Homeಮುಖಪುಟರಾಹುಲ್ ಜೈಲು ಶಿಕ್ಷೆ ತಡೆ ಅರ್ಜಿ ವಿಚಾರಣೆ: ಗುಜರಾತ್ ಸರ್ಕಾರ ಸೇರಿ ಇತರರಿಗೆ ಸುಪ್ರೀಂ ನೋಟಿಸ್

ರಾಹುಲ್ ಜೈಲು ಶಿಕ್ಷೆ ತಡೆ ಅರ್ಜಿ ವಿಚಾರಣೆ: ಗುಜರಾತ್ ಸರ್ಕಾರ ಸೇರಿ ಇತರರಿಗೆ ಸುಪ್ರೀಂ ನೋಟಿಸ್

- Advertisement -
- Advertisement -

2019 ರಲ್ಲಿ ರಾಹುಲ್ ಗಾಂಧಿ ಅವರು ನೀಡಿದ ”ಮೋದಿ ಉಪನಾಮ” ಹೇಳಿಕೆಗೆ ಸಂಬಂಧಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮನವಿಯ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆ ಸುಪ್ರೀಂ ಕೋರ್ಟ್ ಶುಕ್ರವಾರ ಗುಜರಾತ್ ಸರ್ಕಾರಕ್ಕೆ ಮತ್ತು ಮೊಕದ್ದಮೆ ಹೂಡಿರುವವರಿಗೆ ನೋಟಿಸ್ ಜಾರಿ ಮಾಡಿದ್ದು 10 ದಿನಗಳಳೊಗೆ ಉತ್ತರಿಸುವಂತೆ ಕೇಳಿದೆ. ಆನಂತರ ಈ ವಿಷಯವನ್ನು ಆಗಸ್ಟ್ 4 ರಂದು ಪೋಸ್ಟ್ ಮಾಡಲಾಗಿದೆ.

ಉಚ್ಚ ನ್ಯಾಯಾಲಯದ ಶಿಕ್ಷೆಗೆ ತಡೆಯಾಜ್ಞೆ ನೀಡಿದರೆ, ಲೋಕಸಭೆಯ ಸಂಸದರಾಗಿ ಗಾಂಧಿಯವರ ಮರುಸ್ಥಾಪನೆಗೆ ದಾರಿಯಾಗುತ್ತಿತ್ತು.

ಏನಿದು ಘಟನೆ?

ಏಪ್ರಿಲ್ 13, 2019ರಂದು ಕರ್ನಾಟಕದ ಕೋಲಾರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಅವರು ಉದ್ಯಮಿಗಳಾದ ನೀರವ್ ಮೋದಿ ಮತ್ತು ಲಲಿತ್ ಮೋದಿಯವರನ್ನು ಉಲ್ಲೇಖಿಸಿ, ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಹೊಂದಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಗುಜರಾತ್ ಸರ್ಕಾರದ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು 2019ರಲ್ಲಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಮೋದಿ ಉಪನಾಮದ ಬಗ್ಗೆ ಮಾಡಿದ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟದ ಆರೋಪದ ಮೇಲೆ ಗುಜರಾತ್ ನ್ಯಾಯಾಲಯವು ಅವರನ್ನು ಅಪರಾಧಿ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ರಾಹುಲ್ ಅವರ ಸಂಸದ ಸ್ಥಾನಮಾನವನ್ನು ತೆಗೆದುಹಾಕಲು ಕಾರಣವಾಯಿತು ಮತ್ತು ಎಂಟು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಳಿಸಲಾಯಿತು.

ಸೂರತ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಾರ್ಚ್ 23 ರಂದು ರಾಹುಲ್‌ಗೆ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 499 ಮತ್ತು 500 (ಕ್ರಿಮಿನಲ್ ಮಾನನಷ್ಟ) ಅಡಿಯಲ್ಲಿ ಅಪರಾಧಿ ಎಂದು ಘೋಷಿಸಿದ ನಂತರ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ಜುಲೈ 7ರಂದು ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿತ್ತು.

ರಾಹುಲ್ ಗಾಂಧಿಯವರ ದೋಷಾರೋಪಣೆಗೆ ತಡೆಯಾಜ್ಞೆ ನೀಡಿದ್ದರೆ ಅವರನ್ನು ಲೋಕಸಭೆಯ ಸಂಸದರಾಗಿ ಮರುಸ್ಥಾಪಿಸಲು ದಾರಿ ಮಾಡಿಕೊಡಬಹುದಿತ್ತು.

ರಾಹುಲ್ ಗಾಂಧಿ ಅವರು ಪ್ರಸ್ತುತ ಕೇರಳದ ವಯನಾಡಿನ ಸಂಸದರಾಗಿ ಅನರ್ಹಗೊಂಡಿದ್ದಾರೆ. ಸಂಸತ್ತಿನ ಕಲಾಪಗಳಲ್ಲಿ ಭಾಗವಹಿಸಲು ಸಾಧ್ಯವಿಲ್ಲ.

ಹೈಕೋರ್ಟ್ ಆದೇಶವನ್ನು ತಡೆಹಿಡಿಯದಿದ್ದರೆ ಸರಿಪಡಿಸಲಾಗದ ತಪ್ಪು ನಡೆಯುತ್ತದೆ ಎಂದು ರಾಹುಲ್ ಗಾಂಧಿ ತಮ್ಮ ಮನವಿಯಲ್ಲಿ ಹೇಳಿದ್ದಾರೆ. ಆದೇಶವನ್ನು ತಡೆಹಿಡಿಯದೇ ಇದ್ದರೇ ಆದೇಶ ಬದಲಾಯಿಸದಿದ್ದರೆ ಅದು ಅನ್ಯಾಯವಾಗುತ್ತದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...