Homeಮುಖಪುಟಮೋದಿ ಪದವಿ ವಿಚಾರ: ಮಾನಹಾನಿ ಪ್ರಕರಣದಲ್ಲಿ ಕೇಜ್ರಿವಾಲ್‌, ಸಂಜಯ್ ಸಿಂಗ್‌ಗೆ ಗುಜರಾತ್ ಕೋಟ್‌ ಸಮನ್ಸ್

ಮೋದಿ ಪದವಿ ವಿಚಾರ: ಮಾನಹಾನಿ ಪ್ರಕರಣದಲ್ಲಿ ಕೇಜ್ರಿವಾಲ್‌, ಸಂಜಯ್ ಸಿಂಗ್‌ಗೆ ಗುಜರಾತ್ ಕೋಟ್‌ ಸಮನ್ಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರಿಗೆ ಅಹಮದಾಬಾದ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಶನಿವಾರ ಸಮನ್ಸ್ ಜಾರಿ ಮಾಡಿದೆ.

ಗುಜರಾತ್ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಪಿಯೂಷ್ ಪಟೇಲ್ ಅವರು ಸಲ್ಲಿಸಿದ ಮಾನನಷ್ಟಕ್ಕಾಗಿ ಕ್ರಿಮಿನಲ್ ವಿಚಾರಣೆಯನ್ನು ವಿಲೇವಾರಿ ಮಾಡಿದ ನಂತರ, ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಜಯೇಶ್‌ಭಾಯ್ ಲಿಂಬಾಭಾಯ್ ಪಟೇಲ್ ಅವರ ನ್ಯಾಯಾಲಯವು ಎಎಪಿ ನಾಯಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ಪ್ರಾರಂಭಿಸಿದೆ. ಮೇ 23ರಂದು ನ್ಯಾಯಾಲಯದ ಮುಂದೆ ಇಬ್ಬರು ನಾಯಕರಿಗೆ ಹಾಜರಾಗುವಂತೆ ಆದೇಶಿಸಲಾಗಿದೆ.

”ಮೋದಿ ದೆಹಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್ ವಿಶ್ವವಿದ್ಯಾಲಯದಲ್ಲಿ ಓದಿದ್ದರೆ, ಗುಜರಾತ್ ವಿಶ್ವವಿದ್ಯಾಲಯವು ತಮ್ಮ ಹಳೆಯ ವಿದ್ಯಾರ್ಥಿ ಪ್ರಧಾನಿಯಾಗಿದ್ದಾನೆ ಎಂದು ಸಂಭ್ರಮಿಸಬೇಕಿತ್ತು. ಆದರೆ ಅವರು ಅದನ್ನು ಹೇಳದೇ ಮುಚ್ಚಿಟ್ಟಿದ್ದಾರೆ. ಪ್ರಧಾನಿ ಅವರು ಪದವಿ ದಾಖಲಾತಿಯನ್ನು ತೋರಿಸಲಾಗುತ್ತಿಲ್ಲ ಏಕೆಂದರೆ ಆ ಪದವಿ ನಕಲಿಯಾಗಿರಬಹುದು, ಅದನ್ನು ನೀಡಿದ ವಿಶ್ವವಿದ್ಯಾಲಯವನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು… ಒಂದು ವೇಳೆ ಪದವಿ ದಾಖಲೆ ಸತ್ಯ ಆಗಿದ್ದರೆ, ಅದರ ಮಾಹಿತಿಯನ್ನು ವಿಶ್ವವಿದ್ಯಾಯ ಏಕೆ ಬಹಿರಂಗಪಡಿಸುತ್ತಿಲ್ಲ?” ಎಂದು ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಅವರ ಇಂತಹ ಕೆಲವು ಹೇಳಿಕೆಗಳು ಮಾನಹಾನಿಕರ ಎಂದು ಪಟೇಲ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮೋದಿ ಪದವಿ ಪ್ರಮಾಣಪತ್ರ ಒದಗಿಸುವ ಅಗತ್ಯವಿಲ್ಲ: ಕೇಜ್ರಿವಾಲ್‌ಗೆ 25,000 ದಂಡ ವಿಧಿಸಿದ ಗುಜರಾತ್ ಹೈಕೋರ್ಟ್

ಸಂಜಯ್ ಸಿಂಗ್ ಅವರು ಪ್ರಧಾನಿ ಪದವಿ ವಿಚಾರದಲ್ಲಿ ವಿಶ್ವವಿದ್ಯಾಲಯದ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಪಿಯೂಷ್ ಪಟೇಲ್ ದೂರಿನಲ್ಲಿ ತಿಳಿಸಿದ್ದಾರೆ.

ಪಟೇಲ್ ಪ್ರಕಾರ, ಕೇಜ್ರಿವಾಲ್ ಅವರು ಏಪ್ರಿಲ್ 1 ರಂದು ಪತ್ರಿಕಾಗೋಷ್ಠಿಯಲ್ಲಿ ಮತ್ತು ಸಿಂಗ್ ಏಪ್ರಿಲ್ 2 ರಂದು ಮತ್ತೊಂದು ಪತ್ರಿಕಾಗೋಷ್ಠಿಯಲ್ಲಿ “ಮಾನಹಾನಿಕರ ಹೇಳಿಕೆಗಳನ್ನು” ಮಾಡಿದ್ದಾರೆ.

”ವೈಯಕ್ತಿಕ ವಿಚಾರಗಳಿಗಾಗಿ ಆರ್‌ಟಿಐ ಯೋಗ್ಯವಲ್ಲ ಹಾಗಾಗಿ ಆ ರೀತಿ ಮಾಹಿತಿ ಪಡೆಯುವುದು ಮಾನನಷ್ಟ ಎಂದು ಪಟೇಲ್ ವಾದಿಸಿದರು.

ಗುಜರಾತ್ ಹೈಕೋರ್ಟ್ ಇತ್ತಿಚಿಗಷ್ಟೇ ಪ್ರಧಾನಿ ಮೋದಿ ಅವರ ಪದವಿ ಕುರಿತ ಮಾಹಿತಿ ಕೇಳಿದ್ದ ಅರ್ಜಿಗೆ ಸಂಬಂಧಿಸಿ ಆದೇಶ ನೀಡಿತ್ತು.

ಪ್ರಧಾನಿ ಮೋದಿ ಅವರ ಪದವಿಗಳಿಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯಕ್ಕೆ “ಮಾಹಿತಿ ಹುಡುಕಲು” ನಿರ್ದೇಶಿಸಿದ್ದ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ಕಳೆದ ತಿಂಗಳು ಗುಜರಾತ್ ಹೈಕೋರ್ಟ್ ರದ್ದುಗೊಳಿಸಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಪ್ರಧಾನಿ ಮೋದಿ ಅವರ ಪದವಿ ಪ್ರಮಾಣಪತ್ರದ ಮಾಹಿತಿ ಕೋರಿ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರ ನ್ಯಾಯಾಲಯ ಕೇಜ್ರಿವಾಲ್ ಅವರಿಗೆ 25,000 ರೂಪಾಯಿ ದಂಡ ವಿಧಿಸಿದ್ದು, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನಾಲ್ಕು ವಾರದೊಳಗೆ ಪಾವತಿಸಬೇಕು ಎಂದು ಸೂಚಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...