Homeಮುಖಪುಟವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ - ಬಂಧನ!

ವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ – ಬಂಧನ!

ಆತನ ಮೇಲೆ ವಿಮಾನ ಸುರಕ್ಷತೆಗೆ ಅಪಾಯ ಉಂಟುಮಾಡಿದ ಪ್ರಕರಣ ದಾಖಲಾಗಿದೆ. ಅಪರಾಧ ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

- Advertisement -
- Advertisement -

ಪ್ಯಾರಿಸ್‌ನಿಂದ ನವದೆಹಲಿಗೆ ಹೋಗುವ ಮಾರ್ಗದಲ್ಲಿ ಏರ್ ಫ್ರಾನ್ಸ್ ವಿಮಾನವೊಂದು ಬಲ್ಗೇರಿಯಾದ ಸೋಫಿಯಾ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಬೇಕಾದ ಘಟನೆ ನಡೆದಿದೆ. ಇದಕ್ಕೆ ಕಾರಣವಾದದ್ದು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದ ಭಾರತೀಯ ಪ್ರಯಾಣಿಕರೊಬ್ಬರ ಅಶಿಸ್ತು ಮತ್ತು ಪ್ರಯಾಣಿಕರಿಗೆ ಬೆದರಿಕೆ ಒಡ್ಡುವ ವರ್ತನೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಪ್ರಯಾಣಿಕನ ಹೆಸರನ್ನು ಸಂಸ್ಥೆ ಬಹಿರಂಗಪಡಿಸಿಲ್ಲ. ತಕ್ಷಣ ತುರ್ತು ನಿಲುಗಡೆ ಮಾಡಿ ವ್ಯಕ್ತಿಯನ್ನು ವಿಮಾನದಿಂದ ಇಳಿಸಲಾಗಿದೆ. ಆತನ ಮೇಲೆ ವಿಮಾನ ಸುರಕ್ಷತೆಗೆ ಅಪಾಯ ಉಂಟುಮಾಡಿದ ಪ್ರಕರಣ ದಾಖಲಾಗಿದೆ. ಅಪರಾಧ ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ನಡೆದದ್ದು ಏನು…?

ಬಲ್ಗೇರಿಯಾದ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಯಾಗಿದ್ದ ಇವಾಯಿಲೊ ಏಂಜೆಲೋವ್ ಅವರನ್ನು ಉಲ್ಲೆಖಿಸಿರುವ ರಾಯಿಟರ್ಸ್, ’ವಿಮಾನ ಟೇಕ್-ಆಫ್ ಆದ ಕೂಡಲೇ  ಬಂಧಿತ ವ್ಯಕ್ತಿ ವಿಚಿತ್ರವಾಗಿ ವರ್ತಿಸಲು ಪ್ರಾರಂಭಿಸಿದನು. ಇತರ ಪ್ರಯಾಣಿಕರೊಂದಿಗೆ ಜಗಳವಾಡಿದ್ದಾರೆ. ವಿಮಾನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ,  ಹಲವಾರು ಸಲ ಕಾಕ್ ಪಿಟ್ ಬಾಗಿಲನ್ನು ಹೊಡೆಯಲು ಆರಂಭಿಸಿದ್ದರು’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

ವಿಮಾನದಲ್ಲಿದ್ದ ಸಿಖ್ ಪ್ಯಾಸೆಂಜರ್‌ಗಳನ್ನು ಬೊಟ್ಟು ಮಾಡಿ ಮೋದಿ ಮೋದಿ ಎಂದು ಜೋರಾಗಿ ಕಿರುಚಾಡತೊಡಗಿದ್ದಾರೆ,  ಸಿಖ್ ಯುವಕರು ಪ್ರತಿಕ್ರಿಯಿಸಿದಾಗ ಅವರನ್ನು ಬೈಯುತ್ತಾ ಜಗಳಕ್ಕೆ ನಿಂತಿದ್ದಾರೆ. ವಿಮಾನದ ಪರಿಚಾರಕರು ಮತ್ತು ಸಹಯಾತ್ರಿಕರು ಕೂಡಾ ವಿರೋಧಿಸಿದಾಗ ಅವರ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಸಹ ಪ್ರಯಾಣಿಕರ ಗುರುತಿನ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ವಿಡಿಯೋದಲ್ಲಿ ಕೇಳಬಹುದು, “ಯೇಸು ಇನ್ನು ಹೊರಡಬೇಕಾಗುತ್ತದೆ” ಮತ್ತು “ಉಡ್ತಾ ಪಂಜಾಬ್”, ಜೈ ಹಿಂದ್, ಮೋದಿ ಎಂದು ಜೋರು ಜೋರಾಗಿ ಕೂಗುತ್ತಾನೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಪ್ರಕರಣ: ಪಿಣರಾಯಿ ವಿಜಯನ್ ಹೆಸರನ್ನು ಉಲ್ಲೇಖಿಸುವಂತೆ ಆರೋಪಿಗೆ ಒತ್ತಡ!

’ಉಡ್ತಾ ಪಂಜಾಬ್’ ಹೆಸರಿನ ಬಾಲಿವುಡ್ ಚಲನಚಿತ್ರವೊಂದರಲ್ಲಿ ಪಂಜಾಬ್‌ನಲ್ಲಿ ಡ್ರಗ್ಸ್ ಸರಬರಾಜು, ಬಳಕೆ ಬಗ್ಗೆ ಅತಿರೇಕದ ವಿಚಾರಗಳನ್ನು ತೋರಿಸಲಾಗಿತ್ತು.

“ಮೋದಿ, ನನ್ನ ಸಹೋದರ ಮೋದಿ … ಮೋದಿ, ಮೋದಿ,” ಎಂದು ಆ ವ್ಯಕ್ತಿ ಹೇಳುತ್ತಾರೆ. “ಮೋದಿ ಕರೆ ಮಾಡುತ್ತಿದ್ದಾರೆ, ಇಲ್ಲಿಗೆ ಬನ್ನಿ” ಎಂಬ ಅಸಂಬದ್ಧ ಮಾತುಗಳನ್ನು ಆಡುತ್ತಾ, ಕಿರುಚುತ್ತಾ ಸಹ ಪ್ರಯಾಣಿಕರಿಗೆ ತೊಂದರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುತ್ತಾರೆ. ವಿಮಾನ ಸಿಬ್ಬಂದಿ ತಡೆಯಲು ಬಂದರೆ ಅವರ ಮೇಲೂ ಹಲ್ಲೆ ಮಾಡಿದ್ದಾನೆ. ಕೆಲವು ಸೆಕೆಂಡುಗಳ ನಂತರ, ತನ್ನ ಸುತ್ತಲಿನವರನ್ನು ನಿಂದಿಸುತ್ತಾ ಬೆದರಿಕೆ ಹಾಕಿದ್ದಾನೆ.

ಆರೋಪಿಯ ವರ್ತನೆಗೆ ಯಾವುದೇ ಸಮಂಜಸವಾದ ವಿವರಣೆಯಿಲ್ಲ, ನಾವು ಅವರ ಕಾರ್ಯಗಳು ಮತ್ತು ಉದ್ದೇಶಗಳನ್ನು ತನಿಖೆ ಮಾಡುತ್ತಿದ್ದೇವೆ” ಎಂದು ತನಿಖಾ ಸಂಸ್ಥೆ ಅಧಿಕಾರಿ ಇವಾಯಿಲೊ ಏಂಜೆಲೋವ್ ಹೇಳಿದ್ದಾರೆ.

ಸದ್ಯ ಈ ವ್ಯಕ್ತಿಗೆ ನ್ಯಾಯಾಲಯದಿಂದ ನೇಮಕಗೊಂಡ ರಕ್ಷಣಾ ವಕೀಲ ಮತ್ತು ಇಂಟರ್ಪ್ರಿಟರ್ ನೀಡಲಾಗಿದೆ. ಅವರ ಅಶಿಸ್ತಿನ ವರ್ತನೆಯ ಬಗ್ಗೆ ಬಲ್ಗೇರಿಯಾದ ಭಾರತದ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ವಿಡಿಯೋ ಹಂಚಿಕೊಂಡಿರುವ ನೆಟ್ಟಿಗರು ಭಾರತದ ಮರ್ಯಾದೆ ತೆಗೆದಿದ್ದಾನೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಮತ್ತೆ ಕೆಲವರು ಶೇಮ್ ಶೇಮ್ ಎಂದಿದ್ದಾರೆ. ಇನ್ನೊಬ್ಬರು ಪ್ರಧಾನಿ ಮೋದಿಯವರನ್ನು ಟ್ಯಾಗ್ ಮಾಡಿ ಶುಭಾಶಯಗಳು ಎಂದು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ದೇವಸ್ಥಾನದ ಕಾಣಿಕ ಡಬ್ಬಿ ಕಳವು: ಬಜರಂಗದಳ ಸಂಚಾಲಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...