Homeರಾಜಕೀಯಮೋದಿ 8 ವರ್ಷಗಳ ಅಧಿಕಾರಾವಧಿಯಲ್ಲಿ ವಿಫಲರಾಗಿದ್ದಾರೆ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

ಮೋದಿ 8 ವರ್ಷಗಳ ಅಧಿಕಾರಾವಧಿಯಲ್ಲಿ ವಿಫಲರಾಗಿದ್ದಾರೆ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

- Advertisement -
- Advertisement -

ಬಿಜೆಪಿಯ ಹಿರಿಯ ನಾಯಕ, ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಮೋದಿ ಸರ್ಕಾರವನ್ನು ಮತ್ತೇ ಟೀಕಿಸಿದ್ದಾರೆ. 8 ವರ್ಷಗಳ ಅಧಿಕಾರಾವಧಿಯಲ್ಲಿ ಪ್ರಧಾನಿ ಮೋದಿ ಆರ್ಥಿಕ ಬೆಳವಣಿಗೆಯ ಗುರಿಗಳನ್ನು ಸಾಧಿಸಲು ವಿಫಲರಾಗಿದ್ದಾರೆ ಎಂದು ಅವರು ಮಂಗಳವಾರ ಹೇಳಿದ್ದಾರೆ.

ಸುಬ್ರಮಣಿಯನ್ ಸ್ವಾಮಿ ಅವರು ಮೋದಿ ಸರ್ಕಾರದ ವಿರುದ್ದ ನಿರಂತರವಾಗಿ ವಾಗ್ದಾಳಿ ನಡೆಸುತ್ತಲೆ ಬಂದಿದ್ದಾರೆ. ನಿನ್ನೆ ಟ್ವೀಟ್‌ ಮಾಡಿರುವ ಅವರು, “8 ವರ್ಷಗಳ ಅಧಿಕಾರಾವಧಿಯಲ್ಲಿ ಮೋದಿ ಆರ್ಥಿಕ ಬೆಳವಣಿಗೆಯ ಗುರಿಗಳನ್ನು ಸಾಧಿಸಲು ವಿಫಲರಾಗಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, 2016 ರಿಂದ ವಾರ್ಷಿಕವಾಗಿ ಬೆಳವಣಿಗೆಯ ದರವು ಕುಸಿಯುತ್ತಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಷ್ಟ್ರೀಯ ಭದ್ರತೆಯು ತೀವ್ರವಾಗಿ ದುರ್ಬಲಗೊಂಡಿದೆ. ಚೀನಾದ ಬಗ್ಗೆ ಮೋದಿಗೆ ಯಾವುದೇ ಅರಿವು ಇಲ್ಲ. ಚೇತರಿಸಿಕೊಳ್ಳಲು ಅವಕಾಶವಿದೆ ಆದರೆ ಅದು ಹೇಗೆ ಎಂದು ಅವರಿಗೆ ತಿಳಿದಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ ಗಂಟೆಗಳಲ್ಲಿ ಹೇಳಿಕೆ…

ಅವರ ಈ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ವ್ಯಕ್ತಿಯೊಬ್ಬರು, ಪ್ರಧಾನಿ ಮೋದಿಗೆ ನಿಮ್ಮ ಸಲಹೆ ಏನು ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ಸುಬ್ರಮಣಿಯನ್ ಸ್ವಾಮಿ, “ನಮ್ಮ ಪ್ರಾಚೀನ ಕಾಲದ ಋಷಿಗಳು, ‘ಜ್ಞಾನವನ್ನು ಪಡೆಯಲು ಶ್ರದ್ಧೆ ಇರುವವರಿಗೆ ಅದನ್ನು ನೀಡಬೇಕು’ ಎಂದು ಸಲಹೆ ನೀಡಿದ್ದಾರೆ” ಎಂದು ವ್ಯಂಗ್ಯವಾಗಡಿದ್ದಾರೆ.

ಮತ್ತೊಬ್ಬ ಟ್ವಿಟರ್‌ ಬಳಕೆದಾರ, “ಆರ್ಥಿಕತೆಯ ಬಗ್ಗೆ ನಿಮ್ಮ ಜ್ಞಾನಕ್ಕೆ ಸಾಟಿಯಿಲ್ಲ ಮತ್ತು ಯಾವುದೇ ಸಂದೇಹವಿಲ್ಲ. ಪ್ರಸ್ತುತ ಸನ್ನಿವೇಶ ಮುಂದುವರಿದರೆ 5 ವರ್ಷಗಳ ನಂತರ ಆರ್ಥಿಕವಾಗಿ ಭಾರತವನ್ನು ಎಲ್ಲಿ ನೋಡುತ್ತೀರಿ?” ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಅವರು, “ಭಾರತದ ಆರ್ಥಿಕ ನೀತಿಯಲ್ಲಿ ಇನ್ನೂ ಐದು ವರ್ಷ ಅದೇ ಜಡತ್ವವನ್ನು ಬಯಸಬೇಡಿ. ಊಹಿಸಲು ತುಂಬಾ ದುಃಖವಾಗುತ್ತದೆ. ನಿಜವಾದ ಇಂಟಲಿಜೆಂಟ್‌‌ ನೀತಿಯನ್ನು ಅಳವಡಿಸಿಕೊಳ್ಳಲಾಗುವುದು ಮತ್ತು ನಾವು ದೇಶವನ್ನು ಪ್ರಪಾತದಿಂದ ರಕ್ಷಿಸುತ್ತೇವೆ ಎಂದು ನಾವು ಭಾವಿಸೋಣ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂತೂ ಇಂತೂಅವರದೇ ಪಕ್ಷದವರಿಗೆ ಮೋದಿಯ ಬಗ್ಗೆ ಗೊತ್ತಗ್ತಾ ಇದೆಯಲ್ಲಾ…..ಇನ್ನು ಭಾರತದ ಪ್ರಜೆಗಳಿಗೆ ಯಾವಾಗ ಅರ್ಥ ಆಗುತ್ತೋ ಏನೋ…

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...