Homeಕರ್ನಾಟಕಸುಮಲತಾರವರಿಗೆ ಓಟು ಕೇಳಿ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ್ ಪ್ರಸಾದ್‍ರನ್ನು ಮರೆತರೇಕೆ ಮೋದಿ?

ಸುಮಲತಾರವರಿಗೆ ಓಟು ಕೇಳಿ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ್ ಪ್ರಸಾದ್‍ರನ್ನು ಮರೆತರೇಕೆ ಮೋದಿ?

- Advertisement -
- Advertisement -

ಮೈಸೂರಿನಲ್ಲಿ ನಿನ್ನೆ ನಡೆದ ಬಿಜೆಪಿಯ ಚುನಾವಣಾ ಪ್ರಚಾರ ಸಮಾವೇಶಕ್ಕೆ ಸಾಕ್ಷಾತ್ ಪ್ರಧಾನ ಮಂತ್ರಿಗಳೇ ಬಂದಿದ್ದರು. ಪ್ರಧಾನಿಗಳು ತಮ್ಮ ಭಾಷಣದಲ್ಲಿ ಎಂದಿನಂತೆಯೇ ದೇಶದ ಜನಸಾಮನ್ಯರ ಸಮಸ್ಯೆಗಳನ್ನು ಪ್ರಸ್ತಾಪಿಸಲು ಹೋಗಲಿಲ್ಲ. ಬದಲಿಗೆ ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದರು. ಆಶ್ಚರ್ಯಕರವೆಂಬಂತೆ ದೇವೆಗೌಡರು ಮತ್ತು ಕುಮಾರಸ್ವಾಮಿಯವರ ಮೇಲೆ ಹೆಚ್ಚಿನ ದಾಳಿ ನಡೆಸಲು ಹೋಗಲಿಲ್ಲ. ಬದಲಿಗೆ ಅವರು ಕುಮಾರಸ್ವಾಮಿಯವರು ಕಾಂಗ್ರೆಸ್‍ನಿಂದ ಬಾಧಿತರಾಗಿದ್ದೆಂಬ ಮಾತುಗಳನ್ನು ಆಡಿದರು. ರಾಹುಲ್ ಗಾಂಧಿ ದೇವೇಗೌಡರಿಗೆ ಹೆದರಿಕೊಂಡು ಕರ್ನಾಟಕದಲ್ಲಿ ಸ್ಪರ್ಧಿಸುತ್ತಿಲ್ಲವೆಂದೂ ಹೇಳಿದರು.

ಆದರೆ ಎಲ್ಲಕ್ಕಿಂತ ಆಶ್ಚರ್ಯಕರ ಸಂಗತಿ ಏನೆಂದರೆ ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಅಭ್ಯರ್ಥಿಗಳ ಕುರಿತಾಗಿ ಮತ್ತು ಅಲ್ಲಿನ ಚುನಾವಣೆಯ ಬಗ್ಗೆ ಬಿಜೆಪಿಯ ಕುರಿತು ಅವರು ಮಾತನಾಡಿದರು. ಆದರೆ ಭಾಷಣ ಮುಗಿಯುತ್ತಾ ಬಂದಂತೆ ಅವರು ಅಂಬರೀಶ್‍ರವರನ್ನು ನೆನೆಸಿಕೊಂಡು ಅವರ ಪತ್ನಿ ಸುಮಲತಾ ಪರ ಮತ ಚಲಾಯಿಸುವಂತೆ ಮತದಾರರಿಗೆ ಮನವಿ ಮಾಡಿದರು. ಆದರೆ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ್ ಪ್ರಸಾದ್‍ರ ಕುರಿತು ಪ್ರಸ್ತಾಪ ಮಾಡಲೇ ಇಲ್ಲ. ಇದು ಹಲವರ ಹುಬ್ಬೇರಿಸಿದೆ

ಏಕೆಂದರೆ ಸಾಮಾನ್ಯವಾಗಿ ರಾಷ್ಟ್ರೀಯ ನಾಯಕರು ಬಂದಾಗ ಸ್ಥಳೀಯ ಅಭ್ಯರ್ಥಿಗಳನ್ನು ಮುಂದೆ ನಿಂತು ಪರಿಚಯಿಸಿ ಅವರ ಪರ ಮತ ಹಾಕಿ ಎಂದು ಅವರ ಬಾಯಲ್ಲಿ ಹೇಳಿಸುವುದು ಸಾಮಾನ್ಯ. ಆದರೆ ಇಲ್ಲಿ ವೇದಿಕೆಯ ಮೇಲೆ ಇದ್ದ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ್ ಪ್ರಸಾದ್‍ರನ್ನು ಮರೆತು ವೇದಿಕೆಯ ಮೇಲೆ ಇಲ್ಲದ ಸುಮಲತಾ ಅವರ ಪಕ್ಷದ ಅಭ್ಯರ್ಥಿಯು ಅಲ್ಲದೇ ಬಿಜೆಪಿ ಬೆಂಬಲಿಸಿರುವ ಸುಮಲತಾರವರ ಪರ ಮೋದಿ ಬ್ಯಾಟಿಂಗ್ ಮಾಡಿದ್ದಾರೆ.

ಮಂಡ್ಯದ ಚುಣಾವಣೆಯ ಕುರಿತು ಬಿಜೆಪಿ ಎಷ್ಟರ ಮಟ್ಟಿಗೆ ತಲೆಕೆಡಿಸಿಕೊಂಡಿದೆ ಎಂಬುದಕ್ಕೆ ಇದು ಕೂಡ ಸಾಕ್ಷಿ. ಮೋದಿಯವರಿಗೆ ಬಹುಶಃ ವೇದಿಕೆಯ ಮೇಲೆ ಮಾತನಾಡುತ್ತಿರುವಾಗ ತಮಗೆ ಸಂಬಂಧಿಸಿದ ಬಿಜೆಪಿ ಅಭ್ಯರ್ಥಿಗಳಿಗಿಂತ ಸುಮಲತಾರನ್ನೇ ಗೆಲ್ಲಿಸುವ ಕುರಿತು ಹೆಚ್ಚು ಕಾಳಜಿಯಿರುವಂತೆ ಕಾಣಿಸುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಮಂಡ್ಯ ಕ್ಷೇತ್ರದ ರಾಜಕೀಯದ ಕುರಿತು ಬಿಜೆಪಿ ನಿಲುವನ್ನು ಅರ್ಥೈಸಿಕೊಳ್ಳಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...