Homeಕರ್ನಾಟಕಮೋದಿಯವರೇ ನಮ್ಮ ಹೆಮ್ಮೆಯ ಹೆಚ್ಎಎಲ್ ಮಾರಬೇಡಿ: ಕಾಂಗ್ರೆಸ್‌ ಲೇವಡಿ

ಮೋದಿಯವರೇ ನಮ್ಮ ಹೆಮ್ಮೆಯ ಹೆಚ್ಎಎಲ್ ಮಾರಬೇಡಿ: ಕಾಂಗ್ರೆಸ್‌ ಲೇವಡಿ

- Advertisement -
- Advertisement -

ಇಂದು (ನ.25) ಬೆಂಗಳೂರಿನ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್‌ (ಹೆಚ್‌ಎಎಲ್‌) ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ತೇಜಸ್‌ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. ಹೆಚ್ಎಎಲ್‌ನ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ನಗರಕ್ಕೆ ಆಗಮಿಸಿದ್ದರು.

ಪ್ರಧಾನಿ ಹೆಚ್ಎಎಲ್‌ ಭೇಟಿ ಬೆನ್ನಲ್ಲೇ ಸರಣಿಯಾಗಿ ಎಕ್ಸ್‌ (ಟ್ವಿಟ್ಟರ್‌) ನಲ್ಲಿ ಪೋಸ್ಟ್‌ ಹಾಕಿರುವ ರಾಜ್ಯ ಕಾಂಗ್ರೆಸ್‌, ‘ಪ್ರಧಾನ ಮಂತ್ರಿಗಳೇ ನಮ್ಮ ಹೆಚ್‌ಎಎಲ್‌ ಅನ್ನು ಮಾರಬೇಡಿ’ ಎಂದು ಲೇವಡಿ ಮಾಡಿದೆ.

“ಹೆಚ್‌ಎಎಲ್‌ನಲ್ಲಿ ಫೋಟೋಶೂಟ್ ಮಾಡಿಸಿಕೊಂಡ ನರೇಂದ್ರ ಮೋದಿಯವರೇ, ಇದೇ ಹೆಚ್‌ಎಲ್‌ನೊಂದಿಗೆ ಮಾಡಿಕೊಂಡಿದ್ದ ರಫೆಲ್ ಒಪ್ಪಂದವನ್ನು ರದ್ದುಪಡಿಸಿ ಅಂಬಾನಿ ಜೋಳಿಗೆ ತುಂಬಿಸಿದ್ದೇಕೆ? ಹೆಚ್‌ಎಎಲ್‌ಗೆ ದ್ರೋಹವೆಸಗಿ ಈಗ ಫೋಟೋಶೂಟ್ ಮಾಡಿಸಿಕೊಳ್ಳುವುದಕ್ಕೆ ನಿಮ್ಮ ಮನಸು ಒಪ್ಪಿದ್ದು ಹೇಗೆ?” ಎಂದು ಕಾಂಗ್ರೆಸ್‌ ಎಕ್ಸ್‌ನಲ್ಲಿ ಪ್ರಶ್ನಿಸಿದೆ.

“ಮತ್ತೊಂದು ಪೋಸ್ಟ್‌ನಲ್ಲಿ, ಮಾರಾಟಗಾರ ನರೇಂದ್ರ ಮೋದಿಯವರೇ, ನಮ್ಮ ಹೆಮ್ಮೆಯ ಹೆಚ್ಎಎಲ್ ನ್ನು ಮಾರಬೇಡಿ. ಕೇವಲ ಫೋಟೋಶೂಟ್ ಮಾಡಿಸಿಕೊಳ್ಳಲು ಹೆಚ್ಎಎಲ್‌ಗೆ ಬಂದಿದ್ದೀರೋ ಅಥವಾ ಅದಾನಿಯ ಏಜೆಂಟ್ ಆಗಿ ಬಂದಿದ್ದೀರೋ ಗೊತ್ತಿಲ್ಲ. ಆದರೆ ನಮ್ಮ ಹೆಚ್‌ಎಎಲ್‌ ನಮಗೆ ಬಿಡಿ” ಎಂದು ಕಾಂಗ್ರೆಸ್‌ ಕಾಳೆಲೆದಿದೆ.

ತೇಜಸ್‌ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಬಳಿಕ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಇಂದು ತೇಜಸ್‌ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದೆ. ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವದಿಂದಾಗಿ ಸ್ವಾವಲಂಬನೆಯ ಕ್ಷೇತ್ರದಲ್ಲಿ ಜಗತ್ತಿನ ಯಾವ ದೇಶಕ್ಕಿಂತಲೂ ನಾವು ಕಡಿಮೆಯಿಲ್ಲ ಎಂದು ನಾನು ಅಪಾರ ಹೆಮ್ಮೆಯಿಂದ ಹೇಳಬಲ್ಲೆ. ಭಾರತೀಯ ವಾಯುಪಡೆ, ಡಿಆರ್‌ಡಿಒ, ಹೆಚ್‌ಎಎಲ್ ಮತ್ತು ಎಲ್ಲಾ ಭಾರತೀಯರಿಗೆ ಮನದಾಳದ ಅಭಿನಂದನೆಗಳು” ಎಂದಿದ್ದಾರೆ.

ಇದನ್ನೂ ಓದಿ : ಮೋದಿಯವರ ಸುಳ್ಳು ಯೋಜನೆಗಳನ್ನು ರಾಜಸ್ಥಾನದ ಜನ ತಿರಸ್ಕರಿಸುತ್ತಾರೆ: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...