Homeಮುಖಪುಟಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ.

ಬಿಜೆಪಿ ಮತ್ತು ಕೇಂದ್ರ ಸಚಿವರು ಈ ಮೈಲಿಗಲ್ಲನ್ನು “12 ವರ್ಷಗಳ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ”ಎಂಬ ಹೆಸರಿನಲ್ಲಿ ಆಚರಿಸುತ್ತಿದ್ದಾರೆ. 

ಇದೇ ಸಂದರ್ಭದಲ್ಲಿ ದೇಶದ ಜನರಿಗೆ, ವಿಶೇಷವಾಗಿ ಮಹಿಳೆಯರಿಗೆ ಕಹಿ ಸುದ್ದಿಯೊಂದು ಹೊರ ಬಿದ್ದಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ) ಅಡಿಯಲ್ಲಿ ನೀಡಲಾಗುತ್ತಿರುವ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಸಂಖ್ಯೆಯನ್ನು ಒಂಬತ್ತರಿಂದ ನಾಲ್ಕಕ್ಕೆ ಇಳಿಸಲಾಗಿದೆ ಎಂಬುವುದಾಗಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸೂಚಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೋದಿ ಸರ್ಕಾರಕ್ಕೆ 12 ವರ್ಷ, 12 ರಿಂದ 4ಕ್ಕೆ ಇಳಿದ ಸಿಲಿಂಡರ್‌ಗಳ ಸಂಖ್ಯೆ

ಮೋದಿ ಸರ್ಕಾರ ಜೂನ್ 9, 2026ಕ್ಕೆ 12 ವರ್ಷಗಳನ್ನು ಪೂರೈಸಿದೆ. ಇದೇ ವೇಳೆ 12 ಇದ್ದ ಉಜ್ವಲ ಯೋಜನೆಯ ಸಿಲಿಂಡರ್‌ಗಳ ಸಂಖ್ಯೆ 4ಕ್ಕೆ ಇಳಿದಿದೆ.

2016ರಲ್ಲಿ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪ್ರಾರಂಭಿಸಿದಾಗ, ಫಲಾನುಭವಿಗಳು ವರ್ಷಕ್ಕೆ 12 ಸಬ್ಸಿಡಿ ಸಿಲಿಂಡರ್‌ಗಳನ್ನು ಪಡೆಯುತ್ತಾರೆ ಎಂದು ಸರ್ಕಾರ ಘೋಷಣೆ ಮಾಡಿತ್ತು. ಕಳೆದ ವರ್ಷ, ಈ ಸಂಖ್ಯೆಯನ್ನು 9ಕ್ಕೆ ಇಳಿಸಲಾಗಿತ್ತು. ಈಗ ಅದನ್ನು ನಾಲ್ಕಕ್ಕೆ ಇಳಿಸಲಾಗಿದೆ.

ಮೋದಿ ಸರ್ಕಾರ ಸಿಲಿಂಡರ್‌ಗಳ ಸಂಖ್ಯೆಯನ್ನು ಇಳಿಸಲು ಪಶ್ಚಿಮ ಏಷ್ಯಾ ಸಂಘರ್ಷದಿಂದ ಎಲ್‌ಪಿಜಿ ಪೂರೈಕೆಯಲ್ಲಿ ಅಡಚಣೆಯಾಗಿರುವುದೇ ಕಾರಣ ಎಂದು ಕೆಲ ಮಾಧ್ಯಮ ವರದಿಗಳು ಉಲ್ಲೇಖಿಸಿವೆ. ಇದು ನಿಜವೇ ಆದರೆ, ಪಶ್ಚಿಮ ಏಷ್ಯಾ ಸಂಘರ್ಷದಿಂದ ನಮ್ಮ ದೇಶದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಮೋದಿ ಕೈಯಲ್ಲಿ ದೇಶ ಸುರಕ್ಷಿತವಾಗಿದೆ ಎಂದು ಬಿಜೆಪಿಯವರು ಹೇಳುತ್ತಿರುವುದು ಸುಳ್ಳಾ? ಎಂಬ ಪ್ರಶ್ನೆ ಮೂಡುತ್ತದೆ.

ಒಂದು ವೇಳೆ ಸಿಲಿಂಡರ್‌ಗಳ ಸಂಖ್ಯೆ ಇಳಿಕೆಗೆ ಪಶ್ಚಿಮ ಏಷ್ಯಾ ಸಂಘರ್ಷ ಕಾರಣವಲ್ಲ ಎಂದರೆ, ಇನ್ನೇನು ಕಾರಣ ಎಂಬುವುದನ್ನು ಸರ್ಕಾರ ಮತ್ತು ಅದನ್ನು ಸಮರ್ಥಿಸುವ ಬಿಜೆಪಿಗರು ಉತ್ತರಿಸಬೇಕಷ್ಟೆ.

2016 ರಿಂದ 10 ಕೋಟಿಗೂ ಹೆಚ್ಚು ಕುಟುಂಬಗಳು ಉಜ್ವಲ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಂಡಿವೆ. 2024-25 ಮತ್ತು 2025-26 ರ ಹಣಕಾಸು ವರ್ಷಗಳಲ್ಲಿ ಈ ಯೋಜನೆಯಡಿಯಲ್ಲಿ ಸಬ್ಸಿಡಿ ಹಂಚಿಕೆ ಸುಮಾರು 12,000 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ಸಿಲಿಂಡರ್ ಕಡಿತ- ಕಾಂಗ್ರೆಸ್ ಟೀಕೆ

ಸಬ್ಸಿಡಿ ಸಿಲಿಂಡರ್ ಕಡಿತದಿಂದ ಫಲಾನುಭವಿ ಮಹಿಳೆಯರ ಮೇಲೆ ವರ್ಷಕ್ಕೆ 24,792 ಕೋಟಿ ರೂ. ಹೊರೆಯಾಗಲಿದೆ ಎಂದು ಕಾಂಗ್ರೆಸ್ ವಕ್ತಾರ ಸುರ್ಜೇವಾಲ ಹೇಳಿಕೆ ನೀಡಿದ್ದಾರೆ.

“ಮೋದಿ ನೇತೃತ್ವದ ಸರ್ಕಾರ ತನ್ನನ್ನು ತಾನು ಮಹಿಳಾ ಕಲ್ಯಾಣದ ಚಾಂಪಿಯನ್ ಎಂದು ಹೇಳಿಕೊಳ್ಳುತ್ತಿದ್ದರೂ, ಬಡ ಗೃಹಿಣಿಯರನ್ನು ನಿರ್ಲಕ್ಷಿಸುತ್ತಿದೆ. ಸರ್ಕಾರ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಸ್ಥಿರವಾಗಿ ಹಿಂಪಡೆಯುತ್ತಿದೆ ಹಾಗೂ ಆರ್ಥಿಕವಾಗಿ ದುರ್ಬಲವಾಗಿರುವ ವರ್ಗಗಳಿಗೆ ನೀಡಿದ್ದ ಭರವಸೆಯನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

“2016ರಲ್ಲಿ ಉಜ್ವಲ ಯೋಜನೆಯು ಮಹಿಳೆಯರಿಗೆ ಹೊಗೆಯುಗುಳುವ ಕಟ್ಟಿಗೆ ಒಲೆಗಳಿಂದ ಮುಕ್ತಿ ನೀಡಲಿದೆ ಎಂದು ಮೋದಿ ಹೇಳಿದ್ದರು. ವರ್ಷಕ್ಕೆ 12 ಸಬ್ಸಿಡಿ ಸಹಿತ ಸಿಲಿಂಡರ್‌ಗಳನ್ನು ಪೂರೈಸಲಾಗುವುದು ಎಂದು ಭರವಸೆಯನ್ನೂ ನೀಡಲಾಗಿತ್ತು. ಆದರೆ, ಕಳೆದ ವರ್ಷ ಈ ಸಂಖ್ಯೆಯನ್ನು 12ರಿಂದ 9ಕ್ಕೆ ಇಳಿಕೆ ಮಾಡಲಾಯಿತು. ಇದೀಗ 2026ರಲ್ಲಿ ಸಬ್ಸಿಡಿ ಸಹಿತ ಸಿಲಿಂಡರ್‌ಗಳ ಸಂಖ್ಯೆಯನ್ನು 9ರಿಂದ 4ಕ್ಕೆ ಇಳಿಕೆ ಮಾಡಲಾಗಿದೆ. ಕ್ಲಪ್ತವಾಗಿ ಹೇಳುವುದಾದರೆ, 12 ಸಿಲಿಂಡರ್‌ಗಳನ್ನು ಪೂರೈಸುವ ಭರವಸೆ ನೀಡಲಾಗಿತ್ತು. ಆದರೆ, ಆ ಸಂಖ್ಯೆ ಇದೀಗ ಕೇವಲ 4ಕ್ಕೆ ಇಳಿಕೆಯಾಗಿದೆ” ಎಂದು ಖರ್ಗೆ ಬೊಟ್ಟು ಮಾಡಿದ್ದಾರೆ.

“ಪದೇ ಪದೇ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಏರಿಕೆ ಮಾಡುತ್ತಿರುವುದರಿಂದ, ಫಲಾನುಭವಿಗಳ ಪಾಲಿಗೆ ಎಲ್‌ಪಿಜಿ ಸಿಲಿಂಡರ್ ದುಬಾರಿಯಾಗಿ ಪರಿಣಮಿಸಿದೆ ಎಂದೂ ಅವರು ದೂರಿದ್ದಾರೆ. ಬಲವಂತವಾಗಿ ಸಿಲಿಂಡರ್ ಗಳನ್ನು ಕೈಬಿಡುವಂತೆ ಮಾಡಲಾಗುತ್ತಿದೆ. ಇದರಿಂದ ತಾಯಂದಿರು ಹಾಗೂ ಸಹೋದರಿಯರು ಸಾಂಪ್ರದಾಯಿಕ ಒಲೆಗಳಿಗೆ ಮೊರೆ ಹೋಗುವ ಅನಿವಾರ್ಯತೆಗೆ ತುತ್ತಾಗಿದ್ದಾರೆ. ಅವರ ಕಷ್ಟಗಳ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಮೋದಿ ಸರ್ಕಾರ, ಅಧಿಕಾರದ ಮದವೇರಿಸಿಕೊಂಡಿದೆ!” ಎಂದು ಅವರು ತೀಕ್ಷ್ಣ ಟೀಕಾಪ್ರಹಾರ ನಡೆಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...