Homeಮುಖಪುಟಕನಿಷ್ಟ ಬೆಂಬಲ ಬೆಲೆ (MSP) ಬಗ್ಗೆ ಸುಳ್ಳು ಹೇಳಿತೇ ಮೋದಿ ಸರ್ಕಾರ!?

ಕನಿಷ್ಟ ಬೆಂಬಲ ಬೆಲೆ (MSP) ಬಗ್ಗೆ ಸುಳ್ಳು ಹೇಳಿತೇ ಮೋದಿ ಸರ್ಕಾರ!?

ಇಂದಿನ ಪತ್ರಿಕೆಗಳಲ್ಲಿ ಬಂದ ವರದಿಯಲ್ಲಿ ೧೪ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಹೆಚ್ಚಿಸಿದೆ ಎಂದು ಹೇಳಲಾಗಿದೆ. ಆದರೆ ಶಿವಸುಂದರ್‌ ಅವರು ಅದು ಸುಳ್ಳು ಎನ್ನುತ್ತಿದ್ದಾರೆ.

- Advertisement -
- Advertisement -

ನಿನ್ನೆ ಮೋದಿ ಸರ್ಕಾರ ರೈತರ 14 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (MSP) ಯನ್ನು ಘೋಷಿಸಿದೆ. ಹಾಗೂ ಈ ಮೂಲಕ ಕೋವಿಡ್ ಕಷ್ಟದ ಕಾಲದಲ್ಲಿ ರೈತರ ಆದಾಯ ದ್ವಿಗುಣಗೊಳಿಸಿ ರೈತರನ್ನು ಕಾಪಾಡಲಾಗಿದೆ ಎಂದು ಮೋದಿ ಸರ್ಕಾರ ಘೋಷಿಸಿದೆ.

ಆದರೆ ಮೋದಿ ಸರ್ಕಾರ ಘೋಷಿರುವ MSP ದರಗಳು, ಹೆಚ್ಚಾಗಿರುವುದಿರಲಿ ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ ಎಂದು ಚಿಂತಕ ಶಿವಸುಂದರ್‌ ಟೀಕಿಸಿದ್ದಾರೆ.

ಸ್ವಾಮಿನಾಥನ್ ಆಯೋಗದ ವರದಿಯ ಪ್ರಕಾರ ರೈತರ ಆದಾಯ ದ್ವಿಗುಣಗೊಳ್ಳುವುದಿರಲಿ ಕನಿಷ್ಟ ಸ್ಥಿರವಾಗಿರಬೇಕೆಂದರೂ ರೈತನ ಉತ್ಪಾದಕ ವೆಚ್ಚಕ್ಕೆ ೧.೫ ಪಟ್ಟು ಹೆಚ್ಚು ಬೆಲೆಯನ್ನು ಒದಗಿಸಬೇಕು. ಆದರೆ ಆ ಉತ್ಪಾದಕ ವೆಚ್ಚವನ್ನು ಲೆಕ್ಕ ಹಾಕುವಾಗ ಸ್ವಾಮಿನಾಥನ್ ವರದಿಯ ಪ್ರಕಾರ ರೈತನ ಇತರ ಮೂಲಭೂತ ಸರಕು ವೆಚ್ಚಗಳ ಜೊತೆಗೆ ಭೂಮಿಯ ಸವಕಳಿ ವೆಚ್ಚ ಹಾಗೂ ರೈತ ಹೂಡುವ ಬಂಡವಾಳದ ಮೇಲಿನ ಬಡ್ಡಿಯನ್ನು ಸೇರಿಸಿಕೊಳ್ಳಬೇಕು. ಅದನ್ನೇ C-2 ಉತ್ಪಾದಕ ವೆಚ್ಚ ಎಂದು ಕರೆಯುತ್ತಾರೆ.

ಸ್ವಾಮಿನಾಥನ್ ವರದಿಯ ಪ್ರಕಾರ ರೈತರ ಆದಾಯ ಸ್ಥಿರವಾಗಬೇಕೆಂದರೂ ಸರ್ಕಾರ ಕೊಡುವ ಎಂಎಸ್‌ಪಿ ದರ ಈ C-2 ವೆಚ್ಚಕ್ಕಿಂತ ಎರಡು ಪಟ್ಟು ಹೆಚ್ಚಿರಬೇಕಿತ್ತು. ಆದರೆ ಮೋದಿ ಸರ್ಕಾರ ರೈತರ ಉತ್ಪಾದನಾ ವೆಚ್ಚವನ್ನು ಲೆಕ್ಕಹಾಕುವಾಗ C-2 ಆಧರಿಸಿ ಲೆಕ್ಕಾಚಾರ ಮಾಡುವುದಿಲ್ಲ. ಅದು ರೈತ ಒಳಸುರಿಗಳಿಗೆ ಅಂದರೆ ಬೀಜ, ಗೊಬ್ಬರ, ಕೂಲಿ…ಇತ್ಯಾದಿಗಳನ್ನು ಮಾತ್ರ ಲೆಕ್ಕಕ್ಕೆ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ಸ್ವಾಮಿನಾಥನ್ ವರದಿಯಂತೆ ಭೂಮಿಯ ಸವಕಳಿ, ಹಾಗೂ ರೈತ ಹೂಡುವ ಬಂಡವಾಳದ ಮೇಲಿನ ಬಡ್ಡಿಯನ್ನು ಲೆಕ್ಕಕ್ಕೇ ತೆಗೆದುಕೊಳ್ಳುವುದಿಲ್ಲ. ಹೀಗಾಗಿ ಮೋದಿ ಸರ್ಕಾರ MSP ಯ ಹೆಸರಿನಲ್ಲಿ ರೈತರಿಗೆ ದೊಡ್ಡ ಮೋಸವನ್ನೇ ಮಾಡುತ್ತಾ ಬರುತ್ತಿದೆ ಎಂದು ಶಿವಸುಂದರ್‌ ತಿಳಿಸಿದ್ದಾರೆ.

ಈ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಎಲ್ಲಾ ಬಗೆಯ ಉತ್ಪಾದನ ಹಾಗೂ ಸರಬರಾಜು ಮತ್ತು ಸಂಗ್ರಹ ವೆಚ್ಚ ಹೆಚ್ಚಿರುವುದರಿಂದ ಈ ಬಾರಿಯಾದರೂ ಮೋದಿ ಸರ್ಕಾರ ನೈಜ ದರದಲ್ಲಿ MSP ದರವನ್ನು ಹೆಚ್ಚಿಸಿ ರೈತರ ಕಷ್ಟಗಳನ್ನು ಸ್ವಲ್ಪವಾದರೂ ಕಡಿಮೆಮಾಡಬಹುದಿತ್ತು. ಆದರೆ ಮೋದಿ ಸರ್ಕಾರ MSP ದರವನ್ನು ಹೆಚ್ಚು ಮಾಡುವುದಕ್ಕಿಂತ ಸುಳ್ಳುಗಳನ್ನು ಹೆಚ್ಚು ಹೇಳುತ್ತಾ ರೈತರನ್ನು ಮೋಸ ಮಾಡುತ್ತಿದೆ ಎಂದಿದ್ದಾರೆ.

ಎಂಬುದು ಕೆಳಗಿನ ಪಟ್ಟಿಯನ್ನು ನೋಡಿದರೆ ಸ್ಪಷ್ಟವಾಗಿ ಅರ್ಥವಾಗುತ್ತದೆ:

 

2019-20 ರ ಸಾಲಿನಲ್ಲಿ ಸರಾಸರಿ ಹಣದುಬ್ಬರ ದರ ಶೇ.4.5- 5 ಇತ್ತು. ಅಂದರೆ ಕಳೆದ ವರ್ಷ ದ 100 ರೂ. ನ ಮೌಲ್ಯ ಈ ವರ್ಷ ದ 105 ರೂ. ಎಂದರ್ಥ.. ಅಂದರೆ ಈ ವರ್ಷ 105 ರೂ. ಕೊಟ್ಟರೂ ಅದು 5 ರೂ. ಹೆಚ್ಚಾದಂತಲ್ಲ. ಏಕೆಂದರೆ ಶೇ.5ರ ಹಣದುಬ್ಬರವನ್ನು ಲೆಕ್ಕಕ್ಕೆ ತೆಗೆದುಕೊಂಡಾಗ ಈ ವರ್ಷದ 105 ರೂ.ನ ನಿಜವಾದ ಮೌಲ್ಯ ಕಳೆದ ವರ್ಷ ದ 100 ರೂ.ಮಾತ್ರ..

ಹೀಗಾಗಿ ಈ ವರ್ಷ ಘೋಷಿಸಿರುವ MSP ದರ ಹೋದ ವರ್ಷದ ದರಕ್ಕಿಂತ ಕನಿಷ್ಟ ಶೇ.5ಕ್ಕಿಂತ ಹೆಚ್ಚಿದ್ದರೆ ಮಾತ್ರ ಈ ವರ್ಷ ಹೆಚ್ಚಿಗೆ ದರ ಕೊಡಲಾಗಿದೆ ಎಂದರ್ಥ….. MSP ದರ ಹೆಚ್ಚಳವು ಹೋದವರ್ಷಕ್ಕಿಂತ ಶೇ.5 ಕ್ಕಿಂತ ಕಡಿಮೆ ಇದೆ ಎಂದರೆ ಸಾರಾಂಶದಲ್ಲಿ ಹೋದವರ್ಷ ಕೊಟ್ಟಷ್ಟು ಕೂಡಾ ಈ ವರ್ಷ ಕೊಟ್ಟಿಲ್ಲ ಎಂದರ್ಥ…

ಹಾಗಾಗಿ ಮೋದಿ ಸರ್ಕಾರವು ಈ ವರ್ಷ ಘೋಷಿಸಿರುವ ಕನಿಷ್ಟ ಬೆಂಬಲ ಬೆಲೆ ಕಳೆದ ವರ್ಷಕ್ಕಿಂತ ಕಡಿಮೆಯಿದೆ. ಈಗಾದರೆ ರೈತರ ಕಥೆಯೇನು?


ಇದನ್ನೂ ಓದಿ: ಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ….!! ಶಿವಸುಂದರ್ ಬರೆಯುತ್ತಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...