Homeಮುಖಪುಟಮೋದಿ ಚೀನಾ ಭಯಕ್ಕೆ ಚಹಾಗೆ ಚೀನಿ(ಸಕ್ಕರೆ) ಕೂಡಾ ಹಾಕುವುದಿಲ್ಲ: ಓವೈಸಿ ವ್ಯಂಗ್ಯ

ಮೋದಿ ಚೀನಾ ಭಯಕ್ಕೆ ಚಹಾಗೆ ಚೀನಿ(ಸಕ್ಕರೆ) ಕೂಡಾ ಹಾಕುವುದಿಲ್ಲ: ಓವೈಸಿ ವ್ಯಂಗ್ಯ

- Advertisement -
- Advertisement -

ಪ್ರಧಾನ ಮಂತ್ರಿ ಚೀನಾ ವಿರುದ್ದ ಮಾತನಾಡಲು ಹೆದರುತ್ತಿದ್ದಾರೆ, ಇವರು ಚೀನಾ ಭಯಕ್ಕೆ ಚಹಾಗೆ ಚೀನಿ(ಸಕ್ಕೆರೆ) ಕೂಡ ಹಾಕುವುದಿಲ್ಲ ಎಂದೆನಿಸುತ್ತದೆ ಎಂದು ಆಲ್‌ ಇಂಡಿಯಾ ಮಜ್ಲಿಸ್-ಇ-ಇತ್ತಿಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೋಮವಾರ ಹೇಳಿದ್ದಾರೆ. ಪ್ರಧಾನಿ ಮೋದಿ ಇಂಧನ ಬೆಲೆ ಏರಿಕೆ ಸೇರಿದಂತೆ ಲಡಾಕ್‌ನಲ್ಲಿ ಬಂದು ಕೂತಿರುವ ಚೀನಾದ ಬಗ್ಗೆ ಮಾತನಾಡುವುದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಸಭೆಯೊಂದನ್ನುದ್ದೇಶಿಸಿ ಮಾತನಾಡಿದ ಅಸಾದುದ್ದೀನ್ ಓವೈಸಿ, “ಪ್ರಧಾನಿ ಮೋದಿ ಎರಡು ವಿಷಯಗಳ ಬಗ್ಗೆ ಮಾತನಾಡುವುದಿಲ್ಲ. ಒಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಹಾಗೂ ಎರಡನೆಯದಾಗಿ ಲಡಾಖ್‌ನ ನಮ್ಮ ಪ್ರದೇಶದ ಒಳಗೆ ಕುಳಿತಿರುವ ಚೀನಾದ ಬಗ್ಗೆ. ಅವರು ಚೀನಾದ ಬಗ್ಗೆ ಮಾತನಾಡಲು ಕೂಡಾ ಹೆದರುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಹಿಂದುತ್ವ ವಿಚಾರ: RSS ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಇಂಧನ ದರಗಳು ಸತತ ನಾಲ್ಕನೇ ದಿನವಾದ ಭಾನುವಾರದಂದೂ ದೇಶಾದ್ಯಂತ 35 ಪೈಸೆ/ಲೀಟರ್ ಏರಿಕೆಯನ್ನು ಕಂಡಿತ್ತು.

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ವಿವಿಧ ಕಾರ್ಯಾಚರಣೆಗಳಲ್ಲಿ ಹತರಾದ ಸೈನಿಕರ ಬಗ್ಗೆ ಪ್ರತಿಕ್ರಿಯಿಸಿದ ಅಸಾದುದ್ದೀನ್ ಓವೈಸಿ, “ನಮ್ಮ ಒಂಬತ್ತು ಸೈನಿಕರು ಜಮ್ಮು ಕಾಶ್ಮೀರದಲ್ಲಿ ಮೃತಪಟ್ಟಿದ್ದಾರೆ. ಇಷ್ಟಾಗಿಯು ಭಾರತವು ಅಕ್ಟೋಬರ್ 24 ರಂದು ಪಾಕಿಸ್ತಾನದೊಂದಿಗೆ ಟಿ 20 ಪಂದ್ಯವನ್ನು ಆಡಲಿದೆ?” ಎಂದು ಕೇಳಿದ್ದಾರೆ.

“ನಮ್ಮ ಸೈನಿಕರು ಮೃತಪಟ್ಟಿದ್ದಾರೆ. ನೀವು ಟಿ-20 ಆಡುತ್ತಿದ್ದೀರಾ? ಪಾಕಿಸ್ತಾನ ನಮ್ಮ ದೇಶದ ಜನರ ಜೀವದೊಂದಿಗೆ ಕಾಶ್ಮೀರದಲ್ಲಿ ಪ್ರತಿದಿನ ಟಿ-20 ಆಡುತ್ತಿದೆ” ಎಂದು ಅವರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಓವೈಸಿ ಮನೆ ಮೇಲೆ ದಾಳಿ ಪ್ರಕರಣ: ಭದ್ರತೆ ಸುಧಾರಿಸಲು ಲೋಕಸಭೆಯ ಸ್ಪೀಕರ್‌ಗೆ ಪತ್ರ

ಕಾಶ್ಮೀರದಲ್ಲಿ ನಡೆದ ಸರಣಿ ನಾಗರಿಕ ಹತ್ಯೆಗಳ ಬಗ್ಗೆ ಮಾತನಾಡುತ್ತಾ, ಇದು ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ವೈಫಲ್ಯ ಎಂದು ಓವೈಸಿ ಹೇಳಿದ್ದಾರೆ. “ಬಿಹಾರದ ಬಡ ಕಾರ್ಮಿಕರನ್ನು ಕೊಲ್ಲಲಾಗುತ್ತಿದೆ. ಅವರನ್ನು ಗುರಿಯಾಗಿಸಿ ಉದ್ದೇಶಪೂರ್ವಕವಾಗಿ ಹತ್ಯೆ ಮಾಡಲಾಗುತ್ತಿದೆ. ಗುಪ್ತಚರ ಬ್ಯೂರೋ ಮತ್ತು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ಇದು ಒಕ್ಕೂಟ ಸರ್ಕಾರದ ವೈಫಲ್ಯ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯು ಸಾವರ್ಕರ್‌ರನ್ನು ಶೀಘ್ರದಲ್ಲೇ ರಾಷ್ಟ್ರಪಿತ ಎಂದು ಘೋಷಿಸಲಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಭಾಷಣ: ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದ 2,200ಕ್ಕೂ...

0
ರಾಜಸ್ಥಾನದ ಬನ್ಸ್ವಾರದಲ್ಲಿ ಮುಸ್ಲಿಮರ ವಿರುದ್ಧ ದ್ವೇಷದ ಹೇಳಿಕೆಗಳನ್ನು ನೀಡಿದ ಬಿಜೆಪಿಯ ಸ್ಟಾರ್ ಪ್ರಚಾರಕ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ 2,200ಕ್ಕೂ ಹೆಚ್ಚು ನಾಗರಿಕರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಆದರೆ...