Homeಮುಖಪುಟಮೋದಿ ಆಡಳಿತದಲ್ಲಿ ಆರ್ಥಿಕ ಅಭಿವೃದ್ಧಿ 20 ವರ್ಷ ಹಿಂದಕ್ಕೆ ತಳ್ಳಲ್ಪಟ್ಟಿದೆ: ಕಾಂಗ್ರೆಸ್‌

ಮೋದಿ ಆಡಳಿತದಲ್ಲಿ ಆರ್ಥಿಕ ಅಭಿವೃದ್ಧಿ 20 ವರ್ಷ ಹಿಂದಕ್ಕೆ ತಳ್ಳಲ್ಪಟ್ಟಿದೆ: ಕಾಂಗ್ರೆಸ್‌

- Advertisement -
- Advertisement -

ಆರ್ಥಿಕ ಬೆಳವಣಿಗೆ ಎಂದರೆ ಕೃಷಿ, ಕೈಗಾರಿಕೆಗಳಲ್ಲಿ ಉದ್ಯೋಗವನ್ನು ಹೆಚ್ಚಿಸುವುದು, ಈ ದಿಸೆಯಲ್ಲಿ ಮನಮೋಹನ್ ಸಿಂಗ್ ಅವರ ಪ್ರಧಾನಿಯಾಗಿ ಸಾಧಿಸಿದ ಪ್ರಗತಿಯನ್ನು ನರೇಂದ್ರ ಮೋದಿ ಸರ್ಕಾರ ಹಿಮ್ಮುಖಗೊಳಿಸಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿಯನ್ನು ನಡೆಸಿದ್ದು, ಮೋದಿ ಸರಕಾರದ ” ಅಸಮರ್ಪಕ ನಿರ್ವಹಣೆಯು” ಆರ್ಥಿಕ ಅಭಿವೃದ್ಧಿಯನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದೆ ಎಂದು ಕಾಂಗ್ರೆಸ್‌ ಪಕ್ಷ ಆರೋಪಿಸಿದೆ.

ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿದ್ದು, 2004-05 ಮತ್ತು 2017-18 ರ ನಡುವೆ ಭಾರತದಲ್ಲಿ ಕೃಷಿ ಕಾರ್ಮಿಕರ ಸಂಖ್ಯೆ 6.7 ಕೋಟಿ ಕಡಿಮೆಯಾಗಿದೆ, ಏಕೆಂದರೆ ಕಾರ್ಮಿಕರು ಕಡಿಮೆ-ವೇತನದ ಕೃಷಿಯನ್ನು ತೊರೆದು ಉತ್ಪಾದನೆ ಮತ್ತು ಸೇವೆಗಳಲ್ಲಿ ಹೆಚ್ಚಿನ ವೇತನದ ಉದ್ಯೋಗಗಳನ್ನು ಹುಡುಕುತ್ತಾರೆ. ಇದು ಐತಿಹಾಸಿಕ ಸಾಧನೆಯಾಗಿದೆ, ಮಧ್ಯಮ ಆದಾಯದ ದೇಶಕ್ಕೆ ಭಾರತದ ಆರ್ಥಿಕ ಪರಿವರ್ತನೆಯಲ್ಲಿ ಪ್ರಮುಖ ಹೆಗ್ಗುರುತಾಗಿದೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಡಾ.ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಯಾಗಿ ಸಾಧಿಸಿದ ಎಲ್ಲಾ ಪ್ರಗತಿಯು ಮೋದಿಯವರ ಅನ್ಯಾಯ ಕಾಲದ ಮೂರು ವರ್ಷಗಳಲ್ಲಿ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ. 2018-19 ರಿಂದ ಕೃಷಿ ಕಾರ್ಮಿಕರ ಸಂಖ್ಯೆ 6 ಕೋಟಿಗಳಷ್ಟು ಹೆಚ್ಚಾಗಿದೆ ಎಂದು ಜೈರಾಮ್‌ ರಮೇಶ್ ಹೇಳಿದ್ದಾರೆ.

ಹಿಂದಿನ ಯುಪಿಎ ಸರ್ಕಾರದ 10 ವರ್ಷಗಳ ಅಧಿಕಾರದ ವಿರುದ್ಧ ಕೇಂದ್ರ ಸರ್ಕಾರ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ‘ಶ್ವೇತಪತ್ರ’ ಮಂಡಿಸಲು ಮುಂದಾಗಿತ್ತು. ಇದರ ಬೆನ್ನಲ್ಲಿ ಕಾಂಗ್ರೆಸ್‌ ಕಳೆದ 10 ವರ್ಷಗಳಲ್ಲಿನ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಅನ್ಯಾಯಗಳನ್ನು ಎತ್ತಿ ತೋರಿಸುವ ನರೇಂದ್ರ ಮೋದಿ ಸರಕಾರದ ವೈಫಲ್ಯಗಳ ಕುರಿತ ಕಪ್ಪು ಪತ್ರವನ್ನು ಬಿಡುಗಡೆ ಮಾಡಿತ್ತು.

ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಪ್ಪು  ಪತ್ರವನ್ನು ಬಿಡುಗಡೆ ಮಾಡಿದ್ದಾರೆ. “10 ಸಾಲ್‌ ಅನ್ಯಾಯ್‌ ಕಾಲ್” (10 ವರ್ಷ ಅನ್ಯಾಯದ ಕಾಲ) ಎಂಬ ಶೀರ್ಷಿಕೆಯ ಈ ಕಪ್ಪು ಪತ್ರವು 54 ಪುಟಗಳ ದಾಖಲೆಯನ್ನು ಹೊಂದಿದೆ. ಮೋದಿ ಸರ್ಕಾರವು ತನ್ನ 10 ವರ್ಷಗಳ ಅಧಿಕಾರದಲ್ಲಿ ದೇಶದ ಆರ್ಥಿಕತೆಯನ್ನು ನಾಶಪಡಿಸಿದೆ, ನಿರುದ್ಯೋಗ ಉಲ್ಭಣಕ್ಕೆ ಕಾರಣವಾಗಿದೆ, ದೇಶದ ಕೃಷಿ ಕ್ಷೇತ್ರವನ್ನು ನಾಶಪಡಿಸಿದೆ, ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕುಮ್ಮಕ್ಕು ನೀಡಿದೆ ಮತ್ತು ದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಘೋರ ಅನ್ಯಾಯವನ್ನು ಮಾಡಿದೆ ಎಂದು ಹೇಳಿತ್ತು.

ಭಾರತವನ್ನು ಸಮೃದ್ಧಿಯ ಹಾದಿಯಲ್ಲಿ ಕೊಂಡೊಯ್ಯುವ ಬದಲು, ಪ್ರಧಾನಿಯವರ ಪ್ರಮಾದ ಮತ್ತು ದುರಾಡಳಿತವು ನಮ್ಮ ಆರ್ಥಿಕ ಪರಿವರ್ತನೆಯನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದೆ ಎಂದು ರಮೇಶ್ ಆರೋಪಿಸಿದರು. ಮೋದಿ ಸರಕಾರ ಆರ್ಥಿಕತೆಯನ್ನು ನಿಭಾಯಿಸುವ ರೀತಿಯ ಬಗ್ಗೆ ಕಾಂಗ್ರೆಸ್‌ ನಿರಂತವಾಗಿ ವಾಗ್ಧಾಳಿಯನ್ನು ನಡೆಸುತ್ತಿದೆ, ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಬೆಲೆ ಏರಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದೆ.

ಇದನ್ನು ಓದಿ: ‘ಮಜ್ದೂರ್ ಪೈದಲ್ ಜೋಡೋ ಯಾತ್ರೆ’: ಭೂರಹಿತ ದಲಿತ ಕಾರ್ಮಿಕರಿಂದ ಹಕ್ಕಿಗಾಗಿ ಹೋರಾಟ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...