Homeಮುಖಪುಟ'ನಾನು ಕಂಡ ಅತ್ಯಂತ ಕೆಟ್ಟ ಪ್ರಧಾನಿ ಈ ಮೋದಿ': ಸಚಿವ ಆರ್​.ಬಿ.ತಿಮ್ಮಾಪುರ

‘ನಾನು ಕಂಡ ಅತ್ಯಂತ ಕೆಟ್ಟ ಪ್ರಧಾನಿ ಈ ಮೋದಿ’: ಸಚಿವ ಆರ್​.ಬಿ.ತಿಮ್ಮಾಪುರ

- Advertisement -
- Advertisement -

”ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣವು ಅತ್ಯಂತ ನೋವಿನ ಘಟನೆಯಾಗಿದೆ. ಇಂತಹ ಪೈಶಾಚಿಕ ಕೃತ್ಯವನ್ನು ಖಂಡಿಸುತ್ತೇನೆ” ಎಂದು ತಿಮ್ಮಾಪುರ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ”ಇಂತಹ ಘಟನೆ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಿಲ್ಲ. ಆರೋಪಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿಲ್ಲ. ಇಂತಹ ಪ್ರಧಾನಿ ಇದ್ದರೆ ಬಡವರು, ಹಿಂದುಳಿದವರು ಬದುಕುವುದು ಹೇಗೆ? ಅವಮಾನಕ್ಕೀಡಾದ ಸಂತ್ರಸ್ತೆಗೆ ಸಾಂತ್ವನದ ಮಾತುಗಳು ಸಹ ಹೇಳಿಲ್ಲ. ಇದು ನಾಚಿಕೆಗೇಡಿನ ಸಂಗತಿ. ಮೋದಿ ನಾನು ಕಂಡ ಅತ್ಯಂತ ಕೆಟ್ಟ ಪ್ರಧಾನಿ” ಎಂದು ವಾಗ್ದಾಳಿ ನಡೆಸಿದರು.

ರಾಜ್ಯ ನಾಯಕರನ್ನು ಹತ್ತಿರಕ್ಕೂ ಬಿಟ್ಟುಕೊಳ್ಳದ ಬಿಜೆಪಿ ಹೈಕಮಾಂಡ್:

ಬಿಜೆಪಿ ಹೈಕಮಾಂಡ್ ಈವರೆಗೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ರಾಜ್ಯ ಬಿಜೆಪಿ ನಾಯಕರನ್ನು ಹತ್ತಿರಕ್ಕೂ ಬಿಟ್ಟುಕೊಂಡಿಲ್ಲ. ರಾಜ್ಯ ನಾಯಕರನ್ನೇ ಹೈಕಮಾಂಡ್​ ತಿರಸ್ಕರಿಸಿದೆ ಎಂದು ಅಬಕಾರಿ ಸಚಿವ ಆರ್​.ಬಿ.ತಿಮ್ಮಾಪುರ ಹೇಳಿದ್ದಾರೆ.

”ಬಿಜೆಪಿ ಹೈಕಮಾಂಡ್ ಈವರೆಗೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ. ರಾಜ್ಯ ಬಿಜೆಪಿ ನಾಯಕರನ್ನು ಹತ್ತಿರಕ್ಕೂ ಹೈಕಮಾಂಡ್​ ಬಿಟ್ಟುಕೊಂಡಿಲ್ಲ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಆಗಲಿ ತಮ್ಮ ಕಚೇರಿ ಒಳಗೂ ಬಿಟ್ಟುಕೊಳ್ಳುತ್ತಿಲ್ಲ. ಇದರಿಂದ ರಾಜ್ಯ ಬಿಜೆಪಿ ನಾಯಕರು ಗಾಬರಿಗೊಂಡಿದ್ದಾರೆ” ಕಾಲೆಳೆದಿದ್ದಾರೆ.

”ಕೆಲವು ಬಿಜೆಪಿ ನಾಯಕರು ತಮ್ಮನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಿ ಎಂದು ಹಾದಿ ಬೀದಿಗಳಲ್ಲಿ ಕಿರುಚಾಡುತ್ತಿದ್ದಾರೆ. ಈ ಮೂಲಕ ಮೋದಿ, ಅಮಿತ್ ಶಾ RSS ಮೆಚ್ಚಿಸಲು ಹೊರಟಿದ್ದಾರೆ ಆದರೆ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಇವನರನ್ನ ಒಳಗ ಕರೆಯುತ್ತಿಲ್ಲ. ರಾಜ್ಯ ಬಿಜೆಪಿ ನಾಯಕರ ಸ್ಥಿತಿ ಹೀಗಾಗಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಸರ್ಕಾರದ ಮನವಿ ಧಿಕ್ಕರಿಸಿ ಮಣಿಪುರಕ್ಕೆ ಭೇಟಿ ಕೊಟ್ಟ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...