Homeಮುಖಪುಟಮೋದಿ ಸಾಕ್ಷ್ಯಚಿತ್ರ ವಿವಾದ: ಸತ್ಯ ಮುಚ್ಚಿಡಲು ಸಾಧ್ಯವಿಲ್ಲ ಎಂದ ರಾಹುಲ್

ಮೋದಿ ಸಾಕ್ಷ್ಯಚಿತ್ರ ವಿವಾದ: ಸತ್ಯ ಮುಚ್ಚಿಡಲು ಸಾಧ್ಯವಿಲ್ಲ ಎಂದ ರಾಹುಲ್

- Advertisement -
- Advertisement -

2002ರಲ್ಲಿ ನಡೆದ ಗುಜರಾತ್ ನ ಗೋದ್ರಾ ಹತ್ಯಾಕಾಂಡದ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. ಎರಡು ಭಾಗಗಳ ಸಾಕ್ಷ್ಯಚಿತ್ರದ ಎರಡನೇ ಭಾಗ – “ಭಾರತ: ಮೋದಿ ಪ್ರಶ್ನೆ” – ಯುನೈಟೆಡ್ ಕಿಂಗ್‌ಡಂನಲ್ಲಿ ಕೆಲವೇ ಗಂಟೆಗಳಲ್ಲಿ ಬಿಡುಗಡೆಯಾಗಲಿದೆ. (ಸ್ಥಳೀಯ ಸಮಯ ಮಂಗಳವಾರ ರಾತ್ರಿ 9). ಮೋದಿ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ನಡೆದ ಗಲಭೆಗಳ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಬಿಬಿಸಿಯ ಖಾತೆಯಲ್ಲಿ ಕಠಿಣ ನಿಲುವು ತಳೆದಿತ್ತು ಮತ್ತು ಅದನ್ನು “ಪ್ರಚಾರದ ತುಣುಕು” ಎಂದು ಕರೆದಿತ್ತು. ಇದೀಗ ಈ ಸಾಕ್ಷ್ಯಚಿತ್ರದ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ.

ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ನೀವು ನಮ್ಮ ಧರ್ಮಗ್ರಂಥಗಳನ್ನು ಓದಿದ್ದರೆ, ನೀವು ಭಗವತ್ಗೀತೆ ಅಥವಾ ಉಪನಿಷತ್‌ಗಳನ್ನು ಓದಿದರೆ ಸತ್ಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎನ್ನುವುದು ತಿಳಿಯುತ್ತದೆ. ಈಗ ಸತ್ಯವು ಹೊರಬರುವುದನ್ನು ನೀವು ಗಮನಿಸಬಹುದು. ನೀವು ನಿಷೇಧಿಸಬಹುದು. ನೀವು ಪತ್ರಿಕಾ ಮಾಧ್ಯಮವನ್ನು ನಿಗ್ರಹಿಸಬಹುದು, ನೀವು ಸಂಸ್ಥೆಗಳನ್ನು ನಿಯಂತ್ರಿಸಬಹುದು, ನೀವು ಸಿಬಿಐ, ಇಡಿ (ಜಾರಿ ನಿರ್ದೇಶನಾಲಯ) ಮತ್ತು ಎಲ್ಲಾ ವಿಷಯಗಳನ್ನು ಬಳಸಬಹುದು ಆದರೆ ಸತ್ಯ ಹೊರಬರುವುದನ್ನು ನಿಮ್ಮಿಂದ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದರು.

“ಸತ್ಯವು ಪ್ರಕಾಶಮಾನವಾಗಿ ಹೊಳೆಯುತ್ತದೆ. ಇದು ಹೊರಬರುವ ಅಸಹ್ಯ ಅಭ್ಯಾಸವನ್ನು ಹೊಂದಿದೆ. ಹಾಗಾಗಿ ಯಾವುದೇ ನಿಷೇಧ, ದಬ್ಬಾಳಿಕೆ ಮತ್ತು ಜನರನ್ನು ಹೆದರಿಸಿದರೂ ಸತ್ಯ ಹೊರಬರುವುದನ್ನು ತಡೆಯಲು ಸಾಧ್ಯವಿಲ್ಲ” ಎಂದು ಅವರು ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಹೈದರಾಬಾದ್ ಕೇಂದ್ರೀಯ ವಿ.ವಿಯಲ್ಲಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನ ಯಶಸ್ವಿ: JNU, ಕೇರಳದಲ್ಲಿ ಇಂದು

ಕಳೆದ ವಾರ ಕೇಂದ್ರ ಸರ್ಕಾರವು ಸಾಮಾಜಿಕ ಮಾಧ್ಯಮದಲ್ಲಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಹಲವಾರು ಪೋಸ್ಟ್‌ಗಳನ್ನು ಮಾಡಲಾಗಿದೆ. ಅನೇಕ ವಿರೋಧ ಪಕ್ಷದ ನಾಯಕರು ಈ ಕ್ರಮವನ್ನು “ಸೆನ್ಸಾರ್‌ಶಿಪ್” ಎಂದು ಬಣ್ಣಿಸಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯವು ತನ್ನ ಪ್ರತಿಕ್ರಿಯೆಯಲ್ಲಿ, ಸಾಕ್ಷ್ಯಚಿತ್ರವು ಇತರ ರಾಷ್ಟ್ರಗಳೊಂದಿಗಿನ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದೆ. ಬಿಡುಗಡೆಯಾದಾಗಿನಿಂದಲೂ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದು, ಸುಪ್ರೀಂ ಕೋರ್ಟ್ ಈಗಾಗಲೇ ಈ ವಿಷಯದ ಬಗ್ಗೆ ತೀರ್ಮಾನಿಸಿದೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಈ ವಿಚಾರ ಪ್ರಸ್ತಾಪವಾಗಿದೆ. ಯುಕೆ ಪಿಎಂ ರಿಷಿ ಸುನಕ್, ಪಿಎಂ ಮೋದಿಯವರ ಪಾತ್ರವನ್ನು ಒಪ್ಪುವುದಿಲ್ಲ ಎಂದು ಹೇಳಿದರೆ, ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ನೆಡ್ ಪ್ರೈಸ್, ಸಾಕ್ಷ್ಯಚಿತ್ರದ ಬಗ್ಗೆ ತಿಳಿದಿರಲಿಲ್ಲ ಎಂದು ಹೇಳುವ ಮೂಲಕ ವಿವಾದಕ್ಕೆ ಒಳಗಾಗುವುದರಿಂದ ದೂರ ಉಳಿದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read