Homeಕರೋನಾ ತಲ್ಲಣಮೋದಿ ಟೀಕಿಸಿ ಪೋಸ್ಟರ್‌: 'ನನ್ನನ್ನೂ ಬಂಧಿಸಿ' ಎಂದ ರಾಹುಲ್‌ಗಾಂಧಿ

ಮೋದಿ ಟೀಕಿಸಿ ಪೋಸ್ಟರ್‌: ‘ನನ್ನನ್ನೂ ಬಂಧಿಸಿ’ ಎಂದ ರಾಹುಲ್‌ಗಾಂಧಿ

ಬಂಧಿತರಲ್ಲಿ ಬಹುತೇಕರು ದಿನಗೂಲಿ ಕಾರ್ಮಿಕರಾಗಿದ್ದು ಕೆಲಸವಿಲ್ಲದಿದ್ದಾಗ ಈ ಪೋಸ್ಟರ್ ಹಾಕುವ ಕೆಲಸ ಮಾಡಿದ್ದಾರೆ. ಅದರಲ್ಲಿ ಏನು ಬರೆದಿದೆ ಎಂಬುದು ಸಹ ಅವರಿಗೆ ತಿಳಿದಿಲ್ಲ ಎನ್ನಲಾಗಿದೆ.

- Advertisement -
- Advertisement -

ಕೋವಿಡ್ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಸರ್ಕಾರದ ವೈಫಲ್ಯವನ್ನು ಟೀಕಿಸುವ ಭಿತ್ತಿಪತ್ರಗಳನ್ನು ಹಾಕಿದ್ದಕ್ಕಾಗಿ ದೆಹಲಿ ಪೊಲೀಸರು 25 ಜನರನ್ನು ಬಂಧಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ “ನನ್ನನ್ನೂ ಬಂಧಿಸಿ” ಎಂದು ಸವಾಲು ಹಾಕಿದ್ದಾರೆ.

ಕಪ್ಪು ಪೋಸ್ಟರ್‌ಗಳ ಮೇಲೆ ಬಿಳಿ ಬಣ್ಣದಲ್ಲಿ “ಮೋದಿ ಜಿ, ನಮ್ಮ ಮಕ್ಕಳಿಗೆ ಲಸಿಕೆ ಇಲ್ಲ, ವಿದೇಶಗಳಿಗೆ ಲಸಿಕೆಯನ್ನು ಏಕೆ ಕಳಿಸಿದಿರಿ?” ಎಂದು ಪ್ರಶ್ನಿಸಿ ದೆಹಲಿಯಲ್ಲಿ ಪೋಸ್ಟರ್‌ಗಳನ್ನು ಅಂಟಿಸಲಾಗಿತ್ತು.

ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ದೆಹಲಿ ಪೊಲೀಸರು ಬಂಧಿಸಿದವರಲ್ಲಿ 19 ವರ್ಷದ ಶಾಲೆ ಬಿಟ್ಟ ಯುವಕ, 30 ವರ್ಷದ ಆಟೋ ಚಾಲಕ, 61 ವರ್ಷದ ದಿನಗೂಲಿ ನೌಕರ ಕೂಡ ಇದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಹಲವರು ದಿನಗೂಲಿ ಕೆಲಸ ಮಾಡುವವರು. ಲಾಕ್‌ಡೌನ್ ಸಂದರ್ಭದಲ್ಲಿ ಕೆಲಸವಿಲ್ಲದೆ ಕಷ್ಟದಲ್ಲಿದ್ದಾಗ ಈ ಪೋಸ್ಟರ್ ಮತ್ತು ಬ್ಯಾನರ್ ಹಾಕುವ ಕೆಲಸ ಮಾಡಿದ್ದಾರೆ. ಅದರಲ್ಲಿ ಏನು ಬರೆದಿದೆ ಎಂಬುದು ಸಹ ಅವರಿಗೆ ತಿಳಿದಿಲ್ಲ ಎನ್ನಲಾಗಿದೆ.

ಬ್ಯಾನರ್ ಮತ್ತು ಪೋಸ್ಟರ್ ಪ್ರಿಂಟ್ ಮಾಡಿಸಿದವನು, ಆಟೋದಲ್ಲಿ ಸಾಗಿಸಿದವನು ಮತ್ತು ಅದನ್ನು ಅಂಟಿಸಿದವರನ್ನು ಬಂಧಿಸಲಾಗಿದೆ. ಅವರೆಲ್ಲರೂ ತಮ್ಮ ಹೊಟ್ಟೆಪಾಡಿಗಾಗಿ ಆ ಕೆಲಸ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ.

ಭಿತ್ತಿಪತ್ರ ಅಂಟಿಸಿದ್ದಕ್ಕಾಗಿ ಸಾರ್ವಜನಿಕರನ್ನು ಬಂಧಿಸಿರುವ ಸರ್ಕಾರದ ವಿರುದ್ದ ಕಿಡಿಕಾರಿರುವ  ರಾಹುಲ್‌ಗಾಂಧಿ ಮತ್ತು ಇತರ ಕಾಂಗ್ರೆಸ್‌ ನಾಯಕರು “ನನ್ನನ್ನೂ ಬಂಧಿಸಿ” ಎಂದು ಟ್ವೀಟ್‌ ಮಾಡಿದ್ದಾರೆ.

ಅಗತ್ಯವಿರುವವರಿಗೆ ಸಹಾಯ ಕೆಲಸಗಳಿಂದಾಗಿ ದೇಶದ ಗಮನ ಸೆಳೆದಿರುವ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಸಹ ಅದೇ ಪೋಸ್ಟರ್ ಹಿಡಿದು ಪ್ರತಿಭಟನೆ ದಾಖಲಿಸಿದ್ದಾರೆ. “ಮೋದಿಯವರು ತಮ್ಮ ಇಮೇಜ್ ಬಿಲ್ಡ್ ಮಾಡಲು 6 ಕೋಟಿಗಿಂತ ಹೆಚ್ಚು ಲಸಿಕೆಗಳನ್ನು ‘ರಫ್ತು’ ಮಾಡದಿದ್ದರೆ, ಇಂದು ಎಷ್ಟೋ ಭಾರತೀಯರು ಉಳಿಯುತ್ತಿದ್ದರು.. ಎಷ್ಟೊ ಕುಟುಂಬಗಳು ರಕ್ಷಿಸಲ್ಪಡುತ್ತಿದ್ದರು. ಈ ಪ್ರಶ್ನೆಗಳನ್ನು ಕೇಳುವುದು ಅಪರಾಧವಾದರೆ, ಯೂತ್ ಕಾಂಗ್ರೆಸ್‌ನ ಪ್ರತಿಯೊಬ್ಬ ಕಾರ್ಯಕರ್ತರು ಬಂಧನಕ್ಕೆ ಸಿದ್ದರಾಗಿದ್ದಾರೆ. ನನ್ನನ್ನೂ ಬಂಧಿಸಿ” ಎಂದು ಶ್ರೀನಿವಾಸ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? ಎಂದು ಪ್ರಶ್ನಿಸಿ ಪೋಸ್ಟರ್‌, 17 FIR, 15 ಮಂದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...