Homeಮುಖಪುಟಮೋದಿ ಸರ್ಕಾರ ‘ಥರ್ಡ್‌ ಕ್ಲಾಸ್‌’ ರಾಜಕಾರಣ ಮಾಡುತ್ತಿದೆ: ಶಿವಸೇನೆ

ಮೋದಿ ಸರ್ಕಾರ ‘ಥರ್ಡ್‌ ಕ್ಲಾಸ್‌’ ರಾಜಕಾರಣ ಮಾಡುತ್ತಿದೆ: ಶಿವಸೇನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ರಾಷ್ಟ್ರದ ಸಮಸ್ಯೆಗಳನ್ನು ಪರಿಹರಿಸುವ ಬದಲು ‘ಥರ್ಡ್‌ ಕ್ಲಾಸ್‌’ ರಾಜಕಾರಣದಲ್ಲಿ ತೊಡಗಿದೆ ಎಂದು ಮಹಾರಾಷ್ಟ್ರದ ಶಿವಸೇನೆ ಆರೋಪಿಸಿದೆ. ಪಕ್ಷದ ಮುಖವಾಣಿ ಸಾಮ್ನಾ ತನ್ನ ಭಾನುವಾರದ ಸಂಪಾದಕೀಯದಲ್ಲಿ ಪಶ್ಚಿಮ ಬಂಗಾಳ ಸರ್ಕಾರದೊಂದಿಗೆ ಒಕ್ಕೂಟ ಸರ್ಕಾರ ನಡೆಸುತ್ತಿರುವ ಕಚ್ಚಾಟಗಳನ್ನು ಉಲ್ಲೇಖಿಸಿದೆ.

“ಒಕ್ಕೂಟ-ರಾಜ್ಯ ಸರ್ಕಾರದ ನಡುವೆ ನಡೆಯುತ್ತಿರುವ ಜಗಳವು ಒಕ್ಕೂಟ ಆಡಳಿತ ವ್ಯವಸ್ಥೆಗೆ ಒಂದು ಸವಾಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗಷ್ಟೇ ಮುಗಿದ ಚುನಾವಣೆಯಲ್ಲಿ ಬಿಜೆಪಿ ತನ್ನ ಸೋಲಿನಿಂದಾಗಿ ತೀವ್ರ ನೋವನ್ನು ಅನುಭವಿಸಿದೆ ಎಂಬುದು ನಿಜ” ಎಂದು ಶಿವಸೇನೆ ಸಂಸದ ಸಂಜಯ್ ರಾವತ್‌ ತಮ್ಮ ಸಾಪ್ತಾಹಿಕ ಅಂಕಣ ‘ರೋಕ್‌ಥಾಕ್’ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಟಿಎಂಸಿ ಮುಖಂಡರ ಭೇಟಿ – ಬಂಗಾಳದ ಬಿಜೆಪಿ ನಾಯಕ ರಾಜೀಬ್‌ ಬ್ಯಾನರ್ಜಿ ಮತ್ತೆ ಟಿಎಂಸಿಗೆ?

ಪಶ್ಚಿಮ ಬಂಗಾಳದ ಮಾಜಿ ಮುಖ್ಯ ಕಾರ್ಯದರ್ಶಿ ಅಲಪನ್ ಬಂದೋಪಾಧ್ಯಾಯ ಅವರ ವಿಚಾರವಾಗಿ ಬಂಗಾಳ ಮತ್ತು ಒಕ್ಕೂಟ ಸರ್ಕಾರದ ನಡುವಿನ ಜಗಳವು ‘‘ಸಾರ್ವಜಿನಿಕ ನಳ್ಳಿ ನೀರಿಗಾಗಿ, ಗಲಾಟೆ ಮಾಡುತ್ತಿರುವ ಮಹಿಳೆಯರ ರೀತಿಯಲ್ಲಿ ಕಾಣುತ್ತಿದೆ’’ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅಲಪನ್‌ ಬಂದೋಪಾಧ್ಯಾಯ ಅವರು ಮೇ 28 ರಂದು ಕಲೈಕುಂಡ ವಾಯುನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ನಿಗದಿತ ಸಭೆಯನ್ನು ಕೈಬಿಡಲು ನಿರ್ಧರಿಸಿದ ನಂತರ ಬಂದೋಪಾಧ್ಯಾಯ ಅವರು ರಾಜಕೀಯ ಕಚ್ಚಾಟದ ನಡುವೆ ಸಿಲುಕಿ ಬಿದ್ದರು. ಅವರನ್ನು ಒಕ್ಕೂಟ ಸರ್ಕಾರದ ಸೇವೆಗೆ ಹಿಂತಿರುಗಬೇಕೆಂದು ಒಕ್ಕೂಟ ಸರ್ಕಾರ ಹೇಳಿದಾಗ ತನ್ನ ಕೆಲಸಕ್ಕೆ ರಾಜೀನಾಮೆ ಸಲ್ಲಿಸಿದ ಬಂದೋಪಾಧ್ಯಾಯ ಸಿಎಂ ಮಮತಾ ಬ್ಯಾನರ್ಜಿಯ ಮುಖ್ಯ ಸಲಹೆಗಾರರಾಗಿ ಕರ್ತವ್ಯ ವಹಿಸಿಕೊಂಡರು. ಇದರ ನಂತರ ಅವರಿಗೆ ಒಕ್ಕೂಟ ಸರ್ಕಾರವು ಪ್ರಧಾನಿಯೊಂದಿಗಿನ ಸಭೆಗೆ ಭಾಗವಹಿಸದೆ ಇರಲು ಕಾರಣವೇನೆಂದು ತಿಳಿಸಲು ಶೋಕಾಸ್‌ ನೋಟಿಸ್‌ ಕೂಡಾ ನೀಡಿತ್ತು.

ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ರಾಜ್ಯಸಭೆಯ ಮಾಜಿ ಸಂಸದ ಸ್ವಪನ್ ದಾಸ್‌ಗುಪ್ತಾ ಅವರನ್ನು ಮತ್ತೆ ರಾಜ್ಯಸಭೆಗೆ ಮರುನಾಮಕರಣ ಮಾಡಿರುವುದು ಹೊಸ ಬೆಳವಣಿಗೆಯಾಗಿದೆ ಎಂದು ರಾವತ್‌ ಹೇಳಿದ್ದಾರೆ.

ಸ್ವಪನ್ ದಾಸ್‌ಗುಪ್ತಾ ಅವರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬೇಕಾಗಿ ಮಾರ್ಚ್‌ನಲ್ಲಿ ಮೇಲ್ಮನೆಗೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಕೊರೋನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ರಾಜ್ಯದ 42 ಮಕ್ಕಳು

“ದಾಸ್‌ಗುಪ್ತಾ ಅವರನ್ನು ರಾಷ್ಟ್ರಪತಿಗಳು ನಾಮಕರಣ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಈ ವ್ಯಕ್ತಿ ರಾಜ್ಯಸಭೆಗೆ ರಾಜೀನಾಮೆ ನೀಡಿದ್ದರು. ಆದರೆ ಅವರು ಸೋಲನುಭವಿಸಿದರು. ಇದಾಗಿ ಮತ್ತೆ ಒಂದು ತಿಂಗಳೊಳಗೆ ಅವರನ್ನು ನಾಮಕರಣ ಮಾಡಲಾಯಿತು. ಈ ರೀತಿಯ ಘಟನೆಯು ರಾಜ್ಯಸಭೆಯ ಇತಿಹಾಸದಲ್ಲಿ ಎಂದಿಗೂ ಸಂಭವಿಸಿಲ್ಲ” ಎಂದು ರಾವತ್‌ ಹೇಳಿದ್ದಾರೆ.

ರಾಷ್ಟ್ರ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ನಿಭಾಯಿಸುವ ಬದಲು ಸೆಂಟ್ರಲ್‌ ವಿಸ್ಟಾ ಯೋಜನೆಗೆ ಸಮಯ ಮತ್ತು ಹಣವನ್ನು ವ್ಯಯಿಸುತ್ತಿದೆ ಎಂದು ರಾವತ್‌ ಒಕ್ಕೂಟ ಸರ್ಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರಧಾನಿ ಮತ್ತು ಉಪರಾಷ್ಟ್ರಪತಿಗೆ ಹೊಸ ನಿವಾಸಗಳನ್ನು ನಿರ್ಮಿಸುವತ್ತ ಒಕ್ಕೂಟ ಸರ್ಕಾರ ಗಮನ ಹರಿಸಿದೆ. ಈ ಇಬ್ಬರು ಹೊಸ ಮನೆಗಳನ್ನು ಪಡೆಯುತ್ತಾರೆ, ಆದರೆ ನಾಗರಿಕರ ಕತೆ ಏನು? ನಾಗರಿಕರು ಬಡತನಕ್ಕೆ ಜಾರಿದ್ದಾರೆ. 2020 ರ ಏಪ್ರಿಲ್‌ನಲ್ಲಿ ಕೊರೊನಾ ಕಾರಣದಿಂದಾಗಿ 130 ದಶಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ” ಎಂದು ರಾವತ್‌ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದ ದೆಹಲಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...