಇಂಧನ ಪಾಲುದಾರಿಕೆ ಈ ಬೆಳವಣಿಗೆಯನ್ನು ಮತ್ತಷ್ಟು ವೇಗಗೊಳಿಸುತ್ತಿದೆ” ಎಂದಿದ್ದಾರೆ.

ಅಭಿವೃದ್ಧಿಯನ್ನು ಆಧ್ಯಾತ್ಮಿಕ ಮತ್ತು ಪರಿಸರ ಯೋಗಕ್ಷೇಮದೊಂದಿಗೆ ಸಂಯೋಜಿಸುವ ಗುರಿಯನ್ನು ಹೊಂದಿರುವ ಗೆಲೆಫು ಮೈಂಡ್‌ಫುಲ್‌ನೆಸ್ ಸಿಟಿ ಯೋಜನೆಗೆ ಭಾರತವು ಭೂತಾನ್‌ಗೆ ಸಹಾಯ ಮಾಡಲಿದೆ. ಇದನ್ನು ಬೆಂಬಲಿಸಲು, ಪ್ರಧಾನಿ ಮೋದಿ ಗೆಲೆಫು ಬಳಿ ಹೊಸ ವಲಸೆ ಚೆಕ್‌ಪಾಯಿಂಟ್ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ ಎಂದು ವರದಿಗಳು ಹೇಳಿವೆ.

ರಸ್ತೆಗಳು, ಕೃಷಿ, ಆರೋಗ್ಯ ರಕ್ಷಣೆ ಮತ್ತು ಹಣಕಾಸು ಮುಂತಾದ ಕ್ಷೇತ್ರಗಳಲ್ಲಿನ ಯೋಜನೆಗಳನ್ನು ಬೆಂಬಲಿಸುವ ಭೂತಾನಿನ ಪ್ರಸ್ತುತ ನಡೆಯುತ್ತಿರುವ ಪಂಚವಾರ್ಷಿಕ ಯೋಜನೆಗೆ ಭಾರತವು ಈ ಹಿಂದೆ ನೀಡಿದ 10,000 ಕೋಟಿಗಳ ನೆರವನ್ನು ಮೋದಿ ನೆನಪಿಸಿಕೊಂಡಿದ್ದಾರೆ. ಭೇಟಿಯ ಸಮಯದಲ್ಲಿ, ನವೀಕರಿಸಬಹುದಾದ ಇಂಧನ, ಆರೋಗ್ಯ ರಕ್ಷಣೆ ಮತ್ತು ಔಷಧ ಮತ್ತು ಮಾನಸಿಕ ಆರೋಗ್ಯ ಸೇವೆಗಳಲ್ಲಿ ಸಹಕರಿಸಲು ಉಭಯ ನಾಯಕರು ಮೂರು ಹೊಸ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ ಎಂದು ವರದಿಗಳು ವಿವರಿಸಿವೆ.

‘Tryst with Destiny’ : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...