Homeಮುಖಪುಟಮೋದಿ ಸಂಪುಟ: ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಿವಸೇನೆ ಸಂಸದ ಬಾರ್ನೆ

ಮೋದಿ ಸಂಪುಟ: ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಿವಸೇನೆ ಸಂಸದ ಬಾರ್ನೆ

- Advertisement -
- Advertisement -

ಎನ್‌ಸಿಪಿ ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಅವರಿಗೆ ಕ್ಯಾಬಿನೆಟ್‌ ದರ್ಜೆಯ ಸಚಿವ ಸ್ಥಾನ ನೀಡಬೇಕೆಂಬ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಬೇಡಿಕೆ ನಂತರ, ಶಿಂಧೆ ಬಣದ ನೂತನ ಸಂಸದ ಶ್ರೀರಂಗ್ ಬಾರ್ನೆ ಅವರೂ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಂಧೆ ಬಣದ ಸಂಸದ ಶ್ರೀರಂಗ್ ಬಾರ್ನೆ ಅವರು ಬಿಜೆಪಿಯ ಪಕ್ಷಪಾತದ ಆರೋಪ ಮಾಡಿದ್ದು, ಹೊಸದಾಗಿ ರಚನೆಯಾದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಂಪುಟದಿಂದ ಪಕ್ಷವನ್ನು ಹೊರಗಿಟ್ಟಿರುವ ಬಗ್ಗೆ ನಿರಾಶೆ ವ್ಯಕ್ತಪಡಿಸಿದರು. ರಾಷ್ಟ್ರಪತಿ ಭವನದಲ್ಲಿ ಮೋದಿ ಸಂಪುಟ ಪ್ರಮಾಣ ವಚನ ಸ್ವೀಕರಿಸಿದ ಕೇವಲ ಒಂದು ದಿನದ ನಂತರ ಈ ಹೇಳಿಕೆ ಬಂದಿದೆ.

ಗಮನಾರ್ಹವೆಂದರೆ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಭಾಗವೂ ಸಹ ಕ್ಯಾಬಿನೆಟ್ ಸ್ಥಾನಕ್ಕಾಗಿ ಒತ್ತಾಯಿಸಿದೆ ಮತ್ತು ರಾಜ್ಯ ಸಚಿವ ಸ್ಥಾನದ ಪ್ರಸ್ತಾಪವನ್ನು ತಿರಸ್ಕರಿಸಿದೆ.

‘ಶಿವಸೇನೆಗೆ ಕ್ಯಾಬಿನೆಟ್ ಸಚಿವ ಸ್ಥಾನ ಸಿಗುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು’

ಶಿವಸೇನೆಯ (ಯುಬಿಟಿ) ಸಂಜೋಗ್ ವಾಘೆರೆ ಪಾಟೀಲ್ ಅವರನ್ನು ಸೋಲಿಸುವ ಮೂಲಕ ಮಾವಲ್ ಕ್ಷೇತ್ರದಲ್ಲಿ ಸತತ ಮೂರನೇ ಬಾರಿಗೆ ಬಾರ್ನೆ ಗೆಲುವು ಸಾಧಿಸಿದ್ದಾರೆ. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಶಿವಸೇನೆ ಏಳು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೂ, ಪಕ್ಷಕ್ಕೆ ಕೇವಲ ರಾಜ್ಯ ದರ್ಜೆ ಸಚಿವ ಸ್ಥಾನವನ್ನು ನೀಡಲಾಗಿದೆ ಎಂದು ಹೇಳಿದರು.

ಎಚ್‌.ಡಿ. ಕುಮಾರಸ್ವಾಮಿ ಮತ್ತು ಜಿತನ್ ರಾಮ್ ಮಾಂಝಿ ಅವರಂತಹ ನಾಯಕರು ಕ್ರಮವಾಗಿ ಎರಡು ಮತ್ತು ಒಂದು ಸ್ಥಾನವನ್ನು ಗೆದ್ದ ಪಕ್ಷಗಳನ್ನು ಕೇಂದ್ರ ಕ್ಯಾಬಿನೆಟ್ ಮಂತ್ರಿಗಳಾಗಿ ನೇಮಿಸಲಾಗಿದೆ ಎಂದು ಅಸಮಾಧಾನ ಹೊರಹಾಕಿರುವ ಬಾರ್ನೆ. ಸತಾರದ ಬಿಜೆಪಿ ಸಂಸದ ಉದಯನರಾಜೆ ಭೋಸಲೆ ಅವರು ಸಂಪುಟ ಸ್ಥಾನಕ್ಕೆ ಅರ್ಹರು ಎಂದು ಅವರು ಒತ್ತಿ ಹೇಳಿದರು.

“ಶಿವಸೇನೆಗೆ ಕ್ಯಾಬಿನೆಟ್ ಮಂತ್ರಿಗಿರಿ ಸಿಗುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು. ಆದರೆ, ಕೇವಲ ಒಂದು ಸ್ಥಾನವನ್ನು ಗೆದ್ದ ಪಕ್ಷಗಳು ಕೂಡ ಕ್ಯಾಬಿನೆಟ್ ಸ್ಥಾನವನ್ನು ಪಡೆದಿವೆ. ಉದಾಹರಣೆಗೆ, ಇಬ್ಬರು ಸಂಸದರು ಆಯ್ಕೆಯಾದ ಜೆಡಿ (ಎಸ್) ನ ಎಚ್‌ಡಿ ಕುಮಾರಸ್ವಾಮಿ, ಬಿಹಾರದಿಂದ ಒಂದು ಸ್ಥಾನವನ್ನು ಗೆದ್ದ ಜಿತನ್ ರಾಮ್ ಮಾಂಝಿ ಅವರಿಗೂ ಕ್ಯಾಬಿನೆಟ್ ಸ್ಥಾನವನ್ನೂ ನೀಡಲಾಯಿತು” ಎಂದು ಬಾರ್ನೆ ಸುದ್ದಿಗಾರರಿಗೆ ತಿಳಿಸಿದರು.

ಹೊಸ ಮೋದಿ ಸರ್ಕಾರದಲ್ಲಿ ಶಿಂಧೆ ಸೇನೆಯ ಪ್ರತಾಪ್ರಾವ್ ಜಾಧವ್ ಅವರು ಸ್ವತಂತ್ರ ಉಸ್ತುವಾರಿ ಹೊಂದಿರುವ ರಾಜ್ಯ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.

ಮಹಾರಾಷ್ಟ್ರದಲ್ಲಿ ಸ್ಪರ್ಧಿಸಿದ್ದ 15 ಸ್ಥಾನಗಳಲ್ಲಿ ಶಿವಸೇನೆ ಏಳು ಸ್ಥಾನಗಳನ್ನು ಗೆದ್ದಿದೆ. ಆದರೆ, ಬಿಜೆಪಿ 28 ರಲ್ಲಿ ಒಂಬತ್ತು ಸ್ಥಾನಗಳನ್ನು ಗೆದ್ದಿದೆ. ನಾವು ಬಿಜೆಪಿಯ ಹಳೆಯ ಮಿತ್ರ ಪಕ್ಷವಾಗಿರುವ ಶಿವಸೇನೆಗೆ ಕನಿಷ್ಠ ಒಂದು ಕ್ಯಾಬಿನೆಟ್ ಮತ್ತು ಒಂದು ಎಂಒಎಸ್ ಸ್ಥಾನವನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಶ್ರೀರಂಗ್ ಬಾರ್ನೆ ಅವರು ಕ್ಯಾಬಿನೆಟ್ ಸ್ಥಾನಗಳ ಹಂಚಿಕೆಯಲ್ಲಿ ಪಕ್ಷಪಾತವನ್ನು ಆರೋಪಿಸಿದ್ದಾರೆ. ಕ್ಯಾಬಿನೆಟ್ ಸ್ಥಾನಗಳ ಹಂಚಿಕೆಯಲ್ಲಿ ಪಕ್ಷಪಾತವಿದೆ; ಜೆಡಿಯು ಮತ್ತು ಟಿಡಿಪಿ ನಂತರ ಶಿವಸೇನೆ ಬಿಜೆಪಿಯ ಮೂರನೇ ಅತಿದೊಡ್ಡ ಮಿತ್ರ ಪಕ್ಷವಾಗಿದೆ ಎಂದು ಪ್ರತಿಪಾದಿಸಿದರು.

“ಐದು ಸ್ಥಾನಗಳನ್ನು ಗೆದ್ದ ಚಿರಾಗ್ ಪಾಸ್ವಾನ್ ಅವರಿಗೂ ಕ್ಯಾಬಿನೆಟ್ ಸ್ಥಾನ ನೀಡಲಾಯಿತು. ಆದರೆ, ಶಿವಸೇನೆಗೆ ಕೇವಲ ಒಂದು ಎಂಒಎಸ್ ಸ್ಥಾನ ಸಿಕ್ಕಿತು. ಶಿವಸೇನೆ ವಿರುದ್ಧ ಪಕ್ಷಪಾತವಿದೆ ಎಂದು ನಾನು ವೈಯಕ್ತಿಕವಾಗಿ ಭಾವಿಸುತ್ತೇನೆ. ಮುಂದಿನ ಮೂರು ತಿಂಗಳಲ್ಲಿ ನಾವು ಒಟ್ಟಾಗಿ ವಿಧಾನಸಭೆ ಚುನಾವಣೆ ಎದುರಿಸುತ್ತೇವೆ. ಸೇನೆಗೆ ನ್ಯಾಯಯುತವಾದ ಸ್ಥಾನಮಾನ ಸಿಗಬೇಕು ಎಂದು ನಿರೀಕ್ಷಿಸಲಾಗಿದೆ” ಎಂದು ಅವರು ಹೇಳಿದರು.

“ರಾಜ್ಯದಲ್ಲಿ ಏಕನಾಥ್ ಶಿಂಧೆ ಅವರ ದಿಟ್ಟ ಹೆಜ್ಜೆ ಮಹಾರಾಷ್ಟ್ರದಲ್ಲಿ ಅಧಿಕಾರ ಪರಿವರ್ತನೆಗೆ ಕಾರಣವಾಯಿತು. ಈ ಎಲ್ಲ ಅಂಶಗಳನ್ನು ಪರಿಗಣಿಸಿ, ನಾವು ಬಿಜೆಪಿಯಿಂದ ಸಮರ್ಥನೀಯ ನಿಲುವನ್ನು ನಿರೀಕ್ಷಿಸುತ್ತೇವೆ” ಎಂದು ಬಾರ್ನೆ ಆಗ್ರಹಿಸಿದರು.

ಶಿಂಧೆ ಅವರು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯಿಂದ ಬೇರ್ಪಟ್ಟರು ಮತ್ತು ಜೂನ್ 2022 ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ಸೇರಿಕೊಂಡರು. ಅವರಿಗೆ ನಿಷ್ಠರಾಗಿರುವ ಗಮನಾರ್ಹ ಸಂಖ್ಯೆಯ ಶಾಸಕರನ್ನು ಕರೆತಂದರು. ಇದರ ಬೆನ್ನಲ್ಲೇ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮೋದಿ ಸರ್ಕಾರದಲ್ಲಿ ಮಹಾರಾಷ್ಟ್ರದ ಆರು ಸಂಸದರು

ಮಹಾರಾಷ್ಟ್ರದ ಆರು ಸಂಸದರು ಭಾನುವಾರ ಮೋದಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಸೇರ್ಪಡೆಗೊಂಡರು, ಬಿಜೆಪಿ ನಾಲ್ಕು ಸ್ಥಾನಗಳನ್ನು ಪಡೆದುಕೊಂಡಿದೆ ಮತ್ತು ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಆರ್‌ಪಿಐ (ಎ) ತಲಾ ಒಂದನ್ನು ಪಡೆದುಕೊಂಡಿದೆ.

ಹೊಸ ಸರ್ಕಾರದಲ್ಲಿ ಬಿಜೆಪಿ ಸಂಸದರಾದ ನಿತಿನ್ ಗಡ್ಕರಿ ಮತ್ತು ಪಿಯೂಷ್ ಗೋಯಲ್ ಕ್ಯಾಬಿನೆಟ್ ಸಚಿವರಾಗಿ ತಮ್ಮ ಸ್ಥಾನಗಳನ್ನು ಉಳಿಸಿಕೊಂಡರು. ಮಹಾರಾಷ್ಟ್ರದ ಬಿಜೆಪಿಯ ಏಕೈಕ ಮಹಿಳಾ ಸಂಸದೆ ರಕ್ಷಾ ಖಡ್ಸೆ ಮತ್ತು ಮೊದಲ ಬಾರಿಗೆ ಸಂಸದ ಮುರಳೀಧರ್ ಮೊಹೋಲ್ ಅವರು ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿಯ ಮಿತ್ರಪಕ್ಷಗಳ ಪೈಕಿ, ಆರ್‌ಪಿಐ (ಎ) ಮುಖ್ಯಸ್ಥ ರಾಮದಾಸ್ ಅಠಾವಳೆ ಅವರು ಸ್ವತಂತ್ರ ಉಸ್ತುವಾರಿ ಹೊಂದಿರುವ ಎಂಒಎಸ್ ಆಗಿ ತಮ್ಮ ಸ್ಥಾನವನ್ನು ಉಳಿಸಿಕೊಂಡರು. ಆದರೆ, ಪ್ರತಾಪ್ರರಾವ್ ಜಾಧವ್ ಅವರನ್ನು ಸ್ವತಂತ್ರ ಉಸ್ತುವಾರಿಯೊಂದಿಗೆ ಎಂಒಎಸ್ ಆಗಿ ಕರೆತರಲಾಯಿತು.

ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ, ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಅವರ ಅನುಭವವನ್ನು ಉಲ್ಲೇಖಿಸಿ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಎಂಒಎಸ್‌ ಪ್ರಸ್ತಾಪವನ್ನು ನಿರಾಕರಿಸಿತು.

ಇದನ್ನೂ ಓದಿ; ಮೋದಿ 3.0: ರಾಜ್ಯ ಖಾತೆ ತಿರಸ್ಕರಿಸಿದ ಅಜಿತ್‌ ಬಣ; ಎನ್‌ಡಿಎಯಲ್ಲಿ ಭುಗಿಲೆದ್ದ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...