Homeಕರ್ನಾಟಕ''ಗೇಮ್ ಚೇಂಜರ್ಸ್'' ಎಂದು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ "ನೇಮ್ ಚೇಂಜರ್ಸ್" ಆಗಿದೆ: ಪ್ರಿಯಾಂಕ್...

”ಗೇಮ್ ಚೇಂಜರ್ಸ್” ಎಂದು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ “ನೇಮ್ ಚೇಂಜರ್ಸ್” ಆಗಿದೆ: ಪ್ರಿಯಾಂಕ್ ಖರ್ಗೆ

- Advertisement -
- Advertisement -

ಕೇಂದ್ರ ಬಿಜೆಪಿ ಸರ್ಕಾರ ದೇಶದ ಹೆಸರನ್ನು ಅಧಿಕೃತವಾಗಿ ಬದಲಾವಣೆ ಮಾಡಲು ಹೊಟಿರುವುದನ್ನು ವಿಪಕ್ಷಗಳು ಟೀಕಿಸುತ್ತಿದ್ದು, ಇದೀಗ ಗ್ರಾಮೀಣ ಅಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಟೀಕೆ ಮಾಡಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ”ಗೇಮ್ ಚೇಂಜರ್ಸ್” ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ “ನೇಮ್ ಚೇಂಜರ್ಸ್” ಆಗಿದೆ ಎಂದು ಹೇಳಿದ್ದಾರೆ.

”2014ರ ಮೊದಲು ಅಮೇರಿಕಾ, ಬ್ರಿಟನ್, ರಷ್ಯಾಗಳಂತಹ ಮುಂದುವರೆದ ದೇಶಗಳೊಂದಿಗೆ ಭಾರತದ ಸ್ಪರ್ಧೆ ಇತ್ತು. ಈಗ ಗುಜರಾತ್ ಮಾಡೆಲ್, ಯುಪಿ ಮಾಡೆಲ್ ಹೆಸರಲ್ಲಿ ಜಾತಿ ಜನಾಂಗಗಳ ನಡುವೆ ದ್ವೇಷ ಬಿತ್ತಿ “ಮಣಿಪುರ್ ಮಾಡೆಲ್” ಸೃಷ್ಟಿಸಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

”ಯಕಶ್ಚಿತ್ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾಗಳೊಂದಿಗೆ ಭಾರತವನ್ನು ತುಲನೆ ಮಾಡಿಕೊಂಡು ಬೆನ್ನುತಟ್ಟಿಕೊಳ್ಳುವ ಪರಿಸ್ಥಿತಿಗೆ ತಂದಿಟ್ಟಿರುವ ಬಿಜೆಪಿಯಿಂದ ಹೆಸರುಗಳ ಬದಲಾವಣೆಗಳನ್ನಲ್ಲದೆ ಬೇರೆ ಇನ್ನೇನು ನಿರೀಕ್ಷಿಸಲು ಸಾಧ್ಯ? ಸಮರ್ಥ ಆಡಳಿತಗಾರರು ಭಾರತದಲ್ಲಿ ಬದಲಾವಣೆ ತರುತ್ತಾರೆಯೇ ಹೊರತು ಭಾರತದ ಹೆಸರಿನ ಬದಲಾವಣೆಯನ್ನಲ್ಲ” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...