Homeಕರ್ನಾಟಕಪಂಚರಾಜ್ಯ ಚುನಾವಣೆಯ ಸೋಲಿನ ಭಯದಿಂದ ಮೋದಿ ಸರ್ಕಾರ ಐಟಿ ದಾಳಿ ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ

ಪಂಚರಾಜ್ಯ ಚುನಾವಣೆಯ ಸೋಲಿನ ಭಯದಿಂದ ಮೋದಿ ಸರ್ಕಾರ ಐಟಿ ದಾಳಿ ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಪಂಚರಾಜ್ಯಗಳಲ್ಲಿನ ಚುನಾವಣೆ ಸೋಲಿನ ಭಯ ಮತ್ತು ಶ್ರೀಮಂತ ಉದ್ಯಮಿ – ಗುತ್ತಿಗೆದಾರರನ್ನು ಬ್ಲಾಕ್ ಮೇಲ್ ಮಾಡುವ ದುರುದ್ದೇಶದ ಕಾರಣಕ್ಕಾಗಿಯೇ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಐಟಿ- ಇಡಿ ದಾಳಿಗಳನ್ನು ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ”ತಮ್ಮ ದುರುದ್ದೇಶ ಮತ್ತು ಭ್ರಷ್ಟತೆಯನ್ನು ಮುಚ್ಚಿಕೊಳ್ಳುವುದಕ್ಕಾಗಿಯೇ ಕಾಂಗ್ರೆಸ್ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ನಡೆಸಲಾಗುತ್ತಿರುವ ಐಟಿ ದಾಳಿಗಳು ಮತ್ತು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸಂಬಂಧ ಇಲ್ಲ, ಈ ಬಗ್ಗೆ ಯಾವುದಾದರೂ ಪುರಾವೆಗಳಿದ್ದರೆ ಕಾನೂನು ಪ್ರಕಾರ ಕ್ರಮಕೈಗೊಳ್ಳಲು ಅವರು ಸ್ವತಂತ್ರರಿದ್ದಾರೆ. ತೆರಿಗೆ ವಂಚಕರ ವಿರುದ್ಧದ ಕ್ರಮಗಳನ್ನು ನಾವು ಸ್ವಾಗತಿಸುತ್ತೇವೆ” ಎಂದಿದ್ದಾರೆ.

ಗುತ್ತಿಗೆದಾರರು ಖೊಟ್ಟಿ ಖರೀದಿ ರಸೀದಿಗಳು ಮತ್ತು ಉಪಗುತ್ತಿಗೆದಾರರಿಂದ ಅಪ್ರಾಮಾಣಿಕವಾದ ಖರ್ಚುವೆಚ್ಚದ ದಾಖಲೆಗಳ ಮೂಲಕ ಅದಾಯವನ್ನು ಕಡಿಮೆಗೊಳಿಸಿ ತೆರಿಗೆ ವಂಚನೆ ಮಾಡಿರುವುದು ದಾಳಿಯಲ್ಲಿ ಪತ್ತೆಯಾಗಿದೆ ಎಂದು ಐಟಿ ಇಲಾಖೆಯೇ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಯಾವುದೇ ರಾಜಕೀಯ ಪಕ್ಷದ ಜೊತೆಗಿನ ವ್ಯವಹಾರದ ಬಗ್ಗೆ ಉಲ್ಲೇಖವನ್ನು ಇಲಾಖೆಯೇ ಮಾಡದೆ ಇರುವಾಗ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಎದೆ ಬಡಿದುಕೊಂಡು ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿರುವುದು ಯಾಕೆ? ಇವರದ್ದೇ ಸರ್ಕಾರದ ವರಮಾನ ತೆರಿಗೆ ಇಲಾಖೆಯ ಮೇಲೆಯೂ ಇವರಿಗೆ ನಂಬಿಕೆ ಇಲ್ಲವೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ಪಂಚರಾಜ್ಯಗಳಲ್ಲಿ ಮಾತ್ರವಲ್ಲ ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಯ ಸೋಲು ಬಹುತೇಕ ಖಾತರಿಯಾಗಿರುವ ಕಾರಣ ಬಿಜೆಪಿಗೆ ಹಿಂದಿನಂತೆ ಹಣ ಸಂಗ್ರಹವಾಗುತ್ತಿಲ್ಲ, ಕರ್ನಾಟಕದಲ್ಲಿ 40% ಕಮಿಷನ್ ನ ಬಹುದೊಡ್ಡ ಮೂಲ ಕೂಡಾ ನಿಂತುಹೋಗಿದೆ. ಇದಕ್ಕಾಗಿ ಶ್ರೀಮಂತ ಉದ್ಯಮಿಗಳು ಮತ್ತು ಗುತ್ತಿಗದಾರರನ್ನು ಬ್ಲಾಕ್ ಮೇಲ್ ಮಾಡಿ ಬೆದರಿಸಿ ಹಣ ವಸೂಲಿ ಮಾಡಲು ಐಡಿ-ಇಡಿ ದಾಳಿ ನಡೆಸಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಶತಸಿದ್ದ. ತನ್ನ ಸೋಲಿಗೆ ಕಾರಣ ಹೇಳಲು ಬಿಜೆಪಿ ಈಗಲೇ ಕುಂಟುನೆಪಗಳನ್ನು ಹುಡುಕುತ್ತಿದೆ. ಕಾಂಗ್ರೆಸ್ ಪಕ್ಷದ ದುಡ್ಡಿನಬಲದಿಂದಾಗಿ ನಾವು ಸೋತುಹೋದೆವು ಎಂದು ಚುನಾವಣೆಯ ಮರುದಿನ ಬಿಜೆಪಿಯಿಂದ ಹೇಳಿಕೆ ಬಂದರೆ ಯಾರೂ ಆಶ್ಚರ್ಯಪಡಬೇಕಾಗಿಲ್ಲ” ಎಂದಿದ್ದಾರೆ.

ತಮ್ಮ ಚುನಾವಣಾ ರಾಜಕೀಯಕ್ಕಾಗಿ ಯಾವ ಪಕ್ಷ ಹಣ ದೋಚುವುದರಲ್ಲಿ ತೊಡಗಿದೆ ಎನ್ನುವುದು ಚುನಾವಣಾ ಬಾಂಡ್ ಗಳ ಮೂಲಕ ಕೇಂದ್ರ ಬಿಜೆಪಿ ಸಂಗ್ರಹಿಸಿದ ಹಣದ ವಿವರವೇ ಸಾಕ್ಷಿಯಾಗಿದೆ. ಮಾರ್ಚ್‌ 2018ರಿಂದ ಜನವರಿ 2023ರ ವರೆಗಿನ ಅವಧಿಯಲ್ಲಿ 12,008 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಗಳು ಮಾರಾಟವಾಗಿದ್ದು ಅದರಲ್ಲಿ ಬಿಜೆಪಿಗೆ ಸೇರಿರುವ ಬಾಂಡ್ ಗಳ ಒಟ್ಟು ಮೌಲ್ಯ 5272 ಕೋಟಿ ರೂಪಾಯಿ. ಈ ಹಣವನ್ನು ಉದ್ಯಮಿಗಳು ಸ್ವಯಿಚ್ಚೆಯಿಂದ ನೀಡಿದರೇ? ಇಲ್ಲವೇ ಬ್ಲಾಕ್ ಮೇಲ್ ನಡೆಸಲಾಗಿತ್ತೇ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹೆಚ್‌ಡಿಕೆ, ನಿಖಿಲ್‌ರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಉಚ್ಚಾಟಿಸಿದ್ದಾರೆ ಎಂಬುದು ಸುಳ್ಳು

ಕೋಟ್ಯಂತರ ರೂಪಾಯಿ ಲಂಚ ಹೊಡೆಯುತ್ತಿದ್ದಾಗಲೆ ಸಿಕ್ಕಿಬಿದ್ದ ಶಾಸಕ ಮಾಡಾಳು ವಿರೂಪಾಕ್ಷಪ್ಪ ಜಾಮೀನು ಮೇಲೆ ಜೈಲಿನಿಂದ ಬಿಡುಗಡೆಯಾದಾಗ ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ನಡೆಸಿದ್ದ ರಾಜ್ಯ ಬಿಜೆಪಿ ನಾಯಕರು ಈಗ ಯಾವುದೋ ಖಾಸಗಿ ಗುತ್ತಿಗೆದಾರನ ಮನೆಯಲ್ಲಿ ಸಿಕ್ಕ ಹಣಕ್ಕಾಗಿ ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ಈ ನೈತಿಕತೆ ಬಿಜೆಪಿಗೆ ಇದೆಯೇ?” ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿನ ಭ್ರಷ್ಟಾಚಾರದ ಇತಿಹಾಸವನ್ನು ತಿರುವಿಹಾಕಿದರೆ ಪುಟಪುಟಗಳಲ್ಲಿಯೂ ಬಿಜೆಪಿ ನಾಯಕರ ಮುಖಾರವಿಂದಗಳನ್ನು ಕಾಣಬಹುದಾಗಿದೆ. ಮಾಜಿ ಮುಖ್ಯಮಂತ್ರಿಗಳಾಧ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕೃಷ್ಣಯ್ಯ ಶೆಟ್ಟಿ, ಮಾಜಿ ಶಾಸಕ ಸಂಪಂಗಿಯಿಂದ ಹಿಡಿದು ಇತ್ತೀಚಿನ ಮಾಡಾಳು ವಿರೂಪಾಕ್ಷಪ್ಪನವರ ವರೆಗೆ ರಾಜ್ಯ ಬಿಜೆಪಿ ನಾಯಕರೆಲ್ಲರೂ ಭ‍್ರಷ್ಟಾಚಾರದ ಆರೋಪದಲ್ಲಿ ಜೈಲು ಸೇರಿದವರಾಗಿದ್ದಾರೆ. ಇವರು ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ, ನಗೆಪಾಟಲಿಗೀಡಾಗಿದ್ದಾರೆ” ಎಂದು ಕಿಚಾಯಿಸಿದ್ದಾರೆ.

”ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮುನಿರತ್ನ, ಡಾ.ಸುಧಾಕರ್ ಮತ್ತು ಬಿ.ಸಿ.ಪಾಟೀಲ್ ಮೇಲೆ 40% ಕಮಿಷನ್ ಆರೋಪ ಇದೆ. ಬಿಟ್ ಕಾಯಿನ್ ಹಗರಣದದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರು ಕೇಳಿಬಂದಿದೆ. ಪಿಎಸ್ ಐ ನೇಮಕಾತಿ ಹಗರಣದಲ್ಲಿ ಡಾ.ಅಶ್ವತನಾರಾಯಣ, ಬಿ.ವೈ.ವಿಜಯೇಂದ್ರ ಮತ್ತು ಆರಗ ಜ್ಞಾನೇಂದ್ರ ಷಾಮೀಲಾಗಿರುವ ಆರೋಪ ಎದುರಿಸುತ್ತಿದ್ದಾರೆ. ಚುನಾವಣಾ ಟಿಕೆಟ್ ವಂಚನೆ ಪ್ರಕರಣದಲ್ಲಿ ಬಿ.ಎಲ್.ಸಂತೋಷ್, ಸುನೀಲ್ ಕುಮಾರ್ ಕಾರ್ಕಳ ಮತ್ತು ಸಿ.ಟಿ.ರವಿ ಅವರ ಹೆಸರುಗಳನ್ನು ಆರೋಪಿಗಳೇ ಉಲ್ಲೇಖಿಸಿದ್ದಾರೆ. ಇವರೆಲ್ಲರೂ ಸೇರಿ ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ” ಎಂದಿದ್ದಾರೆ.

”ಗುತ್ತಿಗೆದಾರರೊಬ್ಬರನ್ನು ಹಣಕ್ಕಾಗಿ ಪೀಡಿಸಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ಮತ್ತು ಭ್ರಷ್ಟಾಚಾರದ ಆರೋಪದ ಮೇಲೆಯೇ ಜೈಲಿಗೆ ಹೋಗಿ ಬಂದಿರುವ ಬಿ.ಎಸ್.ಯಡಿಯೂರಪ್ಪನವರು ಮತ್ತು ಅವರ ಮಗ ಕೂಡಾ ಸತ್ಯಹರಿಶ್ಚಂದ್ರನಂತೆ ಮಾತನಾಡುತ್ತಿರುವುದು ತಮಾಷೆಯಾಗಿ ಕಾಣುತ್ತಿದೆ” ಎಂದು ಟೀಕೆ ಮಾಡಿದ್ದಾರೆ.

”ಕಾರ್ಪೊರೆಟ್‌ ಭ್ರಷ್ಟಾಚಾರದ ಮೂಲಕ ಲಕ್ಷಾಂತರ ಕೋಟಿ ರೂಪಾಯಿ ಲೂಟಿ ಹೊಡೆದು ದೇಶವನ್ನೇ ಅದಾನಿ ಕೈಗೆ ಒತ್ತೆಯಿಟ್ಟಿರುವ ಈ ಬಿಜೆಪಿಗರು ಇಂದು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ದೊಡ್ಡ ಕುಚೋದ್ಯ! ಅದಾನಿ ಎನ್ನುವ ಉದ್ಯಮಿಯ ಒಂದೊಂದು ಹಗರಣಗಳು ಲಕ್ಷ ಕೋಟಿಗಳನ್ನು ದಾಟುತ್ತಿವೆ! ಸಾವಿರ ಕೋಟಿಗಳ ಅವ್ಯವಹಾರಕ್ಕೆ ಲೆಕ್ಕವೇ ಇಲ್ಲವಾಗಿದೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷ ಕೇಳಿರುವ ನೂರು ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರ ಹೇಳಲು ಬಿಜೆಪಿಯ ನಾಯಕರಿಗೆ, ವಿಶೇಷವಾಗಿ ಮೋದಿಯವರಿಗೆ ಈವರೆಗೆ ಸಾಧ್ಯವಾಗಿಲ್ಲ” ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...