Homeಕರೋನಾ ತಲ್ಲಣಕೋವಿಡ್ ನಿರ್ವಹಣೆಗೆ ಕಾರ್ಯಪಡೆ ನೇಮಿಸಿದ ಸುಪ್ರೀಂ: ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ!

ಕೋವಿಡ್ ನಿರ್ವಹಣೆಗೆ ಕಾರ್ಯಪಡೆ ನೇಮಿಸಿದ ಸುಪ್ರೀಂ: ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ!

- Advertisement -
- Advertisement -

ವೈದ್ಯಕೀಯ ಆಮ್ಲಜನಕದ ಲಭ್ಯತೆ ಮತ್ತು ವಿತರಣೆಯನ್ನು ನಿರ್ಣಯಿಸಲು 12 ಸದಸ್ಯರ ರಾಷ್ಟ್ರೀಯ ಕಾರ್ಯಪಡೆಯೊಂದನ್ನು ಸುಪ್ರೀಂ ಕೋರ್ಟ್ ಸ್ಥಾಪಿಸಿದೆ. ವೈಜ್ಞಾನಿಕವಾಗಿ, ತರ್ಕಬದ್ಧವಾಗಿ ಮತ್ತು ನ್ಯಾಯಯುತವಾಗಿ ದೇಶಾದ್ಯಂತ ಕೋವಿಡ್‌ಗೆ ಚಿಕಿತ್ಸೆ ನೀಡಲು ಅಗತ್ಯವಾದ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಕಾರ್ಯಪಡೆ ಸೂಚಿಸುತ್ತದೆ.

ಕಳೆದ ತಿಂಗಳಿನಿಂದ ಸುಪ್ರೀಂಕೋರ್ಟ್, ದೆಹಲಿ ಹೈಕೋರ್ಟ್, ಕರ್ನಾಟಕ ಹೈಕೋರ್ಟ್ ಸೇರಿದಂತೆ ಹಲವು ಕೋರ್ಟ್‌ಗಳು ಕೇಂದ್ರ ಸರ್ಕಾರದ ವೈಫಲ್ಯವನ್ನು ಟೀಕಿಸುತ್ತ ಬಂದಿದ್ದು, ಈಗ ಕಾರ್ಯಪಡೆ ನೇಮಕವು ಕೇಂದ್ರದ ಸತತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

‘ಅದೇನು ಮಾಡುತ್ತೀರೋ ಗೊತ್ತಿಲ್ಲ, ಆಮ್ಲಜನಕ ಒದಗಿಸಿ…. ಭಿಕ್ಷೆಯನ್ನಾದರೂ ಬೇಡಿ, ಸಾಲವನ್ನಾದರೂ ಮಾಡಿ, ಕೊನೆಗೆ ಕದ್ದಾದರೂ ತನ್ನಿ’ ಎಂದು ದೆಹಲಿ ಹೈಕೋರ್ಟ್ ಈ ಹಿಂದೆ ಕಿಡಿಕಾರಿತ್ತು.

ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸಿ ಎಂದು ಕೇಂದ್ರಕ್ಕೆ ರಾಜ್ಯ ಹೈಕೋರ್ಟ್ ಆದೇಶಿಸಿತ್ತು. ಆದರೆ ಇದರ ವಿರುದ್ಧ ಸುಪ್ರೀಂಕೋರ್ಟಿಗೆ ಹೋಗಿದ್ದ ಕೇಂದ್ರ ಸರ್ಕಾರದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್ ರಾಜ್ಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿತ್ತು.

ಪ್ರತಿದಿನವೂ ದೆಹಲಿ ಹೈಕೋರ್ಟ್ ಮತ್ತು ಸುಪ್ರೀಕೋರ್ಟಿನಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಕನಿಷ್ಠ ಒಂದಾರೂ ವಿಚಾರಣೆ ನಡೆಯುತ್ತ ಬಂದಿವೆ. ಪ್ರತಿ ಸಲವೂ ಈ ಕೋರ್ಟುಗಳು ಕೇಂದ್ರದ ಜವಾಬ್ದಾರಿಯನ್ನು ನೆನಪಿಸುತ್ತ, ಕೆಲವೊಮ್ಮೆ ಎಚ್ಚರಿಸುತ್ತ ಬಂದಿದ್ದವು. ಆದರೆ ಕೇಂದ್ರ ಸರ್ಕಾರದ ಸತತ ವೈಫಲ್ಯಗಳು, ತಾರತಮ್ಯ ನೀತಿಗಳನ್ನು ನೋಡಿ ರೋಸಿದ ಸುಪ್ರೀಂಕೋರ್ಟ್ 12 ತಜ್ಞರ ಕಾರ್ಯಪಡೆಯನ್ನು ನೇಮಕ ಮಾಡಿದೆ.

ವಿವಿಧ ರಾಜ್ಯಗಳಿಗೆ ಕೇಂದ್ರದ ಆಮ್ಲಜನಕದ ಹಂಚಿಕೆಯನ್ನು ಪುನರುಜ್ಜೀವನಗೊಳಿಸುವಂತೆ ಕಾರ್ಯಪಡೆ ಸ್ಥಾಪಿಸಲು ಉನ್ನತ ನ್ಯಾಯಾಲಯ ಆದೇಶಿಸಿದೆ. ಆ ಸಮಯದಲ್ಲಿ ಕೇಂದ್ರವು ಒಪ್ಪಿಗೆ ನೀಡಿತು, ಆದರೆ ಲೆಕ್ಕಪರಿಶೋಧನೆ ನಡೆಸಬೇಕೆಂದು ಬಯಸಿತ್ತು, ಆದರೆ ದೆಹಲಿ ಸರ್ಕಾರ ಇದನ್ನು ವಿರೋಧಿಸಿತ್ತು.

ಈ ಆದೇಶ ನೀಡಿದ ಪೀಠದ ನ್ಯಾಯಾಧೀಶರಾದ ಚಂದ್ರಚೂಡ್ ಮತ್ತು ಎಂ.ಆರ್ ಶಾ ಕಾರ್ಯಪಡೆಯ ಪ್ರತಿಯೊಬ್ಬ ಸದಸ್ಯರೊಂದಿಗೆ ಮಾತನಾಡಿದ್ದು, ಒಂದು ವಾರದಲ್ಲಿ ಕೆಲಸ ಪ್ರಾರಂಭವಾಗುವ ನಿರೀಕ್ಷೆಯಿದೆ, ಈ ಕಾರ್ಯಪಡೆ ಕೇಂದ್ರ ಮತ್ತು ನ್ಯಾಯಾಲಯಕ್ಕೆ ವರದಿಗಳನ್ನು ನೀಡಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಇದು ದುರಂತಮಯ ಮಾನವ ಬಿಕ್ಕಟ್ಟನ್ನು ಎದುರಿಸಲು ವಿವಿಧ ಬಗೆಯ ತಜ್ಞತೆ ಉಳ್ಳ ಕಾರ್ಯಪಡೆ ಸದಸ್ಯರು ವೈಜ್ಞಾನಿಕ ಕಾರ್ಯತಂತ್ರಗಳನ್ನು ರೂಪಿಸಲು ಅನುಕೂಲವಾಗಲಿದೆ” ಎಂದು ನ್ಯಾಯಾಲಯವು ಹೇಳಿದೆ.

ಆಂಬ್ಯುಲೆನ್ಸ್‌ಗಳು, ಕೆಳ ಹಂತದ ಕೋವಿಡ್ ಆರೈಕೆ ಸೌಲಭ್ಯಗಳು ಮತ್ತು ಹೋಂ ಐಸೋಲೆಷನ್ ಹೊಂದಿರುವ ರೋಗಿಗಳನ್ನು ಪರಿಗಣಿಸಲು ಕೇಂದ್ರವು ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ತನ್ನ ವಿಚಾರಣೆಯಲ್ಲಿ ಹೇಳಿದೆ.

ಅಂದರೆ, ಸರ್ಕಾರದ ವಿಫಲತೆಯ ಕಾರಣಕ್ಕೆ ಸುಪ್ರೀಂಕೋರ್ಟ್ ರೋಸಿ ಹೋಗಿ ಅನಿವಾರ್ಯವಾಗಿ ಮಧ್ಯಪ್ರವೇಶ ಮಾಡಬೇಕಾಯ್ತು ಅಲ್ಲವೇ? ಸಂಸದೀಯ ಅಥವಾ ಶಾಸಕಾಂಗದ ಕೆಲಸದಲ್ಲಿ ಸುಪ್ರೀಂಕೋರ್ಟ್ ಸಾಧಾರಣವಾಗಿ ಹಸ್ತಕ್ಷೇಪ ಮಾಡುವುದಿಲ್ಲ, ಮಾಡಲೂಬಾರದು ಎಂಬುದು ಸಂವಿಧಾನ ಹೇಳುವ ಪಾಠ. ಆದರೆ, ಪದೇ ಪದೇ ವಿಫಲವಾಗುತ್ತಿರುವ ಸರ್ಕಾರ, ತೀವ್ರವಾಗಿ ಉಲ್ಬಣಗೊಳ್ಳುತ್ತಿರುವ ಸಾಂಕ್ರಾಮಿಕತೆ ಮತ್ತು ವಿವಿಧ ರಾಜ್ಯಗಳಿಂದ ಕೇಳಿ ಬರುತ್ತಿರುವ ಆಕ್ಷೇಪಗಳನ್ನು ಗಮನಿಸಿ ಸುಪ್ರೀಂಕೋರ್ಟ್ ಪೀಠ ಈ ತೀರ್ಮಾನಕ್ಕೆ ಬಂದಿದೆ. ಇದು ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ.
ಕಳೆದ ವರ್ಷದಿಂದ ಕೇಂದ್ರ ಸರ್ಕಾರವೇ ಒಂದು ತಜ್ಞರ ಸಮಿತಿ ನೇಮಿಸಿದೆ. ಅದು ಕಾಲಕಾಲಕ್ಕೆ ಸಲಹೆ ನೀಡುತ್ತ ಬಂದಿದೆ. ಇನ್ನೊಂದು ಕಡೆ ನೀತಿ ಆಯೋಗ ಕೂಡ ಕೇಂದ್ರ ಸರ್ಕಾರಕ್ಕೆ ನಿರಂತರ ವರದಿಗಳನ್ನು ಸಲ್ಲಿಸುತ್ತಲೇ ಬಂದಿದೆ. ಹಿರಿಯ ತಜ್ಞರು, ಪತ್ರಕರ್ತರು ತಮ್ಮ ಬರಹಗಳಲ್ಲಿ ಕೇಂದ್ರವನ್ನು ಎಚ್ಚರಿಸುತ್ತಲೇ ಬಂದಿದ್ದಾರೆ. ಆದರೂ ಈ ಸರ್ಕಾರದ ತೀರ್ಮಾನಗಳು ಸಾಂಕ್ರಾಮಿಕ ನಿರ್ವಹಣೆಯಲ್ಲಿ ವಿಫಲವಾಗಿವೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬೆಂಗಳೂರಿನ ಸಾಮಾಜಿಕ ಕಳಕಳಿಯ ವಕೀಲರಾದ ರಾಜಲಕ್ಷ್ಮಿ ಅಂಕಲಗಿ, “ಸುಪ್ರೀಂಕೋರ್ಟಿನ ಈ ಮಧ್ಯಸ್ಥಿಕೆಯನ್ನು ಶಾಸಕಾಂಗ-ಕಾರ್ಯಾಂಗದಲ್ಲಿ ಹಸ್ತಕ್ಷೇಪ ಎಂದು ನೋಡಲಾಗದು. ಈ ಮಾನವೀಯ ಬಿಕ್ಕಟ್ಟಿನ ಸಮಯದಲ್ಲಿ ಉನ್ನತ ನ್ಯಾಯಾಲಯ ಸರಿಯಾದ ತೀರ್ಮಾನವನ್ನೇ ಮಾಡಿದೆ. ಇದು ಈ ಸರ್ಕಾರದ ವೈಫಲ್ಯತೆಗೆ ಸಾಕ್ಷಿ ಕೂಡ. ಈ ದೇಶದಲ್ಲಿ ಹಿಂದಿನಿಂದಲೂ ನ್ಯಾಯಾಂಗವು ಆಗಾಗ ‘ನ್ಯಾಯಾಂಗೀಯ ಕ್ರಿಯಾಶೀಲತೆ’ (ಜುಡಿಷಿಯಲ್ ಆಕ್ಟಿವಿಸಂ) ಅನ್ನು ತೋರುತ್ತಲೇ ಬಂದಿದೆ. ಕಳೆದ 7-8 ವರ್ಷಗಳಲ್ಲಿ ಈ ಕ್ರಿಯಾಶೀಲತೆಗೆ ಗರ ಬಡಿದಿತ್ತು. ಈಗ ಅದು ಮತ್ತೆ ಪುನಶ್ಚೇತನಗೊಂಡ ಹಾಗೆ ಕಾಣುತ್ತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

‘ರಫೇಲ್ ವಿಷಯ ಸೇರಿದಂತೆ ಹಲವು ಆಡಳಿತಾತ್ಮಕ ವಿವಾದಗಳಲ್ಲಿ ಸುಪ್ರೀಂ ನಿಲುವು ಟೀಕೆಗಳಿಗೆ ಒಳಗಾಗಿತ್ತು. ಇತ್ತೀಚೆಗೆ ಹಲವು ಹೈಕೋರ್ಟ್‌ಗಳು (ಉದಾಹರಣೆಗೆ, ಚುನಾವಣಾ ಆಯೋಗದ ವಿರುದ್ಧ ಕೊಲೆ ಮೊಕದ್ದಮೆ ಹೂಡಬೇಕು ಎಂಬ ಮದ್ರಾಸ್ ಹೈಕೋರ್ಟ್ ಅಭಿಪ್ರಾಯ) ತುಂಬ ಆಕ್ಟೀವ್ ಆದ ಕಾರಣಕ್ಕೆ ಸುಪ್ರೀಂಕೋರ್ಟ್ ಎಚ್ಚೆತ್ತುಕೊಂಡಿರಬಹುದು ಅಥವಾ ಈ ಮಾನವೀಯ ದುರಂತದ ಚಿತ್ರಗಳು ನ್ಯಾಯಾಧೀಶರ ಮನಕ್ಕೆ ತಟ್ಟಿರಬಹುದು’ ಎಂದು ಅವರು ತಿಳಿಸಿದ್ದಾರೆ.

ತಮ್ಮ ಸುತ್ತಲಿನ ಕೆಲವೇ ಐಎಎಸ್‌ಗಳ ಮಾತನ್ನು ಕೇಳಿಕೊಂಡು ಪ್ರಧಾನಿ ನಿರ್ಣಯ ತೆಗೆದುಕೊಳ್ಳುತ್ತ ಬಂದಿದ್ದಾರೆ. ‘ಪ್ರಧಾನಿಯನ್ನು ಹೊಗಳುವ, ಪ್ರಧಾನಿ ಮನದಾಳದ ಅಭಿಪ್ರಾಯಗಳನ್ನೇ ಹೇಳಿ ಖುಷಿ ಪಡಿಸುವ ಅಧಿಕಾರಿಗಳ ದಂಡು ಪ್ರಧಾನಿಯ ಸುತ್ತ ಇದೆ. ಇದರಲ್ಲಿ ಪ್ರಧಾನಿ ಗುಜರಾತಿನಿಂದ ಕರೆಸಿಕೊಂಡ ‘ನಿಷ್ಠ’ ಅಧಿಕಾರಿಗಳೇ ಜಾಸ್ತಿ ಇದ್ದಾರೆ. ಪಿಎಂಒ ಕೂಡ ಇಂತಹ ಅಧಿಕಾರಿಗಳಿಂದಲೇ ತುಂಬಿದೆ’ ಎಂದು ಕಳೆದ ತಿಂಗಳು ರಾಜಕೀಯ ವಿಶ್ಲೇಷಕ ರಾಮಚಂದ್ರ ಗುಹಾ (ನಾನುಗೌರಿ.ಕಾಂ ನಲ್ಲಿ ಇದರ ಅನುವಾದ ಪ್ರಕಟಿಸಿದ್ದೆವು) ಬರೆದಿದ್ದರು.
ಆಮ್ಲಜನಕ, ಔಷಧಿಗಳು ಮತ್ತು ಆಸ್ಪತ್ರೆಯ ಹಾಸಿಗೆಗಳಲ್ಲಿನ ತೀವ್ರ ಕೊರತೆಯನ್ನು ಇನ್ನಷ್ಟು ಹದಗೆಡಿಸಬಹುದಾದ ಮೂರನೇ ಕೋವಿಡ್ ಅಲೆಗೆ ಕೇಂದ್ರವು ಸಿದ್ಧತೆ ನಡೆಸುತ್ತಿದೆಯೇ ಎಂದು ತಿಳಿಯಲು ನ್ಯಾಯಾಲಯವು ಒತ್ತಾಯಿಸಿತ್ತು ಎಂಬುದನ್ನು ಗಮನಿಸಿದರೆ, ಈ ಸರ್ಕಾರದ ಬಗ್ಗೆ ನ್ಯಾಯಾಲಯಕ್ಕೆ ವಿಶ್ವಾಸವೇ ಹೋದಂತಿದೆ.

ವಿದೇಶಿ ಮಾಧ್ಯಮಗಳು ಮತ್ತು ದೇಸಿ ಸ್ವತಂತ್ರ ಮಾಧ್ಯಮಗಳು ಮೋದಿ ಸರ್ಕಾರದ ವೈಫಲ್ಯಗಳ ವಿರುದ್ಧ ಸುದ್ದಿ ಮಾಡುತ್ತಲೇ ಬಂದಿವೆ. ಆದರೆ ಮೋದಿ ಸರ್ಕಾರ ಇನ್ನು ಎಚ್ಚೆತ್ತುಕೊಂಡಿಲ್ಲದಿರುವುದು ದುರಂತವಾಗಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ; ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...