Homeಕರ್ನಾಟಕ’ನಾ ಕಾವೂಂಗಾ, ನಾ ಕಾನೇ ದೂಂಗಾ’ ಎಂದ ಮೋದಿಗೆ ಯಡಿಯೂರಪ್ಪ ಮೇಲಿನ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ?:...

’ನಾ ಕಾವೂಂಗಾ, ನಾ ಕಾನೇ ದೂಂಗಾ’ ಎಂದ ಮೋದಿಗೆ ಯಡಿಯೂರಪ್ಪ ಮೇಲಿನ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ?: ಸಿದ್ದರಾಮಯ್ಯ

ಡಿನೋಟಿಫಿಕೇಷನ್ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ನ್ಯಾಯಾಲಯದ ಕಣ್ಗಾವಲಿನಲ್ಲಿ ನಡೆಸಬೇಕೆಂದು ಹೈಕೋರ್ಟ್ ನ್ಯಾಯಮೂರ್ತಿಗಳು ಆದೇಶದಲ್ಲಿ ತಿಳಿಸಿರುವುದು ಮುಖ್ಯಮಂತ್ರಿ ತನಿಖೆ ಮೇಲೆ ಪ್ರಭಾವ ಬೀರಬಹುದೆನ್ನುವ ಗುಮಾನಿಯೂ ಕಾರಣ ಎಂದು ಹೇಳಿದ್ದಾರೆ.

- Advertisement -
- Advertisement -

ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾರಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಯಡಿಯೂರಪ್ಪ ಅವರು ಕಾನೂನುಬಾಹಿರವಾಗಿ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು Cognizable offence ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಡಿಸೆಂಬರ್ 22 ರ ಆದೇಶದಲ್ಲಿ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

“ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪಾತ್ರದ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2015 ರಲ್ಲಿ ಎಫ್‌ಐಆರ್ ಸಲ್ಲಿಸಿದ್ದು, ಲೋಕಾಯುಕ್ತ ನ್ಯಾಯಾಲಯ ವಿಚಾರಣೆ ಕೂಡಾ ನಡೆಸಿತ್ತು. ಇದರಲ್ಲಿ ಯಡಿಯೂರಪ್ಪ ಅವರನ್ನು ಎರಡನೇ ಆರೋಪಿಯಾಗಿ ಮಾಡಿದ್ದರು” ಎಂದು ಅವರು ನೆನಪಿಸಿದ್ದಾರೆ.

“ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ತಮ್ಮ ವಿರುದ್ಧ ದೂರು ದಾಖಲಿಸಿರುವುದು ಕಾನೂನುಬಾಹಿರ ಕ್ರಮವಾಗಿರುವ ಕಾರಣ ಪ್ರಕರಣವನ್ನು ರದ್ದುಪಡಿಸಬೇಕೆಂಬ ಯಡಿಯೂರಪ್ಪ ಅವರ ಕೋರಿಕೆಯನ್ನು ಹೈಕೋರ್ಟ್ ತಿರಸ್ಕರಿಸಿರುವುದರಿಂದ ಅವರಿಗೆ ರಾಜೀನಾಮೆ ಹೊರತು ಬೇರೆ ದಾರಿ ಇಲ್ಲದಂತಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

“ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿದರೆ ತನ್ನ ಅಧಿಕಾರದ ಬಲದಿಂದ ತನಿಖೆಯ ಹಾದಿ ತಪ್ಪಿಸುವ ಸಾಧ್ಯತೆಗಳಿವೆ. ತಾವು ಮುಖ್ಯಮಂತ್ರಿಯಾದ ಕೂಡಲೇ ಈ ಪ್ರಕರಣದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ಪಡೆದಿರುವುದೇ ಇದಕ್ಕೆ ಸಾಕ್ಷಿ. ಡಿನೋಟಿಫಿಕೇಷನ್ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ನ್ಯಾಯಾಲಯದ ಕಣ್ಗಾವಲಿನಲ್ಲಿ ನಡೆಸಬೇಕೆಂದು ಹೈಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ತಿಳಿಸಿರುವುದು ಯಡಿಯೂರಪ್ಪ ಅವರು ತನಿಖೆ ಮೇಲೆ ಪ್ರಭಾವ ಬೀರಬಹುದೆನ್ನುವ ಗುಮಾನಿಯೂ ಕಾರಣ” ಎಂದು ಹೇಳಿದ್ದಾರೆ.

“ಅವರ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದು, ಇದು ಸಾಮಾನ್ಯ ಡಿನೋಟೀಫಿಕೇಷನ್ ಪ್ರಕರಣ ಅಲ್ಲ. ಕೈಗಾರಿಕಾ ಸ್ಥಾಪನೆಗಾಗಿ ಸ್ವಾಧೀನ ಪಡಿಸಿಕೊಂಡಿದ್ದ ಜಮೀನನ್ನು ಉದ್ಯಮಿಗಳಿಗೆ ಹಂಚಿಕೆ ಮಾಡಿದ ನಂತರ ಡಿನೋಟೀಫಿಕೇಷನ್ ಮಾಡಲಾಗಿದೆ. ಪ್ರಕರಣದ ಗಂಭೀರತೆಯನ್ನು ನ್ಯಾಯಮೂರ್ತಿಗಳು ಕೂಡಾ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ‘ನಾ ಕಾವೂಂಗಾ, ನಾ ಕಾನೇ ದೂಂಗಾ’ ಎಂದು ಘೋಷಿಸಿದ್ದ ಪ್ರಧಾನಿ ಮೋದಿ ಅವರಿಗೆ ಅವರದ್ದೇ ಪಕ್ಷದ ಮುಖ್ಯಮಂತ್ರಿಯವರ ಮೇಲಿನ ಈ ಗಂಭೀರ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಪ್ರಧಾನ ಮಂತ್ರಿ ಆಗಬೇಕು ಎನ್ನುವ ಆಸೆ ನನಗಿಲ್ಲ…’ – ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...