Homeಮುಖಪುಟ'ಪ್ರತಿಪಕ್ಷಗಳನ್ನು ಆರ್ಥಿಕವಾಗಿ ಕತ್ತು ಹಿಸುಕಲು ಮೋದಿ ಸರ್ಕಾರ ಬಯಸಿದೆ..'; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

‘ಪ್ರತಿಪಕ್ಷಗಳನ್ನು ಆರ್ಥಿಕವಾಗಿ ಕತ್ತು ಹಿಸುಕಲು ಮೋದಿ ಸರ್ಕಾರ ಬಯಸಿದೆ..’; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

- Advertisement -
- Advertisement -

₹1,700 ಕೋಟಿ ಪಾಔತಿಸುವಂತೆ ಕಾಂಗ್ರೆಸ್ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ನೀಡಿರುವ ನೋಟಿಸ್‌ಗೆ ಪಕ್ಷವು ಶುಕ್ರವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. “ಅಧಿಕಾರಿಗಳನ್ನು ಆಡಳಿತ ಪಕ್ಷದ ಗುಂಡಾಗಳಾಗಿ ಬಳಸಿಕೊಳ್ಳಲಾಗುತ್ತಿದೆ” ಎಂದು ಕಿಡಿಕಾರಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ‘ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಚುನಾವಣಾ ಸಮಯದಲ್ಲಿ ವಿರೋಧ ಪಕ್ಷಗಳನ್ನು “ಆರ್ಥಿಕವಾಗಿ ಕತ್ತು ಹಿಸುಕಲು” ಪ್ರಯತ್ನಿಸುತ್ತಿದೆ’ ಎಂದು ಆರೋಪಿಸಿದರು.

“ನಾವು ಚುನಾವಣೆ ಎದುರಿಸುತ್ತಿರುವ ಸಮಯದಲ್ಲಿ ಕಾಂಗ್ರೆಸ್ ಪಕ್ಷವನ್ನು ದಿವಾಳಿ ಮಾಡುವ ನಿರ್ದಿಷ್ಟ ಉದ್ದೇಶದಿಂದ ನರೇಂದ್ರ ಮೋದಿ ಸರ್ಕಾರ ಇದನ್ನು ಮಾಡುತ್ತಿದೆ” ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳಿಗೆ ಸಾಮಾನ್ಯವಾಗಿ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗುತ್ತದೆ. ಆದರೆ, ಈ ದಂಡವು ರಿಟರ್ನ್ಸ್ ಸಲ್ಲಿಸುವಲ್ಲಿ ವಿಳಂಬದ ಹೆಸರಿನಲ್ಲಿದೆ ಎಂದು ಅವರು ತಿಳಿಸಿದರು.

ಇದರ ಬೆನ್ನಲ್ಲೇ, ವಿರೋಧ ಪಕ್ಷಗಳನ್ನು ಗುರಿಯಾಗಿಸಲು ಬಿಜೆಪಿಯ ಕೇಂದ್ರೀಯ ಸಂಸ್ಥೆಗಳ ಶೋಷಣೆಯ ವಿರುದ್ಧ ಕಾಂಗ್ರೆಸ್ ಮಾರ್ಚ್ 30ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ಘೋಷಿಸಿತು.

ಅವರು ಸರ್ಕಾರದ ಕಾರ್ಯವಿಧಾನವನ್ನು ಬಳಸಿಕೊಂಡು ವಿರೋಧ ಪಕ್ಷಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವವನ್ನು ಕಸಿಯುವ ಕ್ರಮವಾಗಿದೆ. ಬಿಜೆಪಿ ಕೂಡ ಯಾವುದೇ ರಿಟರ್ನ್ಸ್ ಪಾವತಿಸಿಲ್ಲ. ಆದರೆ, ಅವರು ಐಟಿ ಇಲಾಖೆ ನೋಟಿಸ್‌ನಿಂದ ಸುರಕ್ಷಿತವಾಗಿದ್ದಾರೆ ಎಂದು ಅವರು ಹೇಳಿದರು.

ಆದಾಯ ತೆರಿಗೆ ಇಲಾಖೆ ಶುಕ್ರವಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ₹1,700 ಕೋಟಿ ಬೇಡಿಕೆಯ ನೋಟಿಸ್ ನೀಡಿದೆ. ಹೊಸ ಬೇಡಿಕೆಯ ಸೂಚನೆಯು 2017-18 ರಿಂದ 2020-21 ರ ಮೌಲ್ಯಮಾಪನ ವರ್ಷಗಳಿಗೆ ದಂಡ ಮತ್ತು ಬಡ್ಡಿಯನ್ನು ಒಳಗೊಂಡಿರುತ್ತದೆ. 2018-19ರ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯಲ್ಲಿ ಕೇಂದ್ರೀಯ ಸಂಸ್ಥೆ ಈ ಹಿಂದೆ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ.

ನೋಟಿಸ್ ಪ್ರಕಾರ ₹1,076.35 ಕೋಟಿ ದಂಡ ಮತ್ತು ₹692 ಬಡ್ಡಿ ಪಾವತಿಸುವಂತೆ ಕಾಂಗ್ರೆಸ್‌ಗೆ ತಿಳಿಸಲಾಗಿದೆ ಎಂದು ವೇಣುಗೋಪಾಲ್ ಉಲ್ಲೇಖಿಸಿದ್ದಾರೆ.

ತೆರಿಗೆ ಅಧಿಕಾರಿಗಳು ನಾಲ್ಕು ವರ್ಷಗಳ ಕಾಲ ತನ್ನ ವಿರುದ್ಧ ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಾರಂಭಿಸುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. ಪ್ರಸ್ತುತ ವಿಷಯವು 2017 ರಿಂದ 2021 ರ ಮೌಲ್ಯಮಾಪನ ವರ್ಷಗಳಿಗೆ ಸಂಬಂಧಿಸಿದೆ.

ಮಾರ್ಚ್ 8 ರಂದು, ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಕಾಂಗ್ರೆಸ್ ಪಕ್ಷವು ಸಲ್ಲಿಸಿದ ಮನವಿಯನ್ನು ವಜಾಗೊಳಿಸಿತು. ಆದಾಯ ತೆರಿಗೆ ಇಲಾಖೆಯು ಅವರ ಬ್ಯಾಂಕ್ ಖಾತೆಗಳನ್ನು ವಸೂಲಿ ಮತ್ತು ಫ್ರೀಜ್ ಮಾಡುವ ಪ್ರಕ್ರಿಯೆಗಳ ವಿರುದ್ಧ ತಡೆಯಾಜ್ಞೆ ಕೋರಿದ್ದ ತಡೆ ಅರ್ಜಿಯು ಅರ್ಹವಲ್ಲ ಎಂದು ಹೇಳಿದೆ.

ಇದನ್ನೂ ಓದಿ; ಕಾಂಗ್ರೆಸ್‌ ನಂತರ ಕಮ್ಯುನಿಸ್ಟ್‌ ಪಾರ್ಟಿಗೆ ನೋಟಿಸ್ ಕೊಟ್ಟ ಐಟಿ; ₹11 ಕೋಟಿ ಬಾಕಿ ಪಾವತಿಸುವಂತೆ ಸೂಚನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಬಿಜೆಪಿ ಮಾತ್ರ 272ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದೆ ಎಂಬ ಮೋದಿ...

0
ಮೇ 1, 2024 ರಂದು ಗುಜರಾತ್‌ನ ಬನಸ್ಕಾಂತದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, "ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 272ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದ ಏಕೈಕ ಪಕ್ಷ ಬಿಜೆಪಿ"...