Homeಮುಖಪುಟ''ಮೋದಿ ಹಠಾವೋ, ದೇಶ್ ಬಚಾವೋ'' ಪೋಸ್ಟರ್‌ ಬೆನ್ನಲ್ಲೇ ಬಿಜೆಪಿಯಿಂದ ಕೇಜ್ರಿವಾಲ್‌ಗೆ ಕೌಂಟರ್ ಪೋಸ್ಟರ್

”ಮೋದಿ ಹಠಾವೋ, ದೇಶ್ ಬಚಾವೋ” ಪೋಸ್ಟರ್‌ ಬೆನ್ನಲ್ಲೇ ಬಿಜೆಪಿಯಿಂದ ಕೇಜ್ರಿವಾಲ್‌ಗೆ ಕೌಂಟರ್ ಪೋಸ್ಟರ್

- Advertisement -
- Advertisement -

“ಮೋದಿ ಹಠಾವೋ, ದೇಶ್ ಬಚಾವೋ (ಮೋದಿಯನ್ನು ತೊಲಗಿಸಿ, ದೇಶವನ್ನು ಉಳಿಸಿ)” ಎಂಬ ಘೋಷಣೆಯ ಪೋಸ್ಟರ್‌ಗಳ ಮೇಲೆ ದೆಹಲಿ ಪೊಲೀಸರು ದಾಳಿ ನಡೆಸಿದ ಎರಡು ದಿನಗಳ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಪದಚ್ಯುತಗೊಳಿಸಲು ಕರೆ ನೀಡುವ ಪೋಸ್ಟರ್‌ಗಳು ಇಂದು ಬೆಳಿಗ್ಗೆ ದೆಹಲಿಯಲ್ಲಿ ಕಾಣಿಸಿಕೊಂಡವೆ. ಇದು ಬಿಜೆಪಿ-ಎಎಪಿ ನಡುವಿನ ಪೋಸ್ಟರ್‌ ವಾರ್‌ಗೆ ಸಾಕ್ಷಿಯಾಗಿದೆ.

ದೆಹಲಿ ಪೊಲೀಸರು ಮೋದಿ ವಿರೋಧಿ ಪೋಸ್ಟರ್‌ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿ, ”ಮೋದಿ ಹಠಾವೋ, ದೇಶ್ ಬಚಾವೋ (ಮೋದಿಯನ್ನು ತೊಲಗಿಸಿ, ದೇಶವನ್ನು ಉಳಿಸಿ)” ಎಂಬ ಘೋಷಣೆಯುಳ್ಳ ಸಾವಿರಾರು ಪೋಸ್ಟರ್‌ಗಳನ್ನು ವಶಕ್ಕೆ ಪಡಿಸಿಕೊಂಡರು. ಈ ಪೋಸ್ಟರ್‌ಗಳನ್ನು ಆಪ್ ಕಚೇರಿಗೆ ಸಾಗಿಸಲಾಗುತ್ತಿತ್ತು ಎಂದು ವಾಹನ ಚಾಲಕ ಹೇಳಿದ್ದಾನೆ. ಈ ಘಟನೆಯ ನಂತರ ಪ್ರಿಂಟಿಂಗ್ ಪ್ರೆಸ್‌ನ ಇಬ್ಬರು ಮಾಲೀಕರು ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ ಮತ್ತು ನೂರಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ.

ಇದೀಗ ಬಿಜೆಪಿಯು ಎಎಪಿ ವಿರುದ್ಧ ಪೋಸ್ಟರ್ ವಾರ್‌ಗೆ ಮುಂದಾಗಿದ್ದು, ”ಕೇಜ್ರಿವಾಲ್ ಅಪ್ರಾಮಾಣಿಕ, ಭ್ರಷ್ಟ ಸರ್ವಾಧಿಕಾರಿ”, ”ಅರವಿಂದ್ ಕೇಜ್ರಿವಾಲ್ ಅವರನ್ನು ತೆಗೆದುಹಾಕಿ, ದೆಹಲಿಯನ್ನು ಉಳಿಸಿ” ಎಂಬ ಘೋಷಣೆಯನ್ನು ಹೊಂದಿರುವ ಪೋಸ್ಟರ್‌ಗಳನ್ನು ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಹಾಕಿಸಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ”ತಮ್ಮನ್ನು ಪದಚ್ಯುತಗೊಳಿಸುವಂತೆ ಹೇಳಲಾದ ಪೋಸ್ಟರ್‌ಗಳನ್ನು ನೋಡಿದ್ದೇನೆ ಮತ್ತು ಪ್ರಜಾಪ್ರಭುತ್ವದಲ್ಲಿ ಅಂತಹ ಪೋಸ್ಟರ್‌ಗಳನ್ನು ಅಂಟಿಸಲು ಎಲ್ಲರಿಗೂ ಹಕ್ಕಿದೆ” ಎಂದು ಹೇಳಿದ್ದಾರೆ.

”ಇಂತಹ ಪೋಸ್ಟರ್‌ಗಳಿಂದ ನನಗೆ ಯಾವುದೇ ತೊಂದರೆ ಇಲ್ಲ. ಆದರೆ ನಿನ್ನೆ ಪ್ರಿಂಟಿಂಗ್ ಪ್ರೆಸ್ ಮಾಲೀಕ ಮತ್ತು ಪೋಸ್ಟರ್ ಅಂಟಿಸುತ್ತಿದ್ದ ಆರು ಬಡವರನ್ನು ಏಕೆ ಬಂಧಿಸಲಾಯಿತು ಎಂದು ನನಗೆ ಅರ್ಥವಾಗುತ್ತಿಲ್ಲ. ಇಂತಹ ಪೋಸ್ಟರ್‌ಗಳಿಗೆ ಪ್ರಧಾನಿ ಹೆದರುತ್ತಿದ್ದಾರೆ ಎಂದು ತೋರಿಸುತ್ತದೆ. ನಾಲ್ಕು ಜನ ಬಂದು ಹೀಗೆ ಪೋಸ್ಟರ್ ಅಂಟಿಸಿದರೆ ಏನು ವ್ಯತ್ಯಾಸವಾಗುತ್ತದೆ? ಜನರು ಅಂತಹ ಪೋಸ್ಟರ್‌ಗಳನ್ನು ಅಂಟಿಸುತ್ತಾರಾ? ಅಂತಹ ಶಕ್ತಿಶಾಲಿ ಪ್ರಧಾನಿ ಇದನ್ನು ನಿಭಾಯಿಸುವುದು ಚೆನ್ನಾಗಿ ಕಾಣುತ್ತಿಲ್ಲ” ಎಂದು ಕೇಜ್ರಿವಾಲ್ ಪ್ರಧಾನಿ ಮೋದಿಯವರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಟೀಕಿಸುವ ಪೋಸ್ಟರ್ ವಿಚಾರ: ದೆಹಲಿಯಲ್ಲಿ 100 ಎಫ್‌ಐಆರ್‌ ದಾಖಲು, 6 ಜನರ ಬಂಧನ

ಹೊಸ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನದ ನಂತರ ಬಿಜೆಪಿ-ಎಎಪಿ ವಾರ್ ಮತ್ತಷ್ಟು ತೀವ್ರಗೊಂಡಿದೆ. ಅದರ ಭಾಗವಾಗಿ ಎರಡೂ ಪಕ್ಷದವರು ಈಗ ಪೋಸ್ಟರ್‌ಗಳನ್ನು ಅಂಟಿಸುತ್ತಿದ್ದಾರೆ.

”ದಾಖಲಾದ 138 ಪ್ರಕರಣಗಳಲ್ಲಿ 36 ಪ್ರಕರಣಗಳು ಪ್ರಧಾನಿ ಮೋದಿ ವಿರೋಧಿ ಪೋಸ್ಟರ್‌ಗಳಿಗಾಗಿ ದಾಖಲಾಗಿವೆ. ಸಾರ್ವಜನಿಕ ಆಸ್ತಿಯನ್ನು ವಿರೂಪಗೊಳಿಸಿದ್ದಕ್ಕಾಗಿ ಕೆಲವರನ್ನು ಬಂಧಿಸಲಾಗಿದೆ ಮತ್ತು ಪೋಸ್ಟರ್‌ಗಳು ಪ್ರಿಂಟಿಂಗ್ ಪ್ರೆಸ್‌ನ ಹೆಸರನ್ನು ಕಾನೂನಿನಡಿಯಲ್ಲಿ ಹೊಂದಿರಬೇಕು ಹಾಗಾಗಿ ಪ್ರಿಂಟಿಂಗ್‌ಪ್ರೆಸ್ ಮಾಲೀಕರನ್ನು ಬಂಧಿಸಲಾಗಿದೆ” ಎಂದು ಪೊಲೀಸರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಪೊಲೀಸರ ಈ ಸಮರ್ಥನೆಯನ್ನು  ಕೇಜ್ರಿವಾಲ್ ಅವರು ತಿರಸ್ಕರಿಸಿದ್ದು, ಪ್ರಧಾನಿ “ಹೆದರಿದ್ದಾರೆ” ಎಂದು ಹೇಳಿದರು.

”ಪೋಸ್ಟರ್‌ಗಳ ಮೇಲೆ ಎಫ್‌ಐಆರ್ ದಾಖಲಾಗಿದೆ. ಯಾರಾದರೂ ಈ ಪೋಸ್ಟರ್‌ಗಳನ್ನು ನಗರದ ತುಂಬೆಲ್ಲಾ ಅಂಟಿಸಬಹುದು ಎನ್ನುವ ಭಯದಿಂದ ಮೋದಿಜಿ ಈ ಕ್ರಮಕ್ಕೆ ಮುಂದಾಗಿದ್ದಾರಾ? ಇವರು ಹೆದರುವ ಪ್ರಧಾನಿ, ಅಸುರಕ್ಷಿತ ಪ್ರಧಾನಿ” ಎಂದು ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...