Homeಮುಖಪುಟಪ್ರಧಾನಿ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ: ರಾಹುಲ್ ಗಾಂಧಿ

ಪ್ರಧಾನಿ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ: ರಾಹುಲ್ ಗಾಂಧಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ವಾಷಿಂಗ್ಟನ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಷಿಂಗ್ಟನ್‌ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ಪತ್ರಕರ್ತರೊಂದಿಗೆ ಸಂವಾದ ನಡೆಸಿದ ಅವರು, ”ನರೇಂದ್ರ ಮೋದಿ ಅವರು ಭಾರತೀಯ ಸಮಾಜವನ್ನು ಧ್ರುವೀಕರಿಸುತ್ತಿದ್ದಾರೆ ಮತ್ತು ಒಡೆಯುತ್ತಿದ್ದಾರೆ. ಅವರ ಆಡಳಿತದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಆರೋಪಿಸಿದರು.

”140 ಕೋಟಿ ಜನರಿರುವ, ವಿವಿಧ ನಂಬಿಕೆಗಳ, ಜಾತ್ಯತೀತ ಸಂವಿಧಾನದ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಹಿಂದುತ್ವವನ್ನು ಪ್ರತಿಪಾದಿಸುತ್ತಿದೆ” ಎಂದು ಅವರು ಆರೋಪ ಮಾಡಿದರು.

ಅವರು ಏನೇ ಮಾಡಿದರೂ ಅದೆಲ್ಲವನ್ನು ಮೀರಿ 2024ರ ಚುನಾವಣೆಯಲ್ಲಿ ಪ್ರತಿಪಕ್ಷಗಳು ಬಿಜೆಪಿಯನ್ನು ಸೋಲಿಸಲಿವೆ ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

”ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮ ಸಾಧನೆ ಮಾಡುತ್ತದೆ ಎಂದು ನಾನು ನಂಬಿದ್ದೇನೆ. ಆಶ್ಚರ್ಯಕರ ರೀತಿಯಲ್ಲಿ ಪಕ್ಷ ಹೊರಹೊಮ್ಮಲಿದೆ. ನೋಡುತ್ತಿರಿ, ವಿರೋಧ ಪಕ್ಷಗಳ ಒಗ್ಗಟ್ಟು ಬಿಜೆಪಿಯನ್ನು ಸೋಲಿಸಲಿದ” ಎಂದು ಅವರು ಹೇಳಿದರು.

ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದಾತ್ಮಕ ಅಧಿವೇಶನದಲ್ಲಿ ಮಾತನಾಡಿದ ಅವರು, ”2004ರಲ್ಲಿ ನಾನು ರಾಜಕೀಯಕ್ಕೆ ಸೇರಿದಾಗ, ಮುಂದೆ ಯಾವತ್ತೋ ಒಂದು ದಿನ ಸಂಸತ್ತಿನಿಂದ ಅನರ್ಹಗೊಳಿಸಲಾಗುತ್ತದೆ” ಎಂದು ನಾನು ಊಹಿಸಿರಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಮೋದಿಯನ್ನು ದೇವರೊಂದಿಗೆ ಚರ್ಚೆಗೆ ಕೂರಿಸಿದರೆ, ದೇವರೇ ಗೊಂದಲಕ್ಕಿಡಾಗುತ್ತಾನೆ: ರಾಹುಲ್ ವ್ಯಂಗ್ಯ

ಅವರು ಹೀಗೆ ಮಾಡುತ್ತಾರೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ ಎಂದು ಹೇಳಿದರು.

”ಮಾನನಷ್ಟಕ್ಕಾಗಿ ಕ್ರಿಮಿನಲ್ ಶಿಕ್ಷೆಗೆ ಒಳಗಾದ ಮೊದಲ ವ್ಯಕ್ತಿ ನಾನು” ಅದರಿಂದ ನನ್ನನ್ನು ವಸಂಸತ್ತಿನಿಂದ ಅಮಾನತು ಮಾಡಲಾಯಿತು. ಆದರೆ ಇದು ನನಗೆ ಒಂದು ದೊಡ್ಡ ಅವಕಾಶವನ್ನು ನೀಡಿದೆ ಎಂದು ನಾನು ಭಾವಿಸುತ್ತೇನೆ, ಬಹುಶಃ ಸಂಸತ್ತಿನಲ್ಲಿ ನನಗೆ ಸಿಗುವ ಅವಕಾಶಕ್ಕಿಂತ ದೊಡ್ಡದಾಗಿದೆ ಎಂದು ಸಕಾರಾತ್ಮಕವಾಗಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿಯವರ ಉಪನಾಮದ ಬಗ್ಗೆ ಹೇಳಿಕೆ ನೀಡಿದ್ದರಿಂದ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್‌ನ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಒಂದು ದಿನದ ನಂತರ, ಮಾರ್ಚ್ 24 ರಂದು ಗಾಂಧಿ ಅವರನ್ನು ಲೋಕಸಭೆಯ ಸದಸ್ಯರಾಗಿ ಅನರ್ಹಗೊಳಿಸಲಾಯಿತು.

ಪ್ರಜಾಪ್ರತಿನಿಧಿ ಕಾಯಿದೆ, 1951 ರ ಸೆಕ್ಷನ್ 8(3) ರ ಪ್ರಕಾರ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಶಾಸಕನನ್ನು ಶಿಕ್ಷೆಯ ದಿನಾಂಕದಿಂದ ಆರು ವರ್ಷಗಳ ಅವಧಿಯ ನಂತರ ಅನರ್ಹಗೊಳಿಸಲಾಗುತ್ತದೆ.

ರಾಹುಲ್ ಗಾಂಧಿ ಅವರ ಮೇಲಿನ ಅಪರಾಧವನ್ನು ತಡೆಹಿಡಿದರೆ ಲೋಕಸಭೆಯ ಸದಸ್ಯತ್ವವನ್ನು ಮರುಸ್ಥಾಪಿಸಬಹುದು. ಮೇ 2 ರಂದು, ಗುಜರಾತ್ ಹೈಕೋರ್ಟ್ ರಾಜಕಾರಣಿಗೆ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿತು ಮತ್ತು ಜೂನ್ 5 ರ ನಂತರ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ ಅರ್ಜಿಯಲ್ಲಿ ತನ್ನ ತೀರ್ಪನ್ನು ಪ್ರಕಟಿಸುವುದಾಗಿ ಹೇಳಿದೆ.

ಪ್ರಧಾನಿ ಮೋದಿ ಅವರು ಜೂನ್ 22 ರಂದು ಮೋದಿ ಅಮೆರಿಕ ಭೇಟಿ ಕೈಗೊಳ್ಳಲಿದ್ದಾರೆ. ಅವರ ಸ್ವಾಗತಕ್ಕೆ ಶ್ವೇತಭವನದಲ್ಲಿ ಭಾರಿ ಸಿದ್ಧತೆಗಳು ನಡೆಯುತ್ತಿವೆ. ಇದರ ನಡುವೆಯೇ ರಾಹುಲ್ ಅಮೆರಿಕಕ್ಕೆ ಭೇಟಿ ನೀಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

0
ದೆಹಲಿ ಎಎಪಿ ನಾಯಕಿ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಶುಕ್ರವಾರ ಎಎಪಿ...