Homeಮುಖಪುಟ"ಸಾರ್ವಜನಿಕ ಹಿತಾಸಕ್ತಿ ಏನಾದ್ರು ಇದೆಯಾ"? ಪ್ರಧಾನಿ ಮೋದಿ ಪದವಿ ವಿವರ ಕೋರಿದ ಆರ್‌ಟಿಐ ಕಾರ್ಯಕರ್ತನಿಗೆ ದೆಹಲಿ...

“ಸಾರ್ವಜನಿಕ ಹಿತಾಸಕ್ತಿ ಏನಾದ್ರು ಇದೆಯಾ”? ಪ್ರಧಾನಿ ಮೋದಿ ಪದವಿ ವಿವರ ಕೋರಿದ ಆರ್‌ಟಿಐ ಕಾರ್ಯಕರ್ತನಿಗೆ ದೆಹಲಿ ಹೈಕೋರ್ಟ್‌ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ಅರ್ಜಿ ಸಲ್ಲಿಸುವುದರ ಹಿಂದೆ ಏನಾದರು ‘ಸಾರ್ವಜನಿಕ ಹಿತಾಸಕ್ತಿ’ ಇದೆಯಾ? ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾರ್ಯಕರ್ತರೊಬ್ಬರನ್ನು ದೆಹಲಿ ಹೈಕೋರ್ಟ್‌ ಪ್ರಶ್ನಿಸಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಪ್ರಧಾನಿ ಮೋದಿಯವರು 1978ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಬ್ಯಾಚುಲರ್ ಆಫ್ ಆರ್ಟ್ಸ್ (ಬಿಎ) ಪದವಿ ಪಡೆದಿದ್ದಾರೆ ಎನ್ನಲಾಗಿದೆ. ಈ ಕುರಿತು ಆರ್‌ಟಿಐ ಕಾರ್ಯಕರ್ತ ದಾಖಲೆ ಕೇಳಿದ್ದಕ್ಕೆ ಹೈಕೋರ್ಟ್ ಮೇಲಿನಂತೆ ಪ್ರಶ್ನಿಸಿದೆ ಎಂದು ವರದಿ ಹೇಳಿದೆ.

ಪ್ರಧಾನಿ ಮೋದಿಯವರ ಶೈಕ್ಷಣಿಕ ಅರ್ಹತೆ ಕುರಿತು ಆರ್‌ಟಿಐ ಮೂಲಕ ಮಾಹಿತಿ ಒದಗಿಸುವಂತೆ ದೆಹಲಿ ವಿಶ್ವವಿದ್ಯಾನಿಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಸೂಚಿಸಿದೆ. ಇದನ್ನು ಪ್ರಶ್ನಿಸಿ 2017ರಲ್ಲಿ ದೆಹಲಿ ವಿಶ್ವವಿದ್ಯಾನಿಲಯ ಹೈಕೋರ್ಟ್ ಮೆಟ್ಟಿಲೇರಿದೆ.

ಪ್ರಧಾನಿ ಮೋದಿ 1978 ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಬಿಎ ಮತ್ತು 1983ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯದಿಂದ ಮಾಸ್ಟರ್ ಆಫ್ ಆರ್ಟ್‌ (ಎಂ.ಎ) ಪದವಿ ಪಡೆದಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಹೇಳಿಕೊಂಡಿದೆ.

ಆದರೆ, ಆಮ್ ಆದ್ಮಿ ಪಕ್ಷ (ಎಎಪಿ) ಸೇರಿದಂತೆ ಕೆಲವರು ಮೋದಿ ಪದವಿ ಪಡೆದಿದ್ದಾರೆ ಎನ್ನುವುದು ಕಟ್ಟು ಕಥೆ ಎಂದಿದ್ದಾರೆ.

ಮಂಗಳವಾರ (ಫೆ.11) ದೆಹಲಿ ವಿಶ್ವವಿದ್ಯಾನಿಲಯದ ಪರವಾಗಿ ಹೈಕೋರ್ಟ್‌ಗೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ‘ಸಾರ್ವಜನಿಕ ಕುತೂಹಲ (Interest to the Public) ಮತ್ತು ‘ಸಾರ್ವಜನಿಕ ಹಿತಾಸಕ್ತಿ’ ( Public Interest)ಎನ್ನುವುದು ಎರಡೂ ಒಂದೇ ಅಲ್ಲ. ಹಾಗಾಗಿ, ಮಾಹಿತಿ ಹಕ್ಕು ಕಾಯ್ದೆಯಡಿ ಕೇವಲ ಕುತೂಹಲಕ್ಕಾಗಿ ಮೋದಿಯವರ ಪದವಿ ವಿವರ ಕೇಳಲು ಸಾಧ್ಯವಿಲ್ಲ ಎಂದಿದ್ದಾರೆ.

ಮುಂದುವರಿದು, “ವಿಶ್ವ ವಿದ್ಯಾನಿಲಯದಲ್ಲಿರುವ ಎಲ್ಲಾ ವಿದ್ಯಾರ್ಥಿಗಳ ಪದವಿ ಮತ್ತು ಅಂಕ ಪಟ್ಟಿಗಳ ವಿವರಗಳು ಬಹಳ ‘ವಿಶ್ವಾಸಾರ್ಹ ರೀತಿಯಲ್ಲಿ’ ಇದೆ. ಅವೆಲ್ಲವೂ ವಿದ್ಯಾರ್ಥಿಗಳ ‘ವೈಯಕ್ತಿಕ ಗೌಪ್ಯ’ ಮಾಹಿತಿಗಳು ಎಂದು ಹೇಳಿದ್ದಾರೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಸಂಜಯ್ ಹೆಗ್ಡೆ, ಶೈಕ್ಷಣಿಕ ವಿವರಗಳು ಸಾರ್ವಜನಿಕ ಮಾಹಿತಿಯಾಗಿದ್ದು, ಅವುಗಳನ್ನು ನೋಟಿಸ್‌ ಬೋರ್ಡ್‌ಗಳು ಮತ್ತು ಪತ್ರಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತದೆ ಎಂದಿದ್ದಾರೆ.

ಮುಂದುವರಿದು, ಸಾರ್ವಜನಿಕ ಹಿತಾಸಕ್ತಿ ಯಾವಾಗಲು ಬಹಿರಂಗಪಡಿಸುವಿಕೆಯ ಕಡೆ ಇರುತ್ತದೆಯೇ ಹೊರತು, ಮುಚ್ಚಿಡುವುದರ ಕಡೆ ಅಲ್ಲ. ಚುನಾಯಿತ ಜನ ಪ್ರತಿನಿಧಿಗಳ ಆಸ್ತಿ, ಕುಟುಂಬದ ಹಿನ್ನೆಲೆ ಇತ್ಯಾದಿ ಮಾಹಿತಿಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲಾಗುತ್ತದೆ. ಅದೇ ರೀತಿ ಒಬ್ಬ ಜನ ಪ್ರತಿನಿಧಿಯ ಶೈಕ್ಷಣಿಕ ಅರ್ಹತೆ ವಿಚಾರ ಬಂದಾಗ ಸಾರ್ವಜನಿಕ ಪ್ರಾಧಿಕಾರಗಳು ಏನು ಮಾಡಬೇಕು? ಎಂದು ಪ್ರಶ್ನಿಸಿದ್ದಾರೆ.

ವಾದ-ಪ್ರತಿವಾದ ಅಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಫೆಬ್ರವರಿ 19ಕ್ಕೆ ನಿಗದಿ ಮಾಡಿದೆ.

ಪ್ರಕರಣದ ಹಿನ್ನೆಲೆ :

ಮಾಹಿತಿ ಹಕ್ಕು ಕಾರ್ಯಕರ್ತ ನೀರಜ್ ಕುಮಾರ್ ಎಂಬವರು, 1978ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಪ್ರಧಾನಿ ಮೋದಿ ಬಿಎ ಪದವಿ ಪಡೆದಿದ್ದಾರೆ ಎನ್ನಲಾದ ಸಂದರ್ಭದ ಎಲ್ಲಾ ವಿದ್ಯಾರ್ಥಿಗಳ ರೋಲ್ ನಂಬರ್‌ಗಳು, ಅಂಕಗಳು ಮತ್ತು ಅವರು ಪದವಿ ಕೋರ್ಸ್‌ನಲ್ಲಿ ಉತ್ತೀರ್ಣರಾಗಿದ್ದಾರೆಯೇ ಅಥವಾ ಅನುತ್ತೀರ್ಣರಾಗಿದ್ದಾರೆಯೇ? ಎಂಬ ವಿವರಗಳನ್ನು ಕೇಳಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯ ಆರ್‌ಟಿಐ ಕಾರ್ಯಕರ್ತ ನೀರಜ್ ಕುಮಾರ್ ಮೂರನೇ ವ್ಯಕ್ತಿ (ವಿಷಯಕ್ಕೆ ಸಂಬಂಧಿಸದ) ಎಂಬ ಕಾರಣ ನೀಡಿ, ಮೋದಿಯವರ ಪದವಿ ಕುರಿತು ಮಾಹಿತಿ ನೀಡಲು ನಿರಾಕರಿಸಿತ್ತು. ಇದರ ವಿರುದ್ದ ನೀರಜ್ ಕುಮಾರ್ ಕೇಂದ್ರ ಮಾಹಿತಿ ಆಯೋಗಕ್ಕೆ ದೂರು ನೀಡಿದ್ದರು.

2016ರಲ್ಲಿ ಕೇಂದ್ರ ಮಾಹಿತಿ ಆಯೋಗವು ಆರ್‌ಟಿಐ ಕಾರ್ಯಕರ್ತನಿಗೆ ಮಾಹಿತಿ ಒದಗಿಸುವಂತೆ ದೆಹಲಿ ವಿವಿಗೆ ಸೂಚಿಸಿತ್ತು. ದೆಹಲಿ ವಿಶ್ವವಿದ್ಯಾನಿಲಯವು ಸಾರ್ವಜನಿಕ ಸಂಸ್ಥೆಯಾಗಿದ್ದು, ಅದರ ಪದವಿಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯು ಸಂಸ್ಥೆಯ ರಿಜಿಸ್ಟರ್‌ನಲ್ಲಿ ಲಭ್ಯವಿದೆ. ಅದು ಸಾರ್ವಜನಿಕ ದಾಖಲೆಯಾಗಿದೆ ಎಂದು ಹೇಳಿತ್ತು.

ಆದರೆ, ದೆಹಲಿ ವಿವಿ ಮಾಹಿತಿ ನೀಡಲು ನಿರಾಕರಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ಆರ್‌ಟಿಐ ಮೂಲಕ ಎಲ್ಲಾ ವಿದ್ಯಾರ್ಥಿಗಳ ರೋಲ್ ನಂಬರ್‌ಗಳು, ಹೆಸರುಗಳು ಮತ್ತು ಅಂಕಗಳನ್ನು ಬಹಿರಂಗಪಡಿಸುವುದರಿಂದ ವಿನಾಯಿತಿ ಇದೆ ಎಂದು ಹೇಳಿಕೊಂಡಿದೆ.

370ನೇ ವಿಧಿ ರದ್ದತಿಗೆ ಮೆಹಬೂಬಾ ಮುಫ್ತಿ, ಅವರ ತಂದೆ ಕಾರಣ: ಎನ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...