Homeಕರ್ನಾಟಕ'ಮೋದಿ ದುರ್ಬಲ ಪ್ರಧಾನಮಂತ್ರಿಯಂತೆ, ಇವರು ಪ್ರಬಲ ಮುಖ್ಯಮಂತ್ರಿಯಂತೆ..'; ಸಿದ್ದರಾಮಯ್ಯ ವಿರುದ್ಧ ಎಚ್‌ಡಿಡಿ ವಾಗ್ದಾಳಿ

‘ಮೋದಿ ದುರ್ಬಲ ಪ್ರಧಾನಮಂತ್ರಿಯಂತೆ, ಇವರು ಪ್ರಬಲ ಮುಖ್ಯಮಂತ್ರಿಯಂತೆ..’; ಸಿದ್ದರಾಮಯ್ಯ ವಿರುದ್ಧ ಎಚ್‌ಡಿಡಿ ವಾಗ್ದಾಳಿ

- Advertisement -
- Advertisement -

ಬೆಂಗಳೂರಿನಲ್ಲಿ ಇಂದು ನಡೆದ ಲೋಕಸಭಾ ಚುನಾವಣಾ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದ ಜಾತ್ಯತೀತ ಜನತಾದಳ (ಜೆಡಿಎಸ್) ರಾಷ್ಟ್ರೀಯ ಅಧ್ಯಕ್ಷರಾದ ಎಚ್‌ಡಿ ದೆವೇಗೌಡ ಅವರು, ಮಂಡ್ಯ ಜೆಡಿಎಸ್ ಅಭ್ಯರ್ಥಿ ಹಾಗೂ  ಮೈಸೂರು ಮತ್ತು ಚಾಮರಾಜನಗರ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವಂತೆ ಮುಖಂಡರಲ್ಲಿ ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು” ಎಂದು ಗುಡುಗಿದ್ದಾರೆ.

ಜೆಡಿಎಸ್-ಬಿಜೆಪಿ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನರೇಂದ್ರ ಮೋದಿಯಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ’ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೇಗೌಡರಿಗೆ ನಿರ್ದೇಶನ ನೀಡಿದರು.

“ಮೈಸೂರು ಚಾಮರಾಜನಗರ ಕ್ಷೇತ್ರ ಗೆಲ್ಲುವ ಶಕ್ತಿ ಜಿ.ಟಿ.ದೇವೇಗೌಡರಿಗೆ ಇದೆ. ಸಿದ್ದರಾಮಯ್ಯ ಅವರ ಗರ್ವಭಂಗ ಆಗಲೇಬೇಕು. ಅವರ ಗರ್ವಭಂಗ ಆಗಬೇಕಾದರೆ ನಾವೆಲ್ಲರೂ ಛಲದಿಂದ ಒಟ್ಟಾಗಿ ಹೋಗಬೇಕು” ಎಂದು ವೇದಿಕೆಯಲ್ಲೇ ಹೇಳಿದರು.

‘ಮೈತ್ರಿಯಲ್ಲಿ ಎಲ್ಲಿಯೂ ಒಂದು ಸಣ್ಣ ಸಮಸ್ಯೆಯೂ ಕಾಣಿಸಿಕೊಳ್ಳಬಾರದು. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನೂ ಬಿಡದೇ ಹೋರಾಟ ಮಾಡೋಣ. ಒಂದು ರಾಜ್ಯದ ಸಿಎಂ ಗಟ್ಟಿಯಾಗಿರಬೇಕಂತೆ, ದೇಶದ ಪ್ರಧಾನಿ ಬಹಳ ವೀಕ್ ಅಂತೆ.. ಅಬ್ಬಾ..! ಪ್ರಧಾನಿ ವಿರುದ್ಧವೇ ಕೋರ್ಟಿಗೆ ಹೋಗಿದ್ದಾರೆ.. ಎಂಥಾ ಜನ ಇವರು” ಎಂದು ಕರ್ನಾಟಕದ ಪಾಲಿನ ತೆರಿಗೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದರು.

ಮನಮೋಹನ್ ಸಿಂಗ್ ‘ನೊ..’ ಎಂದಿದ್ದರು

‘ರೈತರ ಸಾಲದ ಮೇಲೆ ಬಡ್ಡಿ ಮನ್ನ ಮಾಡಿ ಎಂದು ಕೇಳಿದರೆ, ಮನಮೋಹನ್ ಸಿಂಗ್ ಅವರು ನೋ ಎಂದರು. ಇದೆಲ್ಲಾ ಗೊತ್ತಿದ್ದರೂ ಸಿದ್ದರಾಮಯ್ಯ ಅವರೇ ಕೋರ್ಟಿಗೆ ಅರ್ಜಿ ಹಾಕ್ತೀರಾ? ಸ್ಟ್ರಾಂಗೆಸ್ಟ್ ಮುಖ್ಯಮಂತ್ರಿ, ವೀಕೆಸ್ಟ್ ಪ್ರಧಾನಮಂತ್ರಿ! ಇಂತಹ ಮುಖ್ಯಮಂತ್ರಿ ನಮ್ಮ ರಾಜ್ಯದಲ್ಲಿದ್ದಾರೆ. ಆ ಮಹಾನುಬಾವರಿಗೆ, ನಮೋ ನಮಃ ಎಂದು ಮಾಜಿ ಪ್ರಧಾನಿಗಳು ಲೇವಡಿ ಮಾಡಿದ್ದಾರೆ.

‘ಸಿದ್ದರಾಮಯ್ಯನವರು ಜೆಡಿಎಸ್ ಎಲ್ಲಿದೆ ಅಂತಾರೆ. ಅವರಿಗೆ ಅಧಿಕಾರದ ಮದ. ಆ ಮದ ಇಳಿಸುವ ಸಾಮರ್ಥ್ಯ 91ನೇ ವರ್ಷದ ಈ ದೇವೇಗೌಡನಿಗಿದೆ. ಯಾರ ಭಯಕ್ಕೂ ನಾನು ಅಂಜುವನಲ್ಲ. ಆ ಭಯ ಅನ್ನೋದೇ ನನಗಿಲ್ಲ. ನನ್ನ ತಲೆ ಎನ್‌ಸೈಕ್ಲೋಪೀಡಿಯಾ. ಯಾವಾಗ, ಏನೆಲ್ಲಾ ಘಟನೆ ನಡೆದಿದೆ ಎಲ್ಲವನ್ನೂ ಹೇಳಬಲ್ಲೆ. ಯಡಿಯೂರಪ್ಪ ಅವರೇ ನನಗೆ ಎಲ್ಲಾ ಗೊತ್ತು ಎಂದ ಅವರು; ತುಮಕೂರಿಗೆ ಕಳಿಸಿ, ನನ್ನನ್ನೇ ಸೋಲಿಸಿದರು. ಕಾಂಗ್ರೆಸ್ ನವರು ಏನು ಮಾಡಿದರು ಎನ್ನುವುದು ಗೊತ್ತಿದೆ’ ಎಂದರು.

ಎಐಸಿಸಿಗೆ ಹಣ ಸಂದಾಯವಾಗುತ್ತಿದೆ

ಕಾಂಗ್ರೆಸ್ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪ ಮಾಡಿದ ಗೌಡರು, “28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಹಣ ಬಲವನ್ನು ನಾವು ಎದುರಿಸಬೇಕಿದೆ. ಹೊರ ರಾಜ್ಯಗಳಿಗೂ ಕಾಂಗ್ರೆಸ್ ನವರು ಹಣ ಸರಬರಾಜು ಮಾಡ್ತಿದ್ದಾರೆ. ತೆಲಾಂಗಣ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಅಲ್ಲಿಗೆಲ್ಲ ರಾಜ್ಯದ ಹಣ ಹೋಗುತ್ತಿದೆ. ಕರ್ನಾಟಕದಿಂದ ಎಐಸಿಸಿಗೆ ಹಣ ಸಂದಾಯವಾಗುತ್ತಿದೆ’ ಎಂದು ಗಂಭೀರ ಆರೋಪ ಮಾಡಿದರು.

‘ಎರಡು ಪಕ್ಷಗಳ ಸಮನ್ವಯ ಸಮಿತಿ ಸಭೆ ನಡೆಯುತ್ತಿರುವುದು ಸಂತೋಷದಾಯಕ. ಭಾರತ ಮಾತೆ ಹಾಗೂ ಶ್ಯಾಮ್ ಪ್ರಕಾಶ್ ಮುಖರ್ಜಿ, ದೀನ್ ದಯಾಳ್ ಉಪಾಧ್ಯಾಯ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಅರ್ಪಿಸಿ ವೇದಿಕೆಗೆ ಬಂದಿದ್ದೇನೆ. ರಾಜ್ಯ ಉಸ್ತುವಾರಿ ರಾಧಮೋಹನ್ ದಾಸ್ ಎಲ್ಲಾ ಕ್ಷೇತ್ರಗಳ ಮಾಹಿತಿ ಪಡೆದಿದ್ದಾರೆ. ಎಲ್ಲಾ ಮಾಹಿತಿಯನ್ನ ಬಿಜೆಪಿ ವರಿಷ್ಠರಿಗೆ ನೀಡ್ತಿದ್ದಾರೆ. ಎರಡು ಪಕ್ಷದಲ್ಲಿ ಸಮನ್ವಯ ಸಾಧಿಸಬೇಕು. ಯಡಿಯೂರಪ್ಪ ಅವರ ಪಾತ್ರ ಬಹಳ ಮುಖ್ಯವಾಗಿದೆ. ಸಮಯ ತುಂಬಾ ಕಡಿಮೆ ಇದೆ. ಹಿಂದೆ ಆದಂತಹ ವಿಚಾರಗಳನ್ನ ಮರೆತು ನಾವೆಲ್ಲಾ ಒಂದಾಗಬೇಕಿದೆ. ಕಾರ್ಯಕರ್ತರು ಕೆಲಸ ಮಾಡಬೇಕಿದೆ’ ಎಂದು ಮನವಿ ಮಾಡಿದರು.

ಇದನ್ನೂ ಓದಿ; ಸ್ವಾಭಿಮಾನಿ ಮಹಿಳೆಯರು ಸಮಾಜದ ಶಕ್ತಿಯಾಗುತ್ತಾರೆ; ಭಾರತದ ಭವಿಷ್ಯವನ್ನು ಬದಲಿಸುತ್ತಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...