Homeಮುಖಪುಟಮೋದಿ ಪದವಿ ಪ್ರಕರಣ | ಕುತೂಹಲ ತಣಿಸುವುದು ಆರ್‌ಟಿಐ ಉದ್ದೇಶವಲ್ಲ ಎಂದ ದೆಹಲಿ ವಿಶ್ವವಿದ್ಯಾಲಯ!

ಮೋದಿ ಪದವಿ ಪ್ರಕರಣ | ಕುತೂಹಲ ತಣಿಸುವುದು ಆರ್‌ಟಿಐ ಉದ್ದೇಶವಲ್ಲ ಎಂದ ದೆಹಲಿ ವಿಶ್ವವಿದ್ಯಾಲಯ!

- Advertisement -
- Advertisement -

ಮೂರನೇ ವ್ಯಕ್ತಿಯ ಕುತೂಹಲವನ್ನು ತಣಿಸುವುದು ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ)ಯ ಉದ್ದೇಶ ಅಲ್ಲ ಎಂದು ದೆಹಲಿ ವಿಶ್ವವಿದ್ಯಾಲಯ ಸೋಮವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ವಿದ್ಯಾನಿಲಯದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಅವರ ಪದವಿ ಪ್ರಮಾಣ ಪತ್ರವನ್ನು ಕಂಡುಕೊಳ್ಳಲು ಸಲ್ಲಿಸಲಾಗಿದ್ದ ಆರ್‌ಟಿಐಯ ಅರ್ಜಿ ಪ್ರಕರಣದಲ್ಲಿ ಈ ಹೇಳಿಕೆಯನ್ನು ವಿಶ್ವವಿದ್ಯಾಲಯ ಹೇಳಿದೆ. ಮೋದಿ ಪದವಿ ಪ್ರಕರಣ

1978 ರಲ್ಲಿ ಕೊನೆಗೊಳ್ಳುವ ಶೈಕ್ಷಣಿಕ ವರ್ಷದಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ ವಿಭಾಗದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ಅವಕಾಶ ನೀಡುವಂತೆ ಕೇಂದ್ರ ಮಾಹಿತಿ ಆಯೋಗವು ನಿರ್ದೇಶಿಸಿದ ಆದೇಶವನ್ನು ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯವು 2017 ರಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ದತ್ತ ಅವರ ಪೀಠವು ವಿಚಾರಣೆ ನಡೆಸುತ್ತಿತ್ತು.

1978 ರಲ್ಲಿ ಪ್ರಧಾನಿ ಮೋದಿ ಅವರಿಗೆ ದೆಹಲಿ ವಿಶ್ವವಿದ್ಯಾಲಯದಿಂದ ಬಿಎ ಪದವಿ ಮತ್ತು 1983 ರಲ್ಲಿ ಗುಜರಾತ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ನೀಡಲಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಆದರೆ, ಟೀಕಾಕಾರರು ಇದರ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದು, ಅವರ ಪದವಿಗಳ ವಿಚಾರವು ಕಟ್ಟುಕಥೆ ಎಂದು ಆರೋಪಿಸಿದ್ದಾರೆ. ಮೋದಿ ಪದವಿ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇಂದ್ರ ಮಾಹಿತಿ ಆಯೋಗದ ಆದೇಶವು ಕಾನೂನಿಗೆ ವಿರುದ್ಧವಾಗಿದೆ ಎಂದು ಸಾಲಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿದ್ದಾರೆ. ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 6 ಮಾಹಿತಿಯನ್ನು ಒದಗಿಸಬೇಕೆಂದು ಕಡ್ಡಾಯಗೊಳಿಸುತ್ತದೆ ಎಂಬುವುದು ನಿಜವಾದರೂ, ಈ ಕಾಯ್ದೆಯು “ಯಾರದ್ದೋ ಕುತೂಹಲವನ್ನು ತಣಿಸುವ ಉದ್ದೇಶವನ್ನು ಹೊಂದಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

ಸಾರ್ವಜನಿಕ ಅಧಿಕಾರಿಗಳ ಹೊಣೆಗಾರಿಕೆ ಮತ್ತು ಪಾರದರ್ಶಕತೆಗೆ ಸಂಬಂಧಿಸದ ಮಾಹಿತಿಯನ್ನು ಬಹಿರಂಗಪಡಿಸುವ ಮೂಲಕ ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ಸಾಲಿಸಿಟರ್ ಜನರಲ್ ವಾದಿಸಿದ್ದಾರೆ.

ನಿಯಮಗಳು ಅನುಮತಿಸಿದರೆ ಶಿಕ್ಷಣ ಸಂಸ್ಥೆಗಳನ್ನು ವ್ಯಕ್ತಿಗಳು ತಮ್ಮದೇ ಆದ ಪದವಿಗಳು ಅಥವಾ ಅಂಕಪಟ್ಟಿಗಳನ್ನು ಒದಗಿಸುವಂತೆ ಕೇಳಬಹುದು, ಆದರೆ ಕಾಯ್ದೆಯ ಸೆಕ್ಷನ್ 8(1)(ಇ) ಅಂತಹ ಮಾಹಿತಿಯನ್ನು ಮೂರನೇ ವ್ಯಕ್ತಿಗೆ ಅದನ್ನು ನೀಡುವುದಕ್ಕೆ ವಿನಾಯಿತಿ ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಏನಿದು ಪ್ರಕರಣ?

ಮಾಹಿತಿ ಹಕ್ಕು ಹೋರಾಟಗಾರ ನೀರಜ್ ಕುಮಾರ್ ಅವರು, 1978 ರಲ್ಲಿ ದೆಹಲಿ ವಿಶ್ವವಿದ್ಯಾಲಯದ ಬಿಎ ವಿಭಾಗದಲ್ಲಿದ್ದ ವಿದ್ಯಾರ್ಥಿಗಳ ರೋಲ್ ಸಂಖ್ಯೆಗಳು, ಅಂಕಗಳು ಮತ್ತು ಫಲಿತಾಂಶವು ಉತ್ತೀರ್ಣ ಅಥವಾ ಅನುತ್ತೀರ್ಣವಾಗಿದ್ದರ ಮಾಹಿತಿಯನ್ನು ಕೋರಿದ್ದರು. ಆದರೆ, ವಿಶ್ವವಿದ್ಯಾಲಯದ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ಈ ವಿನಂತಿಯನ್ನು “ಮೂರನೇ ವ್ಯಕ್ತಿಯ ಮಾಹಿತಿ” ಎಂಬ ಕಾರಣಕ್ಕೆ ನಿರಾಕರಿಸಿದ್ದರು. ಹಾಗಾಗಿ ಅವರು ಕೇಂದ್ರ ಮಾಹಿತಿ ಆಯೋಗಕ್ಕೆ ಈ ಬಗ್ಗೆ ಅರ್ಜಿ ಸಲ್ಲಿಸಿದ್ದರು.

2016 ರಲ್ಲಿ ಆಯೋಗವು ಇದು ಸಾರ್ವಜನಿಕ ವಿಚಾರವಾಗಿದೆ ಎಂದು ತೀರ್ಪು ನೀಡಿತ್ತು ಮತ್ತು ಮಾಹಿತಿಯನ್ನು ಬಿಡುಗಡೆ ಮಾಡಲು ವಿಶ್ವವಿದ್ಯಾಲಯಕ್ಕೆ ಆದೇಶಿಸಿತ್ತು. “ದೆಹಲಿ ವಿಶ್ವವಿದ್ಯಾಲಯವು ಸಾರ್ವಜನಿಕ ಸಂಸ್ಥೆಯಾಗಿದ್ದು, ಅದರ ಪದವಿಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯು ಸಂಸ್ಥೆಯ ರಿಜಿಸ್ಟರ್‌ನಲ್ಲಿ ಲಭ್ಯವಿದೆ. ಹಾಗಾಗಿ ಇದು ಸಾರ್ವಜನಿಕ ದಾಖಲೆಯಾಗಿದೆ” ಎಂದು ಆಯೋಗ ಹೇಳಿತ್ತು.

ವಿಶ್ವವಿದ್ಯಾನಿಲಯವು ಈ ಹಿಂದೆ ಹೈಕೋರ್ಟ್‌ನಲ್ಲಿ ಎಲ್ಲಾ ವಿದ್ಯಾರ್ಥಿಗಳ ರೋಲ್ ಸಂಖ್ಯೆಗಳು, ಹೆಸರುಗಳು ಮತ್ತು ಅಂಕಗಳಂತಹ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ವಾದಿಸಿತ್ತು.

ಇದನ್ನೂಓದಿ: ಗೋಮಾಂಸ ಮಾರುತ್ತಿದ್ದ ದಂಪತಿಗಳಿಗೆ ಕಿರುಕುಳ; ಕೊಯಮತ್ತೂರು ಬಿಜೆಪಿ ನಾಯಕನ ವಿರುದ್ಧ ಪ್ರತಿಭಟನೆ

ಗೋಮಾಂಸ ಮಾರುತ್ತಿದ್ದ ದಂಪತಿಗಳಿಗೆ ಕಿರುಕುಳ; ಕೊಯಮತ್ತೂರು ಬಿಜೆಪಿ ನಾಯಕನ ವಿರುದ್ಧ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...