Homeಮುಖಪುಟಮೋದಿ ಘೋಷಣೆ ನೀಡುವ ಕಲೆಯಲ್ಲಿ ಪರಿಣತಿ ಹೊಂದಿದ್ದಾರೆಯೆ ಹೊರತು, ಪರಿಹಾರಗಳನ್ನಲ್ಲ: ರಾಹುಲ್ ಗಾಂಧಿ

ಮೋದಿ ಘೋಷಣೆ ನೀಡುವ ಕಲೆಯಲ್ಲಿ ಪರಿಣತಿ ಹೊಂದಿದ್ದಾರೆಯೆ ಹೊರತು, ಪರಿಹಾರಗಳನ್ನಲ್ಲ: ರಾಹುಲ್ ಗಾಂಧಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ “ಘೋಷಣೆಗಳ ಕಲೆ”ಯನ್ನು ಕರಗತ ಮಾಡಿಕೊಂಡಿದ್ದಾರೆಯೆ ಹೊರತು, ಯಾವುದೇ ಪರಿಹಾರಗಳನ್ನು ನೀಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ. ‘ಮೇಕ್ ಇನ್ ಇಂಡಿಯಾ’ ಉಪಕ್ರಮದ ಹೊರತಾಗಿಯೂ ಭಾರತದ ಉತ್ಪಾದನೆ ದಾಖಲೆಯ ಕೆಳಮಟ್ಟದಲ್ಲಿದೆ ಎಂದು ಅವರು ಹೇಳಿದ್ದಾರೆ. ಮೋದಿ ಘೋಷಣೆ ನೀಡುವ

ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, “‘ಮೇಕ್ ಇನ್ ಇಂಡಿಯಾ’ ಕಾರ್ಖಾನೆ ಭಾರಿ ಭರವಸೆ ನೀಡಿತು. ಹಾಗಾದರೆ ಉತ್ಪಾದನೆಯು ದಾಖಲೆ ಮಟ್ಟದಲ್ಲಿ ಕನಿಷ್ಠವಾಗಿರುವುದು ಏಕೆ, ಯುವಜನರ ನಿರುದ್ಯೋಗ ದಾಖಲೆ ಮಟ್ಟದಲ್ಲಿ ಇರುವುದು ಏಕೆ ಮತ್ತು ಚೀನಾದಿಂದ ಆಮದು ದುಪ್ಪಟ್ಟಾಗಿದ್ದು ಯಾಕೆ? ಮೋದಿ ಅವರು ಘೋಷಣೆಗಳ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆಯೆ ಹೊರತು ಪರಿಹಾರಗಳಲ್ಲ. 2014 ರಿಂದ, ಉತ್ಪಾದನೆಯು ನಮ್ಮ ಆರ್ಥಿಕತೆಯ ಶೇಕಡಾ 14 ಕ್ಕೆ ಇಳಿದಿದೆ” ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಗೆ ಯಾವುದೇ ಹೊಸ ಆಲೋಚನೆಗಳಿಲ್ಲ ಮತ್ತು ಸಂಪೂರ್ಣವಾಗಿ ಶರಣಾಗಿದ್ದಾರೆ ಎಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಗಾಂಧಿ ಹೇಳಿದ್ದಾರೆ.

“ಹೆಚ್ಚು ಪ್ರಚಾರ ಪಡೆದ ಉತ್ಪಾದನೆ ಸಂಬಂಧಿತ ಪ್ರೋತ್ಸಾಹಕ (ಪಿಎಲ್‌ಐ) ಯೋಜನೆಯನ್ನು ಸಹ ಈಗ ಸದ್ದಿಲ್ಲದೆ ಹಿಂದಕ್ಕೆ ಪಡೆಯಲಾಗುತ್ತಿದೆ” ಎಂದು ಅವರು ಆರೋಪಿಸಿದ್ದಾರೆ. ಭಾರತಕ್ಕೆ ಮೂಲಭೂತ ಬದಲಾವಣೆಯ ಅಗತ್ಯವಿದೆ ಎಂದು ಹೇಳಿದ ಅವರು, ಇದು ಪ್ರಾಮಾಣಿಕ ಸುಧಾರಣೆಗಳು ಮತ್ತು ಆರ್ಥಿಕ ಬೆಂಬಲದ ಮೂಲಕ ಲಕ್ಷಾಂತರ ಉತ್ಪಾದಕರಿಗೆ ಅಧಿಕಾರ ನೀಡುತ್ತದೆ ಎಂದು ತಿಳಿಸಿದ್ದಾರೆ.

“ನಾವು ಇತರರಿಗೆ ಮಾರುಕಟ್ಟೆ ಆಗುವುದನ್ನು ನಿಲ್ಲಿಸಬೇಕು. ನಾವು ಇಲ್ಲಿಯೆ ವಸ್ತುಗಳನ್ನು ನಿರ್ಮಿಸುವವರೆಗೂ ಖರೀದಿಸುತ್ತಲೇ ಇರುತ್ತೇವೆ. ಗಡಿಯಾರ ಓಡುತ್ತಲೆ ಇದೆ” ಎಂದು ಅವರು ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ದೆಹಲಿಯ ನೆಹರೂ ಪ್ಲೇಸ್‌ನಲ್ಲಿ ಮೊಬೈಲ್ ರಿಪೇರಿ ತಂತ್ರಜ್ಞರನ್ನು ಭೇಟಿಯಾಗಿ ಅಲ್ಲಿ ಅವರೊಂದಿಗೆ ನಡೆಸಿದ ಸಂಭಾಷಣೆಯ ವೀಡಿಯೊವನ್ನು ಎಕ್ಸ್‌ ಪೋಸ್ಟ್‌ಗೆ ಲಗತ್ತಿಸಿದ್ದಾರೆ. ಮೋದಿ ಘೋಷಣೆ ನೀಡುವ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇರಾನ್ ಮೇಲಿನ ದಾಳಿ ನಿಲ್ಲಿಸಲ್ಲ: ವಿಶ್ವಸಂಸ್ಥೆಗೆ ತಿಳಿಸಿದ ಇಸ್ರೇಲ್

ಇರಾನ್ ಮೇಲಿನ ದಾಳಿ ನಿಲ್ಲಿಸಲ್ಲ: ವಿಶ್ವಸಂಸ್ಥೆಗೆ ತಿಳಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...