Homeಮುಖಪುಟಚೀನಾ- ಭಾರತ ಗಡಿ ಸಮಸ್ಯೆ ಚರ್ಚೆಗೆ ಸಂಸತ್‌ನಲ್ಲಿ ಅವಕಾಶ ನೀಡದ ಮೋದಿ ಸರ್ಕಾರ: ಸೋನಿಯಾ ಗಾಂಧಿ...

ಚೀನಾ- ಭಾರತ ಗಡಿ ಸಮಸ್ಯೆ ಚರ್ಚೆಗೆ ಸಂಸತ್‌ನಲ್ಲಿ ಅವಕಾಶ ನೀಡದ ಮೋದಿ ಸರ್ಕಾರ: ಸೋನಿಯಾ ಗಾಂಧಿ ವಾಗ್ದಾಳಿ

ಚೀನಾ- ಭಾರತ ಗಡಿ ವಿವಾದದ ಕುರಿತು ಸಂಸತ್‌ನಲ್ಲಿ ಚರ್ಚಿಸಲು ಅವಕಾಶ ನೀಡಬೇಕೆಂದು ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿವೆ

- Advertisement -
- Advertisement -

“ಚೀನಾ-ಭಾರತ ಗಡಿ ಸಂಘರ್ಷ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದ ನರೇಂದ್ರ ಮೋದಿ ಸರ್ಕಾರವು ಪ್ರಜಾಪ್ರಭುತ್ವದ ಬಗೆಗೆ ಅಗೌರವವನ್ನು ತೋರಿಸುತ್ತಿದೆ ಮತ್ತು ರಾಷ್ಟ್ರವನ್ನು ಒಗ್ಗೂಡಿಸಲು ತನಗಿರುವ ಅಸಮರ್ಥತೆಯನ್ನು ಪ್ರದರ್ಶಿಸಿದೆ” ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಹೇಳಿದ್ದಾರೆ.

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, “ಗಂಭೀರ ಕಾಳಜಿಯ ವಿಷಯಗಳ ಬಗ್ಗೆ ಬಿಜೆಪಿ ಮೌನವಹಿಸಿದೆ. ಇದು ಬಿಜೆಪಿ ಅಧಿಕಾರಾವಧಿಯ ನಿರ್ಣಾಯಕ ಲಕ್ಷಣವಾಗಿದೆ” ಎಂದು ಟೀಕಿಸಿದ್ದಾರೆ.

ಡಿಸೆಂಬರ್ 9ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಉಭಯ ದೇಶಗಳ ಸೈನಿಕರ ನಡುವೆ ಘರ್ಷಣೆ ನಡೆದಾಗಿನಿಂದ ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದದ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಜೂನ್ 2020ರಲ್ಲಿ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ಏರ್ಪಟ್ಟಿತ್ತು. ನಂತರದಲ್ಲಿ ಉಭಯ ದೇಶಗಳ ನಡುವೆ ನಡೆದ ಘಟನೆ ಇದಾಗಿದೆ. ಗಾಲ್ವಾನ್ ಘಟನೆಯು 20 ಭಾರತೀಯ ಸೈನಿಕರ ಸಾವಿಗೆ ಕಾರಣವಾಯಿತು ಎಂದು ಚೀನಾ ಹೇಳಿಕೊಂಡಿದೆ.

“ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಚರ್ಚೆ ಮಾಡಲು ಅವಕಾಶ ನೀಡಿದರೆ ಹಲವಾರು ನಿರ್ಣಾಯಕ ಪ್ರಶ್ನೆಗಳಿಗೆ ಉತ್ತರ ಸಿಗುತ್ತದೆ” ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾದ ಸೋನಿಯಾ ಪ್ರತಿಕ್ರಿಯೆ ನೀಡಿದ್ದಾರೆ.

“ಚೀನಾ ನಮ್ಮ ಮೇಲೆ ನಿರಂತರವಾಗಿ ದಾಳಿ ಮಾಡಲು ಏಕೆ ಧೈರ್ಯ ಮಾಡುತ್ತದೆ?” ಎಂದು ಸಭೆಯಲ್ಲಿ ಅವರು ಪ್ರಶ್ನಿಸಿದ್ದಾರೆ. “ಈ ದಾಳಿಗಳನ್ನು ಹಿಮ್ಮೆಟ್ಟಿಸಲು ಯಾವ ಸಿದ್ಧತೆಗಳನ್ನು ಮಾಡಲಾಗಿದೆ? ಇನ್ನೂ ಏನು ಮಾಡಬೇಕಾಗಿದೆ? ಭವಿಷ್ಯದಲ್ಲಿ ಆಕ್ರಮಣಗಳು ಆಗದಂತೆ ಚೀನಾವನ್ನು ತಡೆಯಲು ಸರ್ಕಾರ ಯಾವ ನೀತಿ ರೂಪಿಸಿದೆ? ನಾವು ಚೀನಾದೊಂದಿಗೆ ತೀವ್ರ ವ್ಯಾಪಾರ ಕೊರತೆಯನ್ನು ಹೊಂದಿದ್ದೇವೆ. ನಾವು ರಫ್ತು ಮಾಡುವುದಕ್ಕಿಂತ ಹೆಚ್ಚಿನದನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ. ಚೀನಾ ಸಾಧಿಸುತ್ತಿರುವ ಮಿಲಿಟರಿ ಹಗೆತನಕ್ಕೆ ನಮ್ಮ ಆರ್ಥಿಕ ಪ್ರತಿಕ್ರಿಯೆ ಏಕೆ ಇಲ್ಲ?” ಎಂದು ಸೋನಿಯಾ ಅವರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

“ತನ್ನ ನೀತಿಗಳು ಮತ್ತು ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ” ಎಂದಿರುವ ಸೋನಿಯಾ ಗಾಂಧಿ, “ಸ್ಪಷ್ಟವಾದ ಚರ್ಚೆಯು ದೇಶದ ಪ್ರತಿಕ್ರಿಯೆಯನ್ನು ಬಲಪಡಿಸುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಇದಕ್ಕೆ ವಿರುದ್ಧವಾಗಿ ಸರ್ಕಾರ ಕೆಲಸ ಮಾಡುತ್ತಿದೆ. ವಿಭಜಕ ನೀತಿಗಳನ್ನು ಅನುಸರಿಸುತ್ತಿದೆ, ದ್ವೇಷವನ್ನು ಹರಡುತ್ತಿದೆ, ನಮ್ಮ ಸಮಾಜದ ಕೆಲವು ವರ್ಗಗಳನ್ನು ಟಾರ್ಗೆಟ್ ಮಾಡುತ್ತಿದೆ. ಆದರೆ ವಿದೇಶಿ ಬೆದರಿಕೆಗಳ ವಿರುದ್ಧ ದೇಶವು ಒಂದಾಗಿ ನಿಲ್ಲುವುದಕ್ಕೆ ಸರ್ಕಾರ ತಡೆಯಾಗಿದೆ” ಎಂದು ಅವರು ದೂರಿದ್ದಾರೆ.

“ಇಂತಹ ಸಮಯದಲ್ಲಿ ನಮ್ಮ ಜನರನ್ನು ಒಗ್ಗೂಡಿಸುವುದು ಸರ್ಕಾರದ ಪ್ರಯತ್ನ ಮತ್ತು ಜವಾಬ್ದಾರಿಯಾಗಿರಬೇಕು. ಕಳೆದ ಹಲವಾರು ವರ್ಷಗಳಿಂದ ಮಾಡುತ್ತಿರುವಂತೆ ಜನರನ್ನು ವಿಭಜಿಸಬಾರದು” ಎಂದು ಮನವಿ ಮಾಡಿದ್ದಾರೆ.

ಪ್ರತಿಪಕ್ಷಗಳನ್ನು ಟಾರ್ಗೆಟ್ ಮಾಡುವಲ್ಲಿ, ಭಿನ್ನಧ್ವನಿಗಳನ್ನು ಪ್ರಶ್ನಿಸುವಲ್ಲಿ, ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಳ್ಳುವಲ್ಲಿ, ಸಂಸ್ಥೆಗಳನ್ನು ದುರ್ಬಲಗೊಳಿಸುವಲ್ಲಿ ಬಿಜೆಪಿ ಸರ್ಕಾರ ತೊಡಗಿದೆ ಎಂದು ಆರೋಪಿಸಿದ್ದಾರೆ. “ಇದು ಕೇಂದ್ರದಲ್ಲಿ ಮಾತ್ರವಲ್ಲ, ಬಿಜೆಪಿ ಆಡಳಿತ ನಡೆಸುವ ಪ್ರತಿಯೊಂದು ರಾಜ್ಯದಲ್ಲೂ ನಡೆಯುತ್ತಿದೆ” ಎಂದು ವಿಷಾದಿಸಿದ್ದಾರೆ.

ಪ್ರತಿಪಕ್ಷಗಳಿಂದ ಪ್ರತಿಭಟನೆ

ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯ ನಂತರ, ಸೋನಿಯಾ ಗಾಂಧಿ ಮತ್ತು ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸಂಸತ್ತಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿ ನಡೆದ ವಿರೋಧ ಪಕ್ಷಗಳ ಪ್ರತಿಭಟನೆಗೆ ನೇತೃತ್ವ ವಹಿಸಿದ್ದರು. ಚಳಿಗಾಲದ ಅಧಿವೇಶನದಲ್ಲಿ ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದದ ಬಗ್ಗೆ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು.

ಶಿವಸೇನೆ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ದ್ರಾವಿಡ ಮುನ್ನೇತ್ರ ಕಳಗಂ, ರಾಷ್ಟ್ರೀಯ ಜನತಾದಳ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸೇರಿದಂತೆ ಸುಮಾರು 12 ಪ್ರತಿಪಕ್ಷಗಳ ಸಂಸದರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮೋದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

“ನಾವು ಚೀನಾದ ಬಗ್ಗೆ ಚರ್ಚೆಯನ್ನು ಬಯಸುತ್ತೇವೆ, ನಾವು ಮಿಲಿಟರಿ ರಹಸ್ಯಗಳನ್ನು ಕೇಳುತ್ತಿಲ್ಲ” ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

“ಭಾರತ ಮತ್ತು ಚೀನಾ ಸೇನೆಗಳ ಕಮಾಂಡರ್‌ಗಳ ನಡುವಿನ 16 ಸುತ್ತಿನ ಮಾತುಕತೆ ಏನು ಸಾಧಿಸಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಖರ್ಗೆಯವರು ಮಾತನಾಡಿ, “ಚರ್ಚೆಯನ್ನು ನಡೆಸದಿದ್ದರೆ ಮತ್ತು ಕೇವಲ ಏಕಪಕ್ಷೀಯ ಪ್ರತಿಕ್ರಿಯೆ ಇದ್ದರೆ, ಅದು ಯಾವ ಅರ್ಥವನ್ನು ಸೂಚಿಸುತ್ತದೆ?” ಖರ್ಗೆ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...