Homeಮುಖಪುಟಮೋದಿ ಪದವಿ ವಿವಾದ: ಮಾನನಷ್ಟ ಮೊಕದ್ದಮೆಯಲ್ಲಿ ಸಮನ್ಸ್ ವಿರುದ್ಧ ಕೇಜ್ರಿವಾಲ್, ಸಿಂಗ್ ಸಲ್ಲಿಸಿದ ಅರ್ಜಿ ತಿರಸೃತ

ಮೋದಿ ಪದವಿ ವಿವಾದ: ಮಾನನಷ್ಟ ಮೊಕದ್ದಮೆಯಲ್ಲಿ ಸಮನ್ಸ್ ವಿರುದ್ಧ ಕೇಜ್ರಿವಾಲ್, ಸಿಂಗ್ ಸಲ್ಲಿಸಿದ ಅರ್ಜಿ ತಿರಸೃತ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರಿಗೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಹಾಜರಾಗಲು ಸಮನ್ಸ್ ನೀಡಲಾಗಿತ್ತು. ಅದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳನ್ನು ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯವು ಬುಧವಾರ ವಜಾಗೊಳಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗಳಿಗೆ ಸಂಬಂಧಿಸಿದ ವಿವಾದದ ಕುರಿತಾದ ಪ್ರಕರಣ ಇದಾಗಿದೆ.

ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು ಅರ್ಜಿಗಳನ್ನು ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ. ಇದಕ್ಕೂ ಮುನ್ನ ಸೆಪ್ಟೆಂಬರ್ 8ರಂದು ನ್ಯಾಯಾಲಯ ವಿಚಾರಣೆಯನ್ನು ಮುಕ್ತಾಯಗೊಳಿಸಿ ತೀರ್ಪು ಪ್ರಕಟಿಸಲು ಕಾಯ್ದಿರಿಸಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಗುಜರಾತ್ ವಿಶ್ವವಿದ್ಯಾಲಯವು ರಾಜಕಾರಣಿಗಳ ವಿರುದ್ಧ ಪ್ರಕರಣ ದಾಖಲಿಸಿದೆ.

ದೂರಿನ ಹಿನ್ನೆಲೆಯಲ್ಲಿ ಮೆಟ್ರೋಪಾಲಿಟನ್ ನ್ಯಾಯಾಲಯವು ಇಬ್ಬರೂ ನಾಯಕರಿಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಆ ಸಮನ್ಸ್‌ನ್ನು ಪ್ರಶ್ನಿಸಿ ಸೆಷನ್ಸ್ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಮೋದಿ ಅವರಿಗೆ 1978ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಕಲಾ ಪದವಿ ಮತ್ತು 1983ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯದಿಂದ ಮಾಸ್ಟರ್ ಆಫ್ ಆರ್ಟ್ಸ್ ಪದವಿಯನ್ನು ನೀಡಲಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಆದರೆ, ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು ಈ ಪದವಿಗಳನ್ನು ಕಪೋಲಕಲ್ಪಿತವಾಗಿದೆ ಎಂದು ಆರೋಪಿಸಿತ್ತು.

ಗುಜರಾತ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪಿಯೂಷ್ ಪಟೇಲ್ ಅವರು ಕೇಜ್ರಿವಾಲ್ ಮತ್ತು ಸಿಂಗ್ ವಿರುದ್ಧ ದೂರು ದಾಖಲಿಸಿದ್ದು, ಮಾರ್ಚ್‌ನಲ್ಲಿ ರಾಜ್ಯ ಹೈಕೋರ್ಟ್ ಮುಖ್ಯ ಮಾಹಿತಿ ಆಯುಕ್ತರ 2016ರ ಆದೇಶವನ್ನು ರದ್ದುಗೊಳಿಸಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿ ಕೇಜ್ರಿವಾಲ್ ಅವರು ಮೋದಿಯವರ ಪದವಿಗಳ ಬಗ್ಗೆ ಮಾಹಿತಿಯನ್ನು ನೀಡುವಂತೆ ವಿಶ್ವವಿದ್ಯಾಲಯವನ್ನು ಕೇಳಿತ್ತು.

ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಎಪ್ರಿಲ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಇಬ್ಬರು ನಾಯಕರು, ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪಟೇಲ್ ತಮ್ಮ ದೂರಿನಲ್ಲಿ ಹೇಳಿದ್ದಾರೆ.

ಕೇಜ್ರಿವಾಲ್ ಅವರು ನೀಡಿದ ಒಂದು ಹೇಳಿಕೆ ಮತ್ತು ಪಟೇಲ್ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ”ಪ್ರಧಾನಿ ದೆಹಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್ ವಿಶ್ವವಿದ್ಯಾಲಯದಲ್ಲಿ ಓದಿದ್ದರೆ, ಗುಜರಾತ್ ವಿಶ್ವವಿದ್ಯಾಲಯವು ತಮ್ಮ ಹಳೆಯ ವಿದ್ಯಾರ್ಥಿ ಪ್ರಧಾನಿಯಾಗಿದ್ದಾನೆ ಎಂದು ಸಂಭ್ರಮಿಸಬೇಕು ಮತ್ತು ಅವರು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ ಮತ್ತು ಪದವಿಯನ್ನು ಬಹಿರಂಗಪಡಿಸುತ್ತಿಲ್ಲ” ಎಂದು ಹೇಳಿದ್ದರು.

ಗುಜರಾತ್ ವಿಶ್ವವಿದ್ಯಾನಿಲಯದ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ಈ ಕೇಜ್ರಿವಾಲ್ ಹಾಗೂ ಸಂಜಯ್ ಸಿಂಗ್ ಅವರು ಟ್ವೀಟ್ ಕೂಡ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕೇಜ್ರಿವಾಲ್ ಮತ್ತು ಸಿಂಗ್ ಅವರಿಗೆ ಗುಜರಾತ್‌ನ ವಿಚಾರಣಾ ನ್ಯಾಯಾಲಯ ಜುಲೈನಲ್ಲಿ ಸಮನ್ಸ್ ನೀಡಿತ್ತು.

ಇದನ್ನೂ ಓದಿ: ಸೈನಿಕರು ಹತ್ಯೆಯಾಗಿದ್ದರೆ, ಮೋದಿ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆಯಲ್ಲಿದ್ದರು: ಟಿಎಂಸಿ ವಾಗ್ಧಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...