Homeಮುಖಪುಟ2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಥಾಲ್ತೇಜ್ ಮತ್ತು ವಸ್ತ್ರಾಲ್ ನಡುವಿನ ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಿ, ರೈಲಿನಲ್ಲಿ ಪ್ರಯಾಣಿಸಿದರು. ಆದರೆ 2019ರಲ್ಲಿಯೇ ಈ ಯೋಜನೆಯನ್ನು ಉದ್ಘಾಟಿಸಲಾಗಿತ್ತು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಜನರು ವ್ಯಂಗ್ಯವಾಡುತ್ತಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ 2019ರ ಮಾರ್ಚ್‌ನಲ್ಲಿ ಮೋದಿಯವರು ಅಹಮದಾಬಾದ್‌ ಮೆಟ್ರೋ ಯೋಜನೆಯ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದರು. ಈಗ ಗುಜರಾತ್‌ ವಿಧಾನಸಭಾ ಚುನಾವಣೆಗೂ ಮುನ್ನ ಮತ್ತೊಮ್ಮೆ ಉದ್ಘಾಟಿಸಿದ್ದಾರೆ. 2024ರ ಲೋಕಸಭಾ ಚುನಾವಣೆ ಬಂದಾಗ ಮತ್ತೊಮ್ಮೆ ಚಾಲನೆ ನೀಡಲಿದ್ದಾರೆ ಎಂದು ಟ್ರೋಲ್ ಮಾಡಲಾಗುತ್ತಿದೆ.

ಮೊದಲ ಹಂತದ ಮೆಟ್ರೋ ಯೋಜನೆಯನ್ನು ಎರಡು ಬಾರಿ ಉದ್ಘಾಟನೆ ಮಾಡಿರುವುದು ನಿಜ. ಆದರೆ ಇಲ್ಲೊಂದು ಸಣ್ಣ ವ್ಯತ್ಯಾಸವನ್ನು ಗುರುತಿಸಬಹುದು.

2022, ಸೆಪ್ಟೆಂಬರ್‌ 30ರ ಸುದ್ದಿ

ಮೆಟ್ರೋ ಯೋಜನೆಯ ಪೂರ್ವ-ಪಶ್ಚಿಮ ಕಾರಿಡಾರ್‌ನ ಕಲುಪುರ ನಿಲ್ದಾಣದಲ್ಲಿ ಶುಕ್ರವಾರ ನರೇಂದ್ರ ಮೋದಿಯವರು ಯೋಜನೆಗೆ ಚಾಲನೆ ನೀಡಿದರು. ಗಾಂಧಿನಗರ ರೈಲು ನಿಲ್ದಾಣದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಆಗಮಿಸಿದ ಅವರು, ಕಲುಪುರ ನಿಲ್ದಾಣದಲ್ಲಿ ಮೆಟ್ರೋ ರೈಲಿಗೆ ಪ್ರಧಾನಿ ಚಾಲನೆ ನೀಡಿದರು.

ನಂತರ ಅಲ್ಲಿಯೇ ರೈಲು ಹತ್ತಿ ತಲ್ತೇಜ್ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದರು. ಪ್ರಯಾಣದ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಪಕ್ಷದ ಸಂಸದರಾದ ಸಿ.ಆರ್.ಪಾಟೀಲ್, ಕಿರಿತ್ ಸೋಲಂಕಿ ಜೊತೆಗಿದ್ದರು.

ಈ ಮೂಲಕ 17 ನಿಲ್ದಾಣಗಳ ಥಾಲ್ತೇಜ್ ಮತ್ತು ವಸ್ತ್ರಾಲ್ ನಡುವಿನ ಯೋಜನೆಯ 21-ಕಿಮೀ ಕಾರಿಡಾರ್ ಕಾರ್ಯಾರಂಭ ಮಾಡಿತು. ಈ ಕಾರಿಡಾರ್‌ನಲ್ಲಿ ಸುಮಾರು 6.6 ಕಿಮೀ ಮಾರ್ಗವು ಭೂಮಿಯ ಒಳಗೆ ನಿರ್ಮಾಣವಾಗಿದೆ ಎಂದು ಗುಜರಾತ್ ಮೆಟ್ರೋ ರೈಲು ನಿಗಮ (ಜಿಎಂಆರ್‌ಸಿ) ಪ್ರಕಟಣೆಯಲ್ಲಿ ತಿಳಿಸಿದೆ.

ಮೆಟ್ರೋ ರೈಲು ಟಿಕೆಟ್‌ಗಳ ಬೆಲೆ 5 ರಿಂದ 15 ರೂಪಾಯಿಗಳವರೆಗೆ ಇರುತ್ತದೆ ಎಂದು ಜಿಎಂಆರ್‌ಸಿ ತಿಳಿಸಿದೆ. ಯೋಜನೆಯ ಎರಡನೇ ಹಂತವು ರಾಜ್ಯದ ರಾಜಧಾನಿ ಗಾಂಧಿನಗರ ಹಾಗೂ ಅಹಮದಾಬಾದ್‌ ನಡುವೆ ಸಂಪರ್ಕ ಕಲ್ಪಿಸುತ್ತದೆ. ಇದು ಮೂಲಭೂತವಾಗಿ ಮೊದಲ ಹಂತದ ವಿಸ್ತರಣೆ ಎಂದು ಹೇಳಲಾಗುತ್ತಿದೆ.

ಮಾರ್ಚ್ 4, 2019ರಲ್ಲಿ ಉದ್ಘಾಟನೆಯಾಗಿದ್ದೆಷ್ಟು?

ಮಾರ್ಚ್ 4, 2019ರಂದು ಪ್ರಧಾನಿ ನರೇಂದ್ರ ಮೋದಿಯವರು 6.5 ಕಿಮೀಯಷ್ಟು ಮಾರ್ಗವನ್ನು ಮಾತ್ರ ಉದ್ಘಾಟಿಸಿದ್ದರು. ವಸ್ತ್ರಾಲ್‌ನಿಂದ ಅಪೆರೆಲ್ ಪಾರ್ಕ್‌ಗೆ ಸಂಪರ್ಕಿಸುವ ಮಾರ್ಗವನ್ನು ಯೋಜನೆಯ ಮೊದಲ ಹಂತದ ಭಾಗವಾಗಿ ಉದ್ಘಾಟಿಸಿದ್ದರು. ಜೊತೆಗೆ ರೈಲಿನಲ್ಲಿ ಮೋದಿ ಪ್ರಯಾಣಿಸಿದ್ದರು. 2014ರಲ್ಲಿ ಯೋಜನೆಗೆ ಮಂಜೂರಾತಿ ದೊರೆತ್ತಿತ್ತು.

ಅಂದು ವಸ್ತ್ರಲ್ ಗಾಮ್ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಮೋದಿಯವರು ಮೊದಲ ಹಂತದ ಉದ್ಘಾಟನೆಯನ್ನು ಮಾಡಿದ್ದರು. ಫಲಕ ಅನಾವರಣಗೊಳಿಸಿ ಮೆಟ್ರೋ ರೈಲಿಗೆ ಹಸಿರು ಬಾವುಟ ತೋರಿಸಿ ಸ್ವಲ್ಪ ದೂರ ಪ್ರಯಾಣಿಸಿದ್ದರು.

ಇದನ್ನೂ ಓದಿರಿ: ವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

ಅಹಮದಾಬಾದ್ ಮೆಟ್ರೋ ಮೊದಲ ಹಂತವು 40 ಕಿಲೋಮೀಟರ್ ಉದ್ದವಿರುತ್ತದೆ. ಅದರಲ್ಲಿ 6.5 ಕಿಮೀ ಭೂಮಿಯೊಳಗೆ ಸಾಗುತ್ತದೆ. ಇದು ಎರಡು ಕಾರಿಡಾರ್‌ಗಳನ್ನು ಹೊಂದಿದೆ (ಒಂದು: ವಸ್ತ್ರಾಲ್‌ನಿಂದ ಥಲ್ತೇಜ್ ಗಾಮ್. ಎರಡು: ಗ್ಯಾಸ್‌ಪುರ್ ಡಿಪೋದಿಂದ ಮೊಟೆರಾ ಕ್ರೀಡಾಂಗಣ).

ಫೆಬ್ರವರಿ 2019ರಲ್ಲಿ ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ ಹಂತ-2 ಕ್ಕೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿತ್ತು. ಎರಡನೇ ಹಂತದ ಯೋಜನೆಯು ಕೇವಲ 28-ಕಿಮೀ ಉದ್ದವಿರುತ್ತದೆ. ಎರಡನೇ ಹಂತವು ಮೊಟೆರಾ ಕ್ರಿಕೆಟ್ ಸ್ಟೇಡಿಯಂನಿಂದ ಗಾಂಧಿನಗರದ ಮಹಾತ್ಮ ಮಂದಿರದವರೆಗೆ ಇರಲಿದೆ.

ಮೋದಿಯವರು 2019ರಲ್ಲಿ 6.6 ಕಿಮೀ ಮಾರ್ಗವನ್ನು ಉದ್ಘಾಟಿಸಿದ್ದರೆ, ಈಗ 21-ಕಿಮೀ ಕಾರಿಡಾರ್‌ಗೆ ಚಾಲನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...