Homeಮುಖಪುಟ'ಮೋದಿ' ಮಾನನಷ್ಟ ಪ್ರಕರಣ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ರಾಹುಲ್ ಅರ್ಜಿ ವಿಚಾರಣೆ

‘ಮೋದಿ’ ಮಾನನಷ್ಟ ಪ್ರಕರಣ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ರಾಹುಲ್ ಅರ್ಜಿ ವಿಚಾರಣೆ

- Advertisement -
- Advertisement -

”ಮೋದಿ ಉಪನಾಮ” ಹೇಳಿಕೆಗೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ತಮ್ಮ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಜುಲೈ 21ಕ್ಕೆ ಸುಪ್ರೀಂ ಕೋರ್ಟ್ ನಿಗದಿಪಡಿಸಿದೆ. ಈ ಹಿಂದೆ ಅವರ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿತ್ತು.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಪಿಕೆ ಮಿಶ್ರಾ ಅವರನ್ನೊಳಗೊಂಡ ಪೀಠವು ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ. ಇದಕ್ಕೂ ಮುನ್ನ, ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಜುಲೈ 18ರಂದು ಈ ಪ್ರಕರಣದ ತುರ್ತು ವಿಚಾರಣೆಗೆ ಮನವಿ ಮಾಡಿ ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಪೀಠದ ಗಮನಕ್ಕೆ ತಂದರು. ಆನಂತರ ನ್ಯಾಯಾಲಯವು ರಾಹುಲ್ ಗಾಂಧಿ ಅವರ ಮನವಿಯನ್ನು ಆಲಿಸಲು ಒಪ್ಪಿಕೊಂಡಿತು.

ಜುಲೈ 7ರಂದು ನೀಡಿದ ಗುಜರಾತ್ ಹೈಕೋರ್ಟ್ ತೀರ್ಪಿಗೆ ತಡೆ ನೀಡದಿದ್ದರೆ, ಅದು ವಾಕ್, ಅಭಿವ್ಯಕ್ತಿ, ಆಲೋಚನೆ ಮತ್ತು ಹೇಳಿಕೆಗಳಿಗೆ ಕಡಿವಾಣ ಹಾಕಿದಂತಾಗುತ್ತದೆ ಎಂದು ರಾಹುಲ್ ಗಾಂಧಿ ತಮ್ಮ ಮನವಿಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಏಪ್ರಿಲ್ 13, 2019ರಂದು ಕರ್ನಾಟಕದ ಕೋಲಾರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಅವರು ಉದ್ಯಮಿಗಳಾದ ನೀರವ್ ಮೋದಿ ಮತ್ತು ಲಲಿತ್ ಮೋದಿಯವರನ್ನು ಉಲ್ಲೇಖಿಸಿ, ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಹೊಂದಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಗುಜರಾತ್ ಸರ್ಕಾರದ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು 2019ರಲ್ಲಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಮೋದಿ ಉಪನಾಮದ ಬಗ್ಗೆ ಮಾಡಿದ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟದ ಆರೋಪದ ಮೇಲೆ ಗುಜರಾತ್ ನ್ಯಾಯಾಲಯವು ಅವರನ್ನು ಅಪರಾಧಿ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕನನ್ನು ಮಾರ್ಚ್ 24 ರಂದು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಯಿತು.

ಸೂರತ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಾರ್ಚ್ 23 ರಂದು ರಾಹುಲ್‌ಗೆ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 499 ಮತ್ತು 500 (ಕ್ರಿಮಿನಲ್ ಮಾನನಷ್ಟ) ಅಡಿಯಲ್ಲಿ ಅಪರಾಧಿ ಎಂದು ಘೋಷಿಸಿದ ನಂತರ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ಜುಲೈ 7ರಂದು ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿತ್ತು.

ರಾಹುಲ್ ಗಾಂಧಿಯವರ ದೋಷಾರೋಪಣೆಗೆ ತಡೆಯಾಜ್ಞೆ ನೀಡಿದ್ದರೆ ಅವರನ್ನು ಲೋಕಸಭೆಯ ಸಂಸದರಾಗಿ ಮರುಸ್ಥಾಪಿಸಲು ದಾರಿ ಮಾಡಿಕೊಡಬಹುದಿತ್ತು.

ರಾಹುಲ್ ಗಾಂಧಿ ಅವರು ಪ್ರಸ್ತುತ ಕೇರಳದ ವಯನಾಡಿನ ಸಂಸದರಾಗಿ ಅನರ್ಹಗೊಂಡಿದ್ದಾರೆ. ಸಂಸತ್ತಿನ ಕಲಾಪಗಳಲ್ಲಿ ಭಾಗವಹಿಸಲು ಸಾಧ್ಯವಿಲ್ಲ.

ಹೈಕೋರ್ಟ್ ಆದೇಶವನ್ನು ತಡೆಹಿಡಿಯದಿದ್ದರೆ ಸರಿಪಡಿಸಲಾಗದ ತಪ್ಪು ನಡೆಯುತ್ತದೆ ಎಂದು ರಾಹುಲ್ ಗಾಂಧಿ ತಮ್ಮ ಮನವಿಯಲ್ಲಿ ಹೇಳಿದ್ದಾರೆ. ಆದೇಶವನ್ನು ತಡೆಹಿಡಿಯದೇ ಇದ್ದರೇ ಆದೇಶ ಬದಲಾಯಿಸದಿದ್ದರೆ ಅದು ಅನ್ಯಾಯವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಾನಹಾನಿ ಪ್ರಕರಣ: ರಾಹುಲ್ ಮೇಲ್ಮನವಿ ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...