Homeಮುಖಪುಟ’ಮೋದಿ ಸರ್ಕಾರ ಬಡವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ’ -ರಾಹುಲ್ ಗಾಂಧಿ

’ಮೋದಿ ಸರ್ಕಾರ ಬಡವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ’ -ರಾಹುಲ್ ಗಾಂಧಿ

1948 ರಲ್ಲಿ ವಿಶ್ವಸಂಸ್ಥೆಯು ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು (UDHR) ಅಂಗೀಕರಿಸಿದ ನೆನಪಿಗಾಗಿ ಪ್ರತಿವರ್ಷ ಡಿ.10 ರಂದು ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ.

- Advertisement -
- Advertisement -

ಇಂದು ಡಿಸೆಂಬರ್‌ 10 ವಿಶ್ವ ಮಾನವ ಹಕ್ಕುಗಳ ದಿನಾಚರಣೆ. ದೇಶದಾದ್ಯಂತ ಮಾನವ ಹಕ್ಕುಗಳ ಮೇಲೆ ನಡೆದ ದೌರ್ಜನ್ಯದ ಚಿತ್ರಗಳನ್ನು ಹಂಚಿಕೊಂಡು ಜನ ಸಾಮಾಜಿಕ ಜಾಲತಾಣಗಳಲ್ಲಿ ಹಕ್ಕುಗಳ ರಕ್ಷಣೆ ಬಗ್ಗೆ ಗಮನ ಸೆಳೆಯುತ್ತಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಗಮನದಲ್ಲಿರಿಸಿಕೊಂಡು ಟ್ವೀಟ್ ಮಾಡಿದ್ದಾರೆ.

ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು 15ನೇ ದಿನಕ್ಕೆ ಕಾಲಿಟ್ಟಿದೆ. ಇದರ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನರೇಂದ್ರ ಮೋದಿ ಸರ್ಕಾರ ಬಡವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಮದುವೆಯಲ್ಲಿ ಗಿಫ್ಟ್ ಬದಲು ಹೋರಾಟ ನಿರತ ರೈತರಿಗಾಗಿ ದೇಣಿಗೆ ಸಂಗ್ರಹಿಸಿದ ಕುಟುಂಬ!

‘ಇದು ಮಾನವೀಯತೆಯ ವಿರುದ್ಧದ ಅಪರಾಧ.  ದೇಶದ ಉತ್ತಮ ಭವಿಷ್ಯಕ್ಕಾಗಿ, ನಾವು ಎಲ್ಲಾ ವರ್ಗದ ಜನರ ಹಕ್ಕುಗಳನ್ನು ಗೌರವಿಸಬೇಕಾಗಿದೆ’ ಎಂದು #HumanRightsDay ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಜೊತೆಗೆ, ಪತ್ರಿಕೆಯ ವರದಿಯೊಂದನ್ನು ಹಂಚಿಕೊಂಡಿದ್ದಾರೆ. ವರದಿಯಲ್ಲಿ ಕೇಂದ್ರ ಸರ್ಕಾರ ಕೊರೊನಾ ಸಂದರ್ಭದಲ್ಲಿ ಏಕಾಏಕಿ ಹೇಳಿದ ಲಾಕ್‌ಡೌನ್‌ನಿಂದಾಗಿ ಜನ ಆಹಾರಕ್ಕಾಗಿ ಸಾಲ ಪಡೆಯಬೇಕಾಗಿದರ ಕುರಿತ ವರದಿಯಿದೆ.

ಇದರಿಂದ ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ಆಹಾರದ ಸಂಪೂರ್ಣ ಖರೀದಿ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ. ಇದು ದೇಶದ ಹಸಿವಿನ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ವರದಿ ಮಾಹಿತಿ ಬಿಚ್ಚಿಡುತ್ತದೆ.

ಲಾಕ್ ಡೌನ್ ಸಮಯದಲ್ಲಿ ದೇಶದ 11 ರಾಜ್ಯಗಳಲ್ಲಿ ಸುಮಾರು 45 ಪ್ರತಿಶತದಷ್ಟು ಜನರು ಆಹಾರಕ್ಕಾಗಿ ಸಾಲ ತೆಗೆದುಕೊಳ್ಳಬೇಕಾಗಿತ್ತು ಎಂದು ಹಂಗರ್ ವಾಚ್‌ನ ಹೊಸ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಇದೇ ವರದಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್ ಬೆಲೆ ಏರಿಕೆ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ – ಬಿಜೆಪಿ ಮುಖಂಡ

1948 ರಲ್ಲಿ ವಿಶ್ವಸಂಸ್ಥೆಯು ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು (UDHR) ಅಂಗೀಕರಿಸಿದ ನೆನಪಿಗಾಗಿ ಪ್ರತಿವರ್ಷ ಡಿಸೆಂಬರ್ 10 ರಂದು ಮಾನವ ಹಕ್ಕುಗಳ ದಿನವನ್ನಾಗಿ ಆಚರಿಸಲಾಗುತ್ತದೆ.

Human Rights Day 2020 human rights day history significance and theme - NewsBust.in

ವಿಶ್ವಸಂಸ್ಥೆಯ ಪ್ರಕಾರ, ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯು ಜನಾಂಗ, ಬಣ್ಣ, ಧರ್ಮ, ಲಿಂಗ, ಭಾಷೆ, ರಾಜಕೀಯ ಅಥವಾ ಇತರ ಅಭಿಪ್ರಾಯ, ಜನನ ರಾಷ್ಟ್ರೀಯತೆ ಅಥವಾ ಸಾಮಾಜಿಕ ಮೂಲ, ಆಸ್ತಿಯನ್ನು ಲೆಕ್ಕಿಸದೆ ಪ್ರತಿಯೊಬ್ಬ ಮನುಷ್ಯನಿಗೆ ಅರ್ಹವಾದ ಹಕ್ಕುಗಳನ್ನು ಘೋಷಿಸುವ ಒಂದು ದಾಖಲೆಯಾಗಿದೆ. ಇದು 500 ಕ್ಕೂ ಹೆಚ್ಚು ಭಾಷೆಗಳಲ್ಲಿ ಲಭ್ಯವಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಶ್ವದಲ್ಲಿ ನಡೆದ ಜಾತಿ, ಧರ್ಮ, ಮಹಿಳೆ, ದೇಶಗಳ ಆಧಾರದಲ್ಲಿ ಅನೇಕ ದೌರ್ಜನ್ಯಗಳು ನಡೆದಿದ್ದು, ಅವುಗಳ ಚಿತ್ರಣವನ್ನು ನೆನಪಿಸುತ್ತಾ ಹಲವು ಮಂದಿ ಪೋಸ್ಟ್‌ಗಳನ್ನು ಶೇರ್‌ ಮಾಡುತ್ತಿದ್ದಾರೆ. ಈ ಮೂಲಕ ಇನ್ನಾದರೂ ಮಾನವ ಹಕ್ಕುಗಳನ್ನು ರಕ್ಷಿಸಿ ಎಂದು ಮನವಿ ಮಾಡುತ್ತಿದ್ದಾರೆ.


ಇದನ್ನೂ ಓದಿ: ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...