Homeಮುಖಪುಟ‘ಮೋದಿ ಪೊಲೀಸ್‌ ರಾಜ್ಯದ ದೊರೆ’: ಪ್ರತಿಭಟನೆ ವೇಳೆ ರಾಹುಲ್ ಗಾಂಧಿ; ವಶಕ್ಕೆ ಪಡೆದ ಪೊಲೀಸರು

‘ಮೋದಿ ಪೊಲೀಸ್‌ ರಾಜ್ಯದ ದೊರೆ’: ಪ್ರತಿಭಟನೆ ವೇಳೆ ರಾಹುಲ್ ಗಾಂಧಿ; ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ತನ್ನ ತಾಯಿ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ವಿರುದ್ಧ ದೆಹಲಿಯ ರಾಜಪಥದ ರಸ್ತೆಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ರಾಹುಲ್‌‌ ಗಾಂಧಿ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ಬೆಲೆ ಏರಿಕೆ, ಜಿಎಸ್‌ಟಿ ಹಾಗೂ ತನಿಖಾ ಸಂಸ್ಥೆಗಳನ್ನು ಬಳಸಿ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸುವ ವಿಚಾರ ಸೇರಿದಂತೆ ಹಲವಾರು ವಿಷಯಗಳ ಕುರಿತು ಸಂಸದರು ಪ್ರತಿಭಟಿಸುತ್ತಿದ್ದರು. ಸುಮಾರು 30 ನಿಮಿಷಗಳ ನೂಕುನುಗ್ಗಲಿನ ನಂತರ, ರಾಹುಲ್‌ ಗಾಂಧಿಯನ್ನು ಪೊಲೀಸರು ತಡೆದು ನಿಲ್ಲಿಸಿ, ಈಗಾಗಲೇ ಬಂಧಿತರಾಗಿದ್ದ ಇತರ ಸಂಸದರೊಂದಿಗೆ ಅವರನ್ನು ಬಸ್‌ನಲ್ಲಿ ಹಾಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತ ಪೊಲೀಸ್ ರಾಜ್ಯವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅದರ ದೊರೆ” ಎಂದು ರಾಹುಲ್ ಗಾಂಧಿ ಬಂಧನಕ್ಕೂ ಮುನ್ನ ಹೇಳಿದ್ದಾರೆ.

ದೆಹಲಿಯ ಇನ್ನೊಂದು ಭಾಗದಲ್ಲಿ, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗಾಗಿ ಅವರ ತಾಯಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜಾರಿ ನಿರ್ದೇಶನಾಲಯದಲ್ಲಿದ್ದರು. ಸೋನಿಯಾ ಗಾಂಧಿ ಅವರು ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ತನಿಖಾ ಸಂಸ್ಥೆಯ ಕಚೇರಿಗೆ ತೆರಳಿದ್ದರು. ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ರಾಹುಲ್ ಗಾಂಧಿ ಕೂಡ ಅಲ್ಲಿಗೆ ತೆರಳಿದ್ದರು.

ಇದನ್ನೂ ಓದಿ: ‘ಮತ್ತೆ ಗಬ್ಬರ್‌ ಸಿಂಗ್ ಸ್ಟ್ರೈಕ್‌’: ಜಿಎಸ್‌ಟಿ ಏರಿಕೆಯ ಬಗ್ಗೆ ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಕಾಂಗ್ರೆಸ್‌ನ ನಾಲ್ಕು ಸಂಸದರನ್ನು ಪೂರ್ತಿ ಮುಂಗಾರು ಅಧಿವೇಶನದಿಂದ ಅಮಾನತುಗೊಳಿಸಿದ ಕ್ರಮವನ್ನು ರಾಹುಲ್ ಗಾಂಧಿ ಟೀಕಿಸಿದ್ದು, “ಸಂಸತ್ತಿನಲ್ಲಿ ಪ್ರತಿಪಕ್ಷಗಳನ್ನು ಮೌನಗೊಳಿಸಲಾಗಿದೆ” ಎಂದು ಹೇಳಿದ್ದಾರೆ. ರಾಷ್ಟ್ರಪತಿ ಭವನದತ್ತ ಮೆರವಣಿಗೆ ನಡೆಸಲು ಉದ್ದೇಶಿಸಿದ್ದ ಸಂಸದರನ್ನು ವಿಜಯ್ ಚೌಕ್ ಕ್ರಾಸಿಂಗ್‌ನಲ್ಲಿ ತಡೆದ್ದಾರೆ.

“ಪೊಲೀಸರ ಸೂಚನೆಯಂತೆ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಇದೆಲ್ಲವೂ ವಿರೋಧ ಪಕ್ಷಗಳನ್ನು ಸಂಪೂರ್ಣವಾಗಿ ನಾಶಮಾಡಲು ಮತ್ತು ನಮ್ಮ ಧ್ವನಿಯನ್ನು ಅಡಗಿಸಲು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ಪಿತೂರಿಯಾಗಿದೆ. ನಾವು ಹೆದರುವುದಿಲ್ಲ, ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ಹಿರಿಯ ಕಾಂಗ್ರೆಸ್ಸಿಗ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...