Homeಮುಖಪುಟಮೋದಿಯವರೇ, ಬಿಹಾರದ ಜನರಿಗೆ ಸುಳ್ಳು ಹೇಳಬೇಡಿ- ರಾಹುಲ್ ಗಾಂಧಿ

ಮೋದಿಯವರೇ, ಬಿಹಾರದ ಜನರಿಗೆ ಸುಳ್ಳು ಹೇಳಬೇಡಿ- ರಾಹುಲ್ ಗಾಂಧಿ

ನೀವು ಬಿಹಾರಿಗಳಿಗೆ ಉದ್ಯೋಗ ನೀಡಿದ್ದೀರಾ? ಕಳೆದ ಚುನಾವಣೆಯಲ್ಲಿ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದೀರಿ, ಆದರೆ ಯಾರಿಗೂ ಉದ್ಯೋಗ ಸಿಗಲಿಲ್ಲ.

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಹಾರದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಾ, ದೇಶದಲ್ಲಿ ನಿರುದ್ಯೋಗ ಹೆಚ್ಚಳ, ವಲಸೆ ಕಾರ್ಮಿಕರ ಸಮಸ್ಯೆ, ಕೊರೋನಾ ವೈರಸ್​ ದಾಳಿ, ಭಾರತ-ಚೀನಾ ಸಂಘರ್ಷಗಳ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ನವಾಡಾದಲ್ಲಿ ನಡೆದ ಕಾಂಗ್ರೆಸ್​-ಆರ್​ಜೆಡಿ ಜಂಟಿ ಚುನಾವಣಾ ರ‍್ಯಾಲಿಯಾದ ‘ಬದಲಾವ್ ಸಂಕಲ್ಪ್’ ನಲ್ಲಿ ಆರ್‌‌ಜಿಡಿ ನಾಯಕ ತೇಜಸ್ವಿ ಯಾದವ್ ಜೊತೆಗೂಡಿ ಪ್ರಧಾನಿ ನರೇಂದ್ರ ಮೋದಿಯ ವೈಫಲ್ಯಗಳನ್ನು ಜನರ ಮುಂದಿಟ್ಟು ಮತಯಾಚಿಸಿದ್ದಾರೆ

ಲಾಕ್​ಡೌನ್​, ಚೀನಾ ಗಡಿ ಸಂಘರ್ಷ, ವಲಸೆ ಕಾರ್ಮಿಕರ ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಕ್ಕಾಗಿ ಏನೂ ಮಾಡಿಲ್ಲ. ಬಿಹಾರಕ್ಕೂ ಅವರಿಂದ ಯಾವ ಕೊಡುಗೆಯೂ ಇಲ್ಲ ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

“ಮೋದಿಯವರೇ, ಬಿಹಾರದ ಜನರಿಗೆ ಸುಳ್ಳು ಹೇಳಬೇಡಿ. ನೀವು ಬಿಹಾರಿಗಳಿಗೆ ಉದ್ಯೋಗ ನೀಡಿದ್ದೀರಾ? ಕಳೆದ ಚುನಾವಣೆಯಲ್ಲಿ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದೀರಿ, ಆದರೆ ಯಾರಿಗೂ ಉದ್ಯೋಗ ಸಿಗಲಿಲ್ಲ. ಸಾರ್ವಜನಿಕವಾಗಿ ತಾನು ಸೈನ್ಯ, ರೈತರು, ಕಾರ್ಮಿಕರು ಮತ್ತು ವ್ಯಾಪಾರಿಗಳಿಗೆ ತಲೆ ಬಾಗುತ್ತೇನೆ ಎಂದು ಹೇಳುತ್ತೀರ, ಆದರೆ ಅಂಬಾನಿ ಮತ್ತು ಅದಾನಿಗಾಗಿ ಮಾತ್ರ ಕೆಲಸ ಮಾಡುತ್ತೀರಿ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಕೊರೊನಾ ಸೋಂಕು ಮತ್ತು ಲಾಕ್‌ಡೌನ್‌, ವಲಸೆ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ ರಾಹುಲ್, “ಎಲ್ಲಾ ವಲಸೆ ಕಾರ್ಮಿಕರನ್ನು ಮತ್ತೆ ಬಿಹಾರಕ್ಕೆ ವಾಪಸ್ ಕಳುಹಿಸಲಾಯಿತು. ಆ ಸಮಯದಲ್ಲಿ ವಲಸೆ ಕಾರ್ಮಿಕರು ಮೈಲುಗಟ್ಟಲೇ ನಡೆದುಕೊಂಡು ಹೋಗುತ್ತಿದ್ದಾಗ ಪ್ರಧಾನಿ ಮೋದಿ ಏನು ಮಾಡುತ್ತಿದ್ದರು? ಅವರು ನಿಮಗೆ ಸಾರಿಗೆ ಸಂಪರ್ಕಕ್ಕಾಗಿ  ರೈಲುಗಳನ್ನು ಒದಗಿಸಿದ್ದಾರೆಯೇ? ” ಎಂದು ಪ್ರಶ್ನಿಸಿದ್ದಾರೆ.

ನೋಟು ಅಮಾನ್ಯೀಕರಣದ ಬಗ್ಗೆ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಅಂಬಾನಿ, ಅದಾನಿ ಸರತಿ ಸಾಲಿನಲ್ಲಿ ನಿಂತಿರುವುದನ್ನು ನೀವು ನೋಡಿದ್ದೀರಾ? ಇವರೆಲ್ಲರೂ ಎಸಿ ಕೋಣೆಗಳಲ್ಲಿರುತ್ತಾರೆ. ಮೋದಿ ಶ್ರೀಮಂತರ ಪರವಾಗಿದ್ದಾರೆ. ರೈತರು ಮತ್ತು ಸಣ್ಣ ಉದ್ಯಮಿಗಳನ್ನು ಕಡೆಗಣಿಸುತ್ತಿದ್ದಾರೆ ಎಂದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಮಸೂದೆಗಳ ಕುರಿತು ರಾಹುಲ್ ಗಾಂಧಿ ಕಿಡಿಕಾರಿದ್ದು, ಚೀನಾ ನಮ್ಮ ಗಡಿಯೊಳಗೆ ನುಗ್ಗಿದರೂ ಯಾರೊಬ್ಬರೂ ಒಳಗೆ ಬಂದಿಲ್ಲ ಎಂದು ಹೇಳಿ ಪ್ರಧಾನಿ ನಮ್ಮ ಯೋಧರನ್ನು ಅವಮಾನಿಸಿದ್ದಾರೆ ಎಂದಿದ್ದಾರೆ.

ರ‍್ಯಾಲಿ ವೇಳೆ ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್​ ವಿರುದ್ಧ ಕಿಡಿಕಾರಿರುವ ತೇಜಸ್ವಿ ಯಾದವ್, “ಎನ್​ಡಿಎ ಮೈತ್ರಿ ಕೂಟದ ವಿರುದ್ಧ ಮತ ಚಲಾಯಿಸಿ, ನಿತೀಶ್​ ಕುಮಾರ್​ ಅವರನ್ನು ಮನೆಯಲ್ಲಿಯೇ ಇರಿಸಿ. ಅವರು ಕೊರೊನಾ ಸಂದರ್ಭದಲ್ಲಿ 144 ದಿನಗಳ ಕಾಲ ಮನೆಯಲ್ಲಿಯೇ ಕಳೆದಿದ್ದರು. ಆದರೆ, ಚುನಾವಣಾ ವೇಳೆಯಲ್ಲಿ  ಮಾತ್ರ ಅವರು ತಮ್ಮ ಮನೆಯಿಂದ ಹೊರ ಬಂದಿದ್ದಾರೆ ಎಂದು ಆಕ್ರೊಶ ಹೊರಹಾಕಿದ್ದಾರೆ.

ಬಿಹಾರದ ವಿಧಾನಸಭೆಗೆ ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ. ನಿತೀಶ್​ ಕುಮಾರ್​ ನೇತೃತ್ವದ ಎನ್​ಡಿಎ ಮೈತ್ರಿಕೂಟಕ್ಕೆ ಆರ್​​ಜೆಡಿ ನೇತೃತ್ವದ ಮೈತ್ರಿಕೂಟ ಈ ಭಾರಿ ಪ್ರಬಲ ಪೈಪೋಟಿ ಒಡ್ಡುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ.


ಇದನ್ನೂ ಓದಿ:  ಬಿಹಾರ: ನಿಯಮಗಳ ಉಲ್ಲಂಘನೆ, ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...